ದಿನದ ಸುದ್ದಿ
ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_suddidina-1.jpg)
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪ್ಲೊಮಾ ಕೋರ್ಸ್ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷದೊಳಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಜೂನ್ 5 ರಿಂದ ರಂಗಾಯಣದ ವೆಬ್ ಸೈಟ್ https://rangayanamysore.karnataka.gov.in/enನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ. ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 180/-ಗಳು (ರಂಗಕೈಪಿಡಿ ಶುಲ್ಕ ರೂ.30/- ಒಳಗೊಂಡಂತೆ) ಡಿ.ಡಿ.ಯನ್ನು ನಿರ್ದೇಶಕರು, ರಂಗಾಯಣ, ಮೈಸೂರು (ಡೆಪ್ಯೂಟಿ ಡೈರೆಕ್ಟರ್ ರಂಗಾಯಣ ಮೈಸೂರು ) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 20 ರೊಳಗಾಗಿ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2512639, 9148827720 ನ್ನು ಸಂಪರ್ಕಿಸಲು ವೃತ್ತಿ ರಂಗಭೂಮಿ ರಂಗಾಯಣದ ವಿಶೇಷಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
![](https://suddidina.com/wp-content/uploads/2024/06/actor_darshan_suddidina_arrested.jpg)
ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ
![](https://suddidina.com/wp-content/uploads/2024/06/kamalahampana_suddidina_siddaramaiah.jpg)
ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು ಅಂತಿಮನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದೆ.
ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ.
ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48… pic.twitter.com/bCsMRaY2r6— Siddaramaiah (@siddaramaiah) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
![](https://suddidina.com/wp-content/uploads/2024/06/HD_Kumaraswamy_suddidina_jds.jpg)
ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.
ಬೆಂಗಳೂರು ನಗರದಲ್ಲಿ ನಡೆದ ಕೇಂದ್ರ ಸರಕಾರದ ನೂತನ ಸಚಿವರು ಹಾಗೂ NDA ಸಂಸದರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು.@JanataDal_S @BJP4Karnataka ನಾಯಕರು, ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಹಾಜರಿದ್ದ ಈ ಸಭೆ ನನಗೆ ಬಹಳಷ್ಟು ಸಂತಸ ಉಂಟು ಮಾಡಿತು. @BJP4India ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ… pic.twitter.com/D9BLMySVc1
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ಅಂತರಂಗ7 days ago
ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು
-
ದಿನದ ಸುದ್ದಿ5 days ago
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
-
ದಿನದ ಸುದ್ದಿ3 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ3 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ7 days ago
ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ
-
ದಿನದ ಸುದ್ದಿ5 days ago
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
-
ದಿನದ ಸುದ್ದಿ6 days ago
ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ
-
ದಿನದ ಸುದ್ದಿ5 days ago
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ