ದಿನದ ಸುದ್ದಿ

ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ; ಸಿಎಂ ಕುಮಾರಸ್ವಾಮಿ ಪ್ರಕಟ

Published

on

ಸುದ್ದಿದಿನ ದಾವಣಗೆರೆ: 2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ತಿಳಿಸಿದರು.

ಅಕ್ಟೋಬರ್ ೨ರಂದು ನಡೆಯುವ ಗಾಂಧೀ ಜಯಂತಿ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧೀವಾದಿಗಳಾದ ಎಸ್.ಎನ್. ಸುಬ್ಬರಾವ್, ಹೋ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಎಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.

Trending

Exit mobile version