ದಿನದ ಸುದ್ದಿ

ಅಪ್ರಾಪ್ತ ಮಗಳನ್ನು ಅತ್ಯಾಚಾರಗೈದ ತಂದೆ

Published

on

ಸುದ್ದಿದಿನ,ಲಕ್ನೋ: ತಂದೆಯೇ ತನ್ನ ಅಪ್ರಾಪ್ತ ಮಗಳನ್ನು ಅತ್ಯಾಚಾರಗೈದಿರುವ ಅಮಾನವೀಯ ಘಟನೆ ನೊಯಿಡಾದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮದ್ಯದ ನಶೆಯಲ್ಲಿದ್ದ ತಂದೆ ಈ ಕೃತ್ಯ ಎಸಗಿದ್ದಾನೆ.

ಮರುದಿನ ಮಗಳು ಎಲ್ಲ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಪತಿಯ ನೀಚ ಕೃತ್ಯ ತಿಳಿಯುತ್ತಲೇ ತಾಯಿ ಮಗಳನ್ನು ಕರೆದುಕೊಂಡು ಹೋಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version