Connect with us

ಸಿನಿ ಸುದ್ದಿ

ಮೆಗಾಸ್ಟಾರ್ ಚಿರಂಜೀವಿ ಸೊಸೆ ಉಪಾಸನಾ ಹೊಸ ಸಾಹಸ; URLife.co.in. ವೆಬ್​ಸೈಟ್​ಗೆ ಅತಿಥಿ ಸಂಪಾದಕಿಯಾದ ರಶ್ಮಿಕಾ ಮಂದಣ್ಣ

Published

on

ಸುದ್ದಿದಿನ, ಹೈದರಾಬಾದ್: ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ, ರಾಮ್​ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೊನಿಡೇಲಾ ಅವರೀಗ ಆನ್​ಲೈನ್​ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್​ನಲ್ಲಿರುವ ಕನ್ನಡತಿ, ಸೌತ್ ಸೆನ್ಸೆಷನಲ್ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.

ಆರೋಗ್ಯ, ಲೈಫ್​ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್​ಲೈಫ್​ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife.co.in. ಅನ್ನೋ ನೂತನ ವೆಬ್​ಸೈಟ್​ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ, URLife.co.in. ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಣಿತರು, ವೈದ್ಯರು ಸದ್ಯದ ಲೈಫ್​​ಸ್ಟೈಲ್, ತಂತ್ರಜ್ಷಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಓದುಗರಿಗೆ ಅತ್ಯುತ್ತಮವಾದ ಡಯಟ್​ ಟಿಪ್ಸ್, ನುರಿತವರಿಂದ ಉಪಯುಕ್ತ ಮಾಹಿತಿ, ಉಚಿತ ತರಗತಿಗಳು, ವಿಡಿಯೋ ಮಾಹಿತಿ, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ URLife.co.in. ನಲ್ಲಿ ಲಭ್ಯವಾಗಲಿದೆ.

ಈ ವಿಶೇಷಗಳ ಗುಚ್ಛದ URLife.co.in. ಗೆ ಈ ಸಲದ ಗೆಸ್ಟ್​ ಎಡಿಟರ್​ ಆಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಅವರನ್ನೇ ಆಯ್ದುಕೊಳ್ಳುವುದಕ್ಕೆ ಒಂದಷ್ಟು ಅಂಶಗಳನ್ನು ಸ್ವತಃ ಉಪಾಸನಾ ಹೇಳಿಕೊಂಡಿದ್ದಾರೆ. ರಶ್ಮಿಕಾ ಸದು ನಗುಮೊಗದ ಮತ್ತು ಪಾಸಿಟಿವ್​ ವೈಬ್​ಅನ್ನು ತನ್ನೊಳಗೆ ಇಟ್ಟುಕೊಂಡಿರುವ ನಟಿ. ಕೋಟ್ಯಂತರ ಯುವ ಪೀಳಿಗೆಯ ನೆಚ್ಚಿನ ನಟಿಯಾಗಿ ಗುರುತಿಸಿಕೊಳ್ಳುವುದರ ಜತೆಗೆ ನಗುವಿನ ಮೂಲಕವೇ ಆರೋಗ್ಯಕರ ಸಂದೇಶವನ್ನು ನೀಡುತ್ತಿದ್ದಾರೆ. ಅದು URLife.co.in. ನಲ್ಲಿಯೂ ಮುಂದುವರಿಯಲಿದೆ ಎಂಬುದು ಉಪಾಸನಾ ಮಾತು.

ಸೋಷಿಯಲ್ ಮೀಡಿಯಾದಲ್ಲಿ 10 ಮಿಲಿಯನ್​ಗೂ ಅಧಿಕ ಹಿಂಬಾಲಕರನ್ನು ಹೊಂದಿರುವ ರಶ್ಮಿಕಾ, ಸದ್ಯ ಭಾರತೀಯ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು. ಅದೆಷ್ಟೋ ಯುವಕ ಯುವತಿಯರ ಹಾಟ್ ಫೇವರಿಟ್ ನಟಿಯಾಗಿದ್ದಾರೆ.

ಸೇವಿಸುವ ಆಹಾರ ಮತ್ತು ವ್ಯಾಯಾಮ, ಯೋಗದ ಬಗ್ಗೆಯೂ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿರುತ್ತಾರೆ. ಇದೀಗ ರಶ್ಮಿಕಾ ಅವರ ಲೈಫ್​ಸ್ಟೈಲ್ ಬಗ್ಗೆ URife ಮಾಹಿತಿ ಬಿಚ್ಚಿಡಲಿದೆ. ಅವರ ಆರೋಗ್ಯಕರ ಜೀವನದ ಗುಟ್ಟನ್ನು ಓದುಗರಿಗೆ ಈ ಮೂಲಕ ತಲುಪಿಸಲಿದೆ. ಮಾನಸಿಕ ಆರೋಗ್ಯದ ಬಗ್ಗೆಯೂ ಇಲ್ಲಿ ಮಾಹಿತಿ ಇರಲಿದೆ.

ಭಾರತೀಯ ಕಾರ್ಪೊರೇಟ್ ವಲಯದಲ್ಲಿ URLife.co.in 14 ಮಿಲಿಯನ್ ಗೂ ಅಧಿಕ ಓದುಗರನ್ನು ಒಳಗೊಂಡ ಭಾರತದ ಅತಿದೊಡ್ಡ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ತಜ್ಞರ ಸಲಹೆ, ಅತ್ಯಾವಶ್ಯಕ ಸಂಪಾದಕೀಯ ವಿಷಯ, ವಿವರವಾದ ಮಾಹಿತಿಯನ್ನು ಒದಗಿಸುತ್ತಿದೆ. ಭಾರತದ ಕಿರಿಯ ಮತ್ತು ಅತ್ಯಂತ ಕ್ರಿಯಾತ್ಮಕ ಯೋಗಕ್ಷೇಮ ಮೇಲ್ವಿಚಾರಕರಾದ ಉಪಾಸನ ಕೊನಿಡೆಲಾ ಅವರ ಮಾರ್ಗದರ್ಶನದಲ್ಲಿ URLife.co.in ಅಭಿವೃದ್ಧಿಪಡಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending