ದಿನದ ಸುದ್ದಿ

ಜೂನ್ ತಿಂಗಳ ಪಡಿತರ ಧಾನ್ಯ ಹಂಚಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, ರಾಗಿ 2 ಕೆ.ಜಿ ಉಚಿತವಾಗಿ ವಿತರಿಸಲಾಗುತ್ತದೆ.

ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version