ದಿನದ ಸುದ್ದಿ
90 ವರ್ಷದ ಪದ್ಮಶ್ರೀ ಪುರಸ್ಕೃತ ರಾವತ್ ಅವರನ್ನು ಸರ್ಕಾರಿ ನಿವಾಸದಿಂದ ಹೊರ ಹಾಕಿದ ಕೇಂದ್ರ
ಸುದ್ದಿದಿನ ಡೆಸ್ಕ್ : ಸರ್ಕಾರಿ ನಿವಾಸಗಳಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ 90 ವರ್ಷದ ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯಗಾರ ಗುರು ಮಾಯಾಧರ್ ರಾವತ್ ಅವರನ್ನು ಕೇಂದ್ರ ಸರ್ಕಾರವು ಮನೆಯಿಂದ ಹೊರಹಾಕಿದೆ.
ಸರ್ಕಾರದ ನಿವಾಸಗಳಲ್ಲಿ ಇವರಂತೆಯೇ ವಾಸವಾಗಿದ್ದ ಎಂಟು ಮಂದಿ ಪ್ರಖ್ಯಾತ ಕಲಾವಿದರಿಗೆ ಮನೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಫೆಬ್ರವರಿಯೊಳಗೆ ಆದೇಶ ಪಾಲನೆ ಮಾಡದಿದ್ದಲ್ಲಿ ಕಲಾವಿದರ ವಿಚಾರವಾಗಿ ಮುಕ್ತ ಕ್ರಮಕೈಗೊಳ್ಳಲು ಕೇಂದ್ರಕ್ಕೆ ಅಧಿಕಾರವಿದೆ ಎಂದು ಈ ಹಿಂದೆ ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243