ದಿನದ ಸುದ್ದಿ
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
- ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ: ಬಟ್ಟಲು ಕಣ್ಣಿನ ಚೆಲುವೆ
- ಮ್ಯಾಂಚೆಸ್ಟರ್ ಬೆಡಗಿ ಸಿಕ್ತು ಬಿಗ್ ಆಫರ್
ವಿಶೇಷ ವರದಿ :ಈಶ್ವರ್ ಸಿರಿಗೇರಿ
ಸುದ್ದಿದಿನ ಡೆಸ್ಕ್ : ಮಾತೃ ಆಸೆ ಕೊನೆಗೂ ನನಸು ಮಾಡಿದ ಮ್ಯಾಂಚೆಸ್ಟರ್ ಹುಡುಗಿ ಈ ಸಿನಿ ಪಯಣವೇ ಒಂದು ರೀತಿಯ ನಿಂತ ನೀರಲ್ಲ ಎಂಬ ಸಾಕ್ಷಿಗೆ ಮೆಚ್ಚುಗೆ ಪಾತ್ರರಾದ ಬಿಂದುಶ್ರೀ ಅವರು ನೋಡಿದ ಕೂಡಲೇ ಪ್ರಸಿದ್ಧಿ ಎಂಬ ಮಾತು ಸುಳ್ಳಲ್ಲ. ಕಲರ್ ಫುಲ್ ಪಯಣದಲ್ಲಿ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಯಶಸ್ಸಿಯಾಗಿ ತಮ್ಮ ಪಾತ್ರವನ್ನು ನಿಭಾಯಿಸಿದ ಈ ಬಟ್ಟಲು ಕಣ್ಣಿನ ಚೆಲುವೆ ಮ್ಯಾಂಚೆಸ್ಟರ್ ಸ್ಟಾರ್ ಬೆಡಗಿಯಾಗಿ ತಮ್ಮದೇ ಆದ ನೆಲೆಗೆ ಸಾಕ್ಷಿಯಾಗಿದ್ದಾರೆ. ಅದು ಏನೇ ಆಗಲಿ ಬಾಲ್ಯದಲ್ಲಿ ಸಿಕ್ಕ ಹಲವಾರು ಅವಕಾಶಗಳನ್ನು ಬಹಳ ಅದ್ಭತವಾಗಿ ಕಲರ್ ಫುಲ್ ಪ್ರತಿಭೆಗೆ ಅದರಲ್ಲೂ ಕನ್ನಡದಲ್ಲಿ ಮಿಚ್ಚಿದ್ದು ಕನ್ನಡಿಗರ ಹೆಮ್ಮೆ.
ಪ್ಯಾಶನ್ ನಿಂದ ನಟನಾ ವೃತ್ತಿಗೆ ಪಯಣ
ಪಕ್ಕ ಹಳಿ ಸೊಗಡಿನ ಚಿತ್ರಕ್ಕೆ ಸಿಕ್ತು ಇಷ್ಟು ದಿನಗಳ ನಂತರ ಅದ್ಭತ ಆಫರ್‌ಗಳು, ಈ ಸಾಲುಗಳ ಯಶಸ್ಸು ಬೆನ್ನಿಗೆ ಇದ್ದರು ಸಹ ಒಳ್ಳೆಯ ಚಿತ್ರಕಥೆಗೆ ಏಳಿ ಮಾಡಿಸಿದ ಈ ಸ್ಪೂರಧ್ರೂಪಿ ಚೆಲುವೆ. ಇನ್ನೂ ಅನೇಕ ಪ್ರತಿಭೆಗಳು ಕನ್ನಡದಲ್ಲಿ ಬಂದು ಹೋಗಿದ್ದು ಇತಿಹಾಸವೇ ಆದರೂ ಈ ಸಾಲಿಗೆ ಬಿಂದುಶ್ರೀ ಎಂಬ ನವ ಕಲರ್ ಫುಲ್‌ಗೆ ಹಾಗೂ ಹೊಸ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಒಳ್ಳೆಯ ಪಾತ್ರ, ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡಲು ತುದಿಗಾಲ ಮೇಲೆ ವೇಟಿಂಗ್ ಅಂತ ಹೇಳಬಹುದು.
ಮ್ಯಾಂಚೆಸ್ಟರ್ ಬೆಡಗಿಗೆ ಸಿನಿ ಲೋಕದಲ್ಲಿ ಸಂಸ್ಕೃತಿಯೇ ಬಿಂಬ
ಬಿಂದುಶ್ರೀ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಹುಡುಗಿ. ಸಿನಿಮಾರಂಗ ಹೊಸದೇನಲ್ಲ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದವರು. “ಶ್ರೀರಸ್ತು ಶುಭಮಸ್ತು”, ”ಶಿವಪ್ಪ ನಾಯಕ”,”ಪ್ರೀತ್ಸೋದ್ ತಪ್ಪಾ” ಸೇರಿದಂತೆ ಅನೇಕ ರೀತಿಯ ಸುಮಾರು ಮೂವತ್ತು ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು ಸುಳ್ಳಲ್ಲ. ಬೆಳ್ಳಿತೆರೆಯ ಜತೆಗೆ ಕಿರುತೆರೆಯಲ್ಲೂ ಇವರ ಪಯಣ ಅದ್ಭತ ಅಂತ ಹೇಳಬಹುದು. ಇನ್ನೋಂದು ವಿಚಾರ “ಕಾವ್ಯಾಂಜಲಿ”, “ಗೌತಮಿ” ಮೆಗಾ ಧಾರಾವಾಹಿಗಳಲ್ಲೂ ಬಣ ಹಚ್ಚಿದ್ದಾರೆ. ಬಣದ ಜತೆಗೆ ಅಧ್ಯಯನ ಕೂಡ ಮುಖ್ಯ ಎಂಬ ಕಾರಣಕ್ಕೆ ನಟನೆಯನ್ನು ಮೊಟಕುಗೊಳಿಸಿ, ಓದಿನತ್ತ ಗಮನಹರಿಸಿದ್ದರು ಬಿಂದುಶ್ರೀ. ಇನ್ನು, ಇವರ ತಂದೆ ಸಿವಿಲ್ ಎಂಜಿನಿಯರ್. ಅವರ ತಂದೆ ಮಾತಿನ ಪ್ರಕಾರ, ಪದವಿ ಪಡೆದರು. ಅದರಲ್ಲೂ ಅವರದು ಪದವಿಯಲ್ಲಿ ಹದಿನಾರನೇ ರ‍್ಯಾಂಕ್ ಎಂಬುದು ವಿಶೇಷ.
ಬಣ್ಣಕ್ಕೂಸೈ, ಟೆಕ್ಕಿಗೂ ಸೈ
ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಬಿಂದುಶ್ರೀ ಟೆಕ್ಕಿಯಾಗಿ ಮೂರು ವರ್ಷಗಳ ಸೇವೆ ಮಾಡಿದ್ದಾರೆ ಹಾಗೂ ಇವರ ತಾಯಿ ಶಾಸ್ತ್ರೀಯ ಸಂಗೀತ ಹಿನ್ನಲೆಯ ಅವರು. ಅವರ ಆಸೆಯಂತೆ ತಂದೆಯ ಮನವೊಲಿಸಿ, ಪುನಃ ನಟನೆಗೆ ರೆಡಿಯಾಗಿದ್ದಾರೆ. ಈ ಕುರಿತು ಸ್ವತಃ ಬಿಂದುಶ್ರೀ ಹೇಳುವುದಿಷ್ಟು, “ನನಗೆ ನಟನೆ ಮೇಲೆ ಆಸಕ್ತಿ ಇದೆ. ಹಾಗಂತ ಸಿಕ್ಕ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಪರೂಪ ಎಂಬಂತಹ, ಚಾಲೆಂಜಿಂಗ್ ಇರುವ, ನಮ್ಮ ಸಂಸ್ಕ್ರತಿ ಬಿಂಬಿಸುವಂತಹ ಪಾತ್ರಗಳು ಬಂದರೆ ನಾನು ನಟನೆ ಮಾಡಲು ಇಷ್ಟಪಡ್ತೀನಿ. ಯಾವುದೇ ದೊಡ್ಡ ಬ್ಯಾನರ್ ಇದ್ದರೂ, ಸರಿ, ನನಗೆ ಒಪ್ಪುವ ಮಾತ್ರ ಸೈ ಎನ್ನುವುದು. ಬೇರೆ ರೀತಿಯ ಕಥೆಗೆ ಪಾತ್ರ ಮಾಡಲಾರೆ” ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ.
ಮಹಿಷಾಸುರ ಸಿನೆಮಾವೇ ಮತ್ತೆ ಕಲರ್ ಫುಲ್ ಆಗಲು ಕಾರಣ
ಇತ್ತೀಚೆಗೆ ತೆರೆಕಂಡ ಬಹಳ ಪೌರಾಣಿಕ ಸಿನಿಮಾವಾದ ಬಿಂದುಶ್ರೀ ಅವರ ಬಾಲ್ಯದಲ್ಲಿ 30 ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಜತೆಯಲ್ಲಿ ಅದರಲ್ಲೂ ಪ್ರಮುಖ ಹಳ್ಳಿ ಹುಡುಗಿಯಾಗಿ ಮಹಿಷಾಸುರ ಚಿತ್ರದಲ್ಲಿ ನಟಿಸಿದ್ದಾರೆ.
ಎಕ್ಸ್ ಲೆಂಟ್ ಆಗಿ ನಟನೆ ಮಾಡಿದ್ದಾರೆ ಇವರ ವಿಶೇಷ. ಇವರ ಎರಡನೇ ಚಿತ್ರ “ಲಡ್ಡು” ಸಿನಿಮಾ ಕೂಡ ಇಂದು ರಾಜ್ಯಾದ್ಯಾತ ಬಿಡುಗಡೆಯಾಗಲಿದೆ ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ. ಇನ್ನೂ ಸದ್ಯದಲ್ಲೇ “ಮಿ. ಅಂಡ್ ಮಿಸಸ್ ಜಾನು” ಚಿತ್ರದಲ್ಲೂ ಬಿಂದುಶ್ರೀ ನಟಿಸುತ್ತಿದ್ದಾರೆ. ಸದ್ಯಕ್ಕೆ ಪ್ರಸ್ತುತವಾಗಿ ಬಿಂದುಶ್ರೀ ಮೂರು ಕಥೆ ಗಳನ್ನು ರೆಡಿ ಅಂಥ ಹೇಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ


