Connect with us

ದಿನದ ಸುದ್ದಿ

ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ

Published

on

  • ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ: ಬಟ್ಟಲು ಕಣ್ಣಿನ ಚೆಲುವೆ
  • ಮ್ಯಾಂಚೆಸ್ಟರ್‌ ಬೆಡಗಿ ಸಿಕ್ತು ಬಿಗ್‌ ಆಫರ್‌

ವಿಶೇಷ ವರದಿ :ಈಶ್ವರ್‌ ಸಿರಿಗೇರಿ

ಸುದ್ದಿದಿನ ಡೆಸ್ಕ್ : ಮಾತೃ ಆಸೆ ಕೊನೆಗೂ ನನಸು ಮಾಡಿದ ಮ್ಯಾಂಚೆಸ್ಟರ್‌ ಹುಡುಗಿ ಈ ಸಿನಿ ಪಯಣವೇ ಒಂದು ರೀತಿಯ ನಿಂತ ನೀರಲ್ಲ ಎಂಬ ಸಾಕ್ಷಿಗೆ ಮೆಚ್ಚುಗೆ ಪಾತ್ರರಾದ ಬಿಂದುಶ್ರೀ ಅವರು ನೋಡಿದ ಕೂಡಲೇ ಪ್ರಸಿದ್ಧಿ ಎಂಬ ಮಾತು ಸುಳ್ಳಲ್ಲ. ಕಲರ್‌ ಫುಲ್‌ ಪಯಣದಲ್ಲಿ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಯಶಸ್ಸಿಯಾಗಿ ತಮ್ಮ ಪಾತ್ರವನ್ನು ನಿಭಾಯಿಸಿದ ಈ ಬಟ್ಟಲು ಕಣ್ಣಿನ ಚೆಲುವೆ ಮ್ಯಾಂಚೆಸ್ಟರ್‌ ಸ್ಟಾರ್‌ ಬೆಡಗಿಯಾಗಿ ತಮ್ಮದೇ ಆದ ನೆಲೆಗೆ ಸಾಕ್ಷಿಯಾಗಿದ್ದಾರೆ. ಅದು ಏನೇ ಆಗಲಿ ಬಾಲ್ಯದಲ್ಲಿ ಸಿಕ್ಕ ಹಲವಾರು ಅವಕಾಶಗಳನ್ನು ಬಹಳ ಅದ್ಭತವಾಗಿ ಕಲರ್‌ ಫುಲ್‌ ಪ್ರತಿಭೆಗೆ ಅದರಲ್ಲೂ ಕನ್ನಡದಲ್ಲಿ ಮಿಚ್ಚಿದ್ದು ಕನ್ನಡಿಗರ ಹೆಮ್ಮೆ.

ಪ್ಯಾಶನ್ ನಿಂದ ನಟನಾ ವೃತ್ತಿಗೆ ಪಯಣ

ಪಕ್ಕ ಹಳಿ ಸೊಗಡಿನ ಚಿತ್ರಕ್ಕೆ ಸಿಕ್ತು ಇಷ್ಟು ದಿನಗಳ ನಂತರ ಅದ್ಭತ ಆಫರ್‌ಗಳು, ಈ ಸಾಲುಗಳ ಯಶಸ್ಸು ಬೆನ್ನಿಗೆ ಇದ್ದರು ಸಹ ಒಳ್ಳೆಯ ಚಿತ್ರಕಥೆಗೆ ಏಳಿ ಮಾಡಿಸಿದ ಈ ಸ್ಪೂರಧ್ರೂಪಿ ಚೆಲುವೆ. ಇನ್ನೂ ಅನೇಕ ಪ್ರತಿಭೆಗಳು ಕನ್ನಡದಲ್ಲಿ ಬಂದು ಹೋಗಿದ್ದು ಇತಿಹಾಸವೇ ಆದರೂ ಈ ಸಾಲಿಗೆ ಬಿಂದುಶ್ರೀ ಎಂಬ ನವ ಕಲರ್‌ ಫುಲ್‌ಗೆ ಹಾಗೂ ಹೊಸ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಒಳ್ಳೆಯ ಪಾತ್ರ, ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡಲು ತುದಿಗಾಲ ಮೇಲೆ ವೇಟಿಂಗ್‌ ಅಂತ ಹೇಳಬಹುದು.

ಮ್ಯಾಂಚೆಸ್ಟರ್‌ ಬೆಡಗಿಗೆ ಸಿನಿ ಲೋಕದಲ್ಲಿ ಸಂಸ್ಕೃತಿಯೇ ಬಿಂಬ

ಬಿಂದುಶ್ರೀ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಹುಡುಗಿ. ಸಿನಿಮಾರಂಗ ಹೊಸದೇನಲ್ಲ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದವರು. “ಶ್ರೀರಸ್ತು ಶುಭಮಸ್ತು”, ”ಶಿವಪ್ಪ ನಾಯಕ”,”ಪ್ರೀತ್ಸೋದ್‌ ತಪ್ಪಾ” ಸೇರಿದಂತೆ ಅನೇಕ ರೀತಿಯ ಸುಮಾರು ಮೂವತ್ತು ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು ಸುಳ್ಳಲ್ಲ. ಬೆಳ್ಳಿತೆರೆಯ ಜತೆಗೆ ಕಿರುತೆರೆಯಲ್ಲೂ ಇವರ ಪಯಣ ಅದ್ಭತ ಅಂತ ಹೇಳಬಹುದು. ಇನ್ನೋಂದು ವಿಚಾರ “ಕಾವ್ಯಾಂಜಲಿ”, “ಗೌತಮಿ” ಮೆಗಾ ಧಾರಾವಾಹಿಗಳಲ್ಲೂ ಬಣ ಹಚ್ಚಿದ್ದಾರೆ. ಬಣದ ಜತೆಗೆ ಅಧ್ಯಯನ ಕೂಡ ಮುಖ್ಯ ಎಂಬ ಕಾರಣಕ್ಕೆ ನಟನೆಯನ್ನು ಮೊಟಕುಗೊಳಿಸಿ, ಓದಿನತ್ತ ಗಮನಹರಿಸಿದ್ದರು ಬಿಂದುಶ್ರೀ. ಇನ್ನು, ಇವರ ತಂದೆ ಸಿವಿಲ್‌ ಎಂಜಿನಿಯರ್.‌ ಅವರ ತಂದೆ ಮಾತಿನ ಪ್ರಕಾರ, ಪದವಿ ಪಡೆದರು. ಅದರಲ್ಲೂ ಅವರದು ಪದವಿಯಲ್ಲಿ ಹದಿನಾರನೇ ರ‍್ಯಾಂಕ್ ಎಂಬುದು ವಿಶೇಷ.

ಬಣ್ಣಕ್ಕೂಸೈ, ಟೆಕ್ಕಿಗೂ ಸೈ

ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಬಿಂದುಶ್ರೀ ಟೆಕ್ಕಿಯಾಗಿ ಮೂರು ವರ್ಷಗಳ ಸೇವೆ ಮಾಡಿದ್ದಾರೆ ಹಾಗೂ ಇವರ ತಾಯಿ ಶಾಸ್ತ್ರೀಯ ಸಂಗೀತ ಹಿನ್ನಲೆಯ ಅವರು. ಅವರ ಆಸೆಯಂತೆ ತಂದೆಯ ಮನವೊಲಿಸಿ, ಪುನಃ ನಟನೆಗೆ ರೆಡಿಯಾಗಿದ್ದಾರೆ. ಈ ಕುರಿತು ಸ್ವತಃ ಬಿಂದುಶ್ರೀ ಹೇಳುವುದಿಷ್ಟು, “ನನಗೆ ನಟನೆ ಮೇಲೆ ಆಸಕ್ತಿ ಇದೆ. ಹಾಗಂತ ಸಿಕ್ಕ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಪರೂಪ ಎಂಬಂತಹ, ಚಾಲೆಂಜಿಂಗ್‌ ಇರುವ, ನಮ್ಮ ಸಂಸ್ಕ್ರತಿ ಬಿಂಬಿಸುವಂತಹ ಪಾತ್ರಗಳು ಬಂದರೆ ನಾನು ನಟನೆ ಮಾಡಲು ಇಷ್ಟಪಡ್ತೀನಿ. ಯಾವುದೇ ದೊಡ್ಡ ಬ್ಯಾನರ್ ಇದ್ದರೂ, ಸರಿ, ನನಗೆ ಒಪ್ಪುವ ಮಾತ್ರ ಸೈ ಎನ್ನುವುದು. ಬೇರೆ ರೀತಿಯ ಕಥೆಗೆ ಪಾತ್ರ ಮಾಡಲಾರೆ” ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ.

ಮಹಿಷಾಸುರ ಸಿನೆಮಾವೇ ಮತ್ತೆ ಕಲರ್‌ ಫುಲ್‌ ಆಗಲು ಕಾರಣ

ಇತ್ತೀಚೆಗೆ ತೆರೆಕಂಡ ಬಹಳ ಪೌರಾಣಿಕ ಸಿನಿಮಾವಾದ ಬಿಂದುಶ್ರೀ ಅವರ ಬಾಲ್ಯದಲ್ಲಿ 30 ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಜತೆಯಲ್ಲಿ ಅದರಲ್ಲೂ ಪ್ರಮುಖ ಹಳ್ಳಿ ಹುಡುಗಿಯಾಗಿ ಮಹಿಷಾಸುರ ಚಿತ್ರದಲ್ಲಿ ನಟಿಸಿದ್ದಾರೆ.

ಎಕ್ಸ್‌ ಲೆಂಟ್‌ ಆಗಿ ನಟನೆ ಮಾಡಿದ್ದಾರೆ ಇವರ ವಿಶೇಷ. ಇವರ ಎರಡನೇ ಚಿತ್ರ “ಲಡ್ಡು” ಸಿನಿಮಾ ಕೂಡ ಇಂದು ರಾಜ್ಯಾದ್ಯಾತ ಬಿಡುಗಡೆಯಾಗಲಿದೆ ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ. ಇನ್ನೂ ಸದ್ಯದಲ್ಲೇ “ಮಿ. ಅಂಡ್ ಮಿಸಸ್ ಜಾನು” ಚಿತ್ರದಲ್ಲೂ ಬಿಂದುಶ್ರೀ ನಟಿಸುತ್ತಿದ್ದಾರೆ. ಸದ್ಯಕ್ಕೆ ಪ್ರಸ್ತುತವಾಗಿ ಬಿಂದುಶ್ರೀ ಮೂರು ಕಥೆ ಗಳನ್ನು ರೆಡಿ ಅಂಥ ಹೇಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending