Connect with us

ರಾಜಕೀಯ

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಕಲ ಸಿದ್ಧತೆ ; ನೂತನ ಸಚಿವರು ಯಾರ್ಯಾರು ಗೊತ್ತಾ..?

Published

on

ಸುದ್ದಿದಿನ,ಬೆಂಗಳೂರು : ಸಚಿವ ಸಂಪುಟ ಪುನಾರಚನೆ ವಿಚಾರ ಈಗಾಗಲೇ ರಾಜ್ಯಪಾಲರನ್ನ ಭೇಟಿ ಮಾಡಲು ಸಿಎಂ ಕುಮಾರಸ್ವಾಮಿ‌ ರಾಜ ಭವನಕ್ಕೆ ತೆರಳಿದ್ದಾರೆ. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಸಂಜೆ 5.20ಕ್ಕೆ ರಾಜಭವನದಲ್ಲಿ ನಡೆಯಲಿದಲಿದ್ದು, ಹೊಸದಾಗಿ ಪ್ರಮಾಣವಚನ ಇದಿಷ್ಟು ಶಾಸಕರು ಸ್ವೀಕರಿಸಲಿದ್ದಾರೆ.

  1. ಶಿವಳ್ಳಿ
  2. ಎಂಟಿಬಿ ನಾಗರಾಜ್
  3. ತುಕಾರಾಂ
  4. ಎಂ.ಬಿ.ಪಾಟೀಲ್
  5. ಪರಮೇಶ್ವರ ನಾಯಕ್
  6. ಸತೀಶ್ ಜಾರಕಿಹೊಳಿ
  7. ತಿಮ್ಮಾಪುರ
  8. ರಹೀಂಖಾನ್

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಹಿನ್ನೆಲೆ ರಾಜಭವನದಲ್ಲಿ 422 ಪೊಲೀಸರ ಅಧಿಕಾರಿಗಳ ನಿಯೋಜನೆ ಮಾಡಿದ್ದು ರಾಜಭವನ,ಬಸವೇಶ್ವರ ವೃತ್ತ ಸೇರಿದಂತೆ 18 ಸ್ಥಳಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. 2 ಎಸಿಪಿ,13 ಇನ್ಸ್ ಪೆಕ್ಟರ್ ಗಳು,62ಪಿಎಸ್ ಐಗಳು,195 ಕಾನ್ಸ್ ಟೇಬಲ್‌ಗಳನ್ನು ನಿಯೋಜಿಸಲಾಗಿದೆ.

ಇನ್ನೂ ಕೆಲವೇ ನಿಮಿಷಗಳಲ್ಲಿ ಡಿಜಿ‌ ನೀಲಮಣಿರಾಜು ಹಾಗು ಬೆಂಗಳೂರು‌ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ರಿಂದ ಭದ್ರತೆ ಪರಿಶೀಲನೆ ನಡೆಯಲಿದ್ದು, ಪ್ರಮಾಣವಚನ ಕಾರ್ಯಕ್ರಮ ಕ್ಕೆ ನೀಡಲಾಗಿರುವ ಭದ್ರತೆ ಪರಿಶೀಲನೆ ನಡೆಸಲಿದ್ದಾರೆ ನೀಲಮಣಿರಾಜು.

ರಾಜಭವನ ಬಳಿ ಟೈಟ್ ಸೆಕ್ಯುರಿಟಿ

ಈಗಾಗಲೇ ರಾಜಭವನಕ್ಕೆ ಆಗಮಿಸಲಿರುವ ಸಿಎಂ ಕುಮಾರಸ್ವಾಮಿ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಜೊತೆ ನೂತನ ಸಚಿವರ ಪಟ್ಟಿಯೊಂದಿಗೆ ಆಗಮಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಕಾಲಾವಕಾಶ ಪಡೆದಿರುವ ಸಿಎಂ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ನಡೆಸಿದ್ದು,ಕಾರ್ಯಕ್ರಮದ ಸಿದ್ದತೆ ವೇದಿಕೆ ಅಲಂಕಾರಕ್ಕೆ11 ಗಂಟೆ ನಂತರ ಅವಕಾಶ ನೀಡಲಾಗಿದೆ. ಈ‌ ಹಿನ್ನೆಲೆ ಅಗತ್ಯ ಸಿದ್ದತೆ ನಡೆಸಲು ಅನುಮತಿ ಕೇಳಿದ್ದಾರೆ ವಿಧಾನಸೌಧದ ಅಧಿಕಾರಿಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತೆ ಮಂಜುಶ್ರೀ ಸೇರಿ 6 ಜನ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಐ.ಡಿ.ಪಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಆಯಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳೇ ನಿಯಮಾನುಸಾರ ಖರೀದಿ ವ್ಯವಹಾರ ನಡೆಸಬೇಕೆಂಬ ನಿಯಮವಿದ್ದರೂ, ಕಮೀಷನ್ ಆಸೆಗಾಗಿ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಛೇರಿಯ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳ ಅಧಿಕಾರವನ್ನು ಕಿತ್ತುಕೊಂಡು 2024-25ನೇ ಸಾಲಿನಲ್ಲಿ ರೂ. 2,59,89,250/-ಗಳ ಖರೀದಿ ಪ್ರಕ್ರಿಯೆಗೆ ಮುಂದಾಗಿರುತ್ತಾರೆ. ಐ.ಡಿ.ಪಿ ಅನುದಾನದಲ್ಲಿ 19 ಕಾಲೇಜುಗಳಿಗೆ ಅಗತ್ಯವಿರುವ ಡೆಸ್ಕ್ಟಾಪ್, ಲ್ಯಾಪ್‌ಟಾಪ್, ಯು.ಪಿ.ಎಸ್ ಮತ್ತು ಪ್ರಿಂಟರ್‌ಗಳ ಖರೀದಿಯಲ್ಲಿ ಸಾಕಷ್ಟು ಲೋಪಗಳಿದ್ದು, ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ನಡೆಸದೆ ಇರುವುದು, ಖರೀದಿಸಿದ ಸಾಮಾಗ್ರಿಗಳಿಗೆ ಮಾರುಕಟ್ಟೆಗಿಂತ ಅಧಿಕ ಬೆಲೆ ನೀಡಿರುವುದು ಸೇರಿ ಹಲವಾರು ಅಂಶಗಳನ್ನು ಗುರುತಿಸಿ ಹೆಚ್ಚಿನ ತನಿಖೆ ನಡೆಸುವಂತೆ ದೂರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇಷ್ಟೆ ಅಲ್ಲದೆ ಇದೇ ಸಮಯದಲ್ಲಿ ರೂಸಾ ಅನುದಾನದ ಅಡಿಯಲ್ಲಿ ನಡೆದ ಖರೀದಿ ವ್ಯವಹಾರ ಹಾಗೂ ಕಾಲೇಜುಗಳಿಗೆ ವಿಜ್ಞಾನ ಪರಿಕರಗಳ ಖರೀದಿ ವ್ಯವಹಾರವನ್ನು ನಡೆಸಿದ್ದು, ಇದರಲ್ಲಿಯೂ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಈ ಎಲ್ಲಾ ಖರೀದಿ ವ್ಯವಹಾರಗಳಲ್ಲಿ ಭಾಗಿಯಾಗಿರುವ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಾ.ಶೋಭಾ ಜಿ, ನಿರ್ದೇಶಕರು. ಶ್ರೀ ಚೇತನ್ ಕುಮಾರ್ ಎನ್, ಲೆಕ್ಕಾಧಿಕಾರಿಗಳು, ಡಾ.ನಂದಿತಾ ಪ್ರಸಾದ್, ಮಾಹಿತಿ ತಂತ್ರಜ್ಞಾನ ಅಧಿಕಾರಿಗಳು. ಡಾ.ಶ್ರೀಕಾಂತ್ ಆರ್, ಸಮನ್ವಯಾಧಿಕಾರಿಗಳು. ಡಾ.ಸುಮ ಎಸ್, ರೂಸಾ ಸಮನ್ವಯಾಧಿಕಾರಿಗಳು ಇವರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿಸಿದ್ದಾರೆ.

2023ನೇ ಸಾಲಿನಲ್ಲಿ ಅಂದಾಜು 23 ಕೋಟಿ ರೂಪಾಯಿಗಳ ಖರೀದಿ ವ್ಯವಹಾರವನ್ನು ಕೇಂದ್ರ ಕಛೇರಿಯಿಂದ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿಯನ್ನು ನೀಡದ ಕಾರಣ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೂರು ನೀಡಿ, ಇಲಾಖಾ ತನಿಖೆ ನಡೆಸುವಂತೆ ಕೋರಲಾಗಿದ್ದು, ನಿಗಧಿತ ಅವಧಿಯಲ್ಲಿ ಯಾವುದೇ ಪ್ರತ್ಯುತ್ತರ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಅಂದಾಜು 23 ಕೋಟಿ ಮೊತ್ತದ ಖರೀದಿ ವ್ಯವಹಾರವನ್ನು ತನಿಖೆ ನಡೆಸುವಂತೆ ದೂರು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 hour ago

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ...

ಅಂಕಣ2 hours ago

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ...

ದಿನದ ಸುದ್ದಿ1 day ago

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ...

ದಿನದ ಸುದ್ದಿ1 day ago

ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ ಮಹಿಳಾ ಕಾಲೇಜು ಹಾಗೂ ಹಳೆಬಿಸಲೇರಿ ಗ್ರಾಮದ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಹಳೆಬಿಸಲೇರಿ ಗ್ರಾಮದಲ್ಲಿ ಆಯೋಜಿಸಲಾದ 5ನೇ ದಿನದ ಸಂಜೆ...

ದಿನದ ಸುದ್ದಿ1 day ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ...

ದಿನದ ಸುದ್ದಿ1 day ago

2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ4 days ago

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ...

ದಿನದ ಸುದ್ದಿ5 days ago

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು...

ಕ್ರೀಡೆ5 days ago

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ...

ದಿನದ ಸುದ್ದಿ5 days ago

ಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ

ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಭರತ್ ಕುಮಾರ್ ಅವರು ಅಣಬೆಯ ಹೊಸ ಮೂರು ಶೀಲಿಂದ್ರ ಜಾತಿಗಳನ್ನು ಪತ್ತೆ ಹಚ್ಚಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಕರ್ನಾಟಕದ...

Trending