ದಿನದ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ : ಸಚಿವ ಬಿ. ಸಿ. ನಾಗೇಶ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : 2022 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇದೇ ತಿಂಗಳ 22 ರಿಂದ ಮೇ ತಿಂಗಳ 18 ರವರೆಗೆ ನಡೆಯಲಿದ್ದು, ಪರೀಕ್ಷೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 5 ಸಾವಿರದ 241 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 48 ಸಾವಿರದ 255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 3 ಲಕ್ಷದ 46ಸಾವಿರದ 936ಬಾಲಕರು ಹಾಗೂ3 ಲಕ್ಷದ 37 ಸಾವಿರದ 319 ಬಾಲಕಿಯರು ಇದ್ದಾರೆ. ಒಟ್ಟು 1 ಸಾವಿರದ 76ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪ್ರವೇಶ ಪತ್ರ ತೋರಿಸಿ ನಗರ, ಹೊರವಲಯ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೋವಿಡ್-19ಮಾರ್ಗಸೂಚಿಗಳ ಪಾಲನೆ ಕಡ್ಡಾಯವಾಗಿದೆ. ಒಟ್ಟು 81 ಮೌಲ್ಯಮಾಪನ ಕೇಂದ್ರಗಳನ್ನು ರಾಜ್ಯಾದ್ಯಂತ ನಿಗದಿಪಡಿಸಲಾಗಿದೆ, ಹೊಸದಾಗಿ ತುಮಕೂರು, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ದಿನವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು, ಪಿಯುಸಿ ಪರೀಕ್ಷೆಗಾಗಿ ಸಹಾಯವಾಣಿ080-23080864 ಸ್ಥಾಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version