Connect with us

ಸಿನಿ ಸುದ್ದಿ

ರೆಬೆಲ್ ಸ್ಟಾರ್ ಹುಟ್ಟು ಹಬ್ಬಕ್ಕೆ’ ಭಟ್ಟರ ಸ್ಪೆಷಲ್ ಸಾಂಗ್’..!

Published

on

ಸುದ್ದಿದಿನ ಡೆಸ್ಕ್ : ರೆಬೆಲ್ ಸ್ಟಾರ್ ಅಂಬಿಗೆ ಇಂದು ಜನ್ಮ ದಿನದ ಸಂಭ್ರಮ. 65 ವರ್ಷ ಪೂರೈಸಿ 66ನೇ ವಸಂತಕ್ಕೆ ಕಾಲಿಟ್ಟ ರೆಬೆಲ್ ಸ್ಟಾರ್ ಅಂಬರೀಶ್.

ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ಜೊತೆ ಜೆಪಿ ನಗರ ನಿವಾಸದಲ್ಲಿ ತಡರಾತ್ರಿಯಿಂದ ಸಂಭ್ರಮ ಸಡಗರ ಮನೆಮಾಡಿದೆ.

ಈ ಸಂಭ್ರಮಕ್ಕೆ ನಿರ್ದೇಶಕ ಯೋಗರಾಜ್ ಭಟ್
ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬಕ್ಕಾಗಿ ಸ್ಪೆಶಲ್ ಸಾಂಗ್ ನಲ್ಲಿ ಅಂಬರೀಶ್ ಅವರ ಗುಣಗಾನ ಮಾಡಲಾಗಿದೆ. ಅಂದಹಾಗೆ ಈ ಹಾಡಿನ ಕೆಲವು ಸಾಲುಗಳು ಹೀಗಿವೆ..

ಅಂಬರೀಶಣ್ಣಂಗೆ ಇನ್ನೂ ವಯಸ್ಸು ಹದಿನಾರು
ಕೋಟಿಕಾಲ ಬಾಳಲಿ’ ಅಂತ ಶುಭ ಹಾರೈಸಿರೋ ಗೀತೆಯುದು.

ಸುದ್ದಿದಿನ.ಕಾಂ|ವಾಟ್ಸಾಪ್ |9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 minutes ago

ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನಡೆಸ್ಕ್:ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಇಂದು...

ದಿನದ ಸುದ್ದಿ8 hours ago

ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ

ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ...

ದಿನದ ಸುದ್ದಿ9 hours ago

ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್

ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.‌ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್...

ದಿನದ ಸುದ್ದಿ9 hours ago

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿಸಿದ ಅಬಕಾರಿ ಸುಂಕವನ್ನು ರದ್ದುಗೊಳಿಸಿ : ಯುವ ಕಾಂಗ್ರೆಸ್ ಅಗ್ರಹ

ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು,...

ದಿನದ ಸುದ್ದಿ1 day ago

ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್‍ ಸಮುದಾಯ ಭವನ ಶಂಕುಸ್ಥಾಪನೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ...

ದಿನದ ಸುದ್ದಿ1 day ago

ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ...

ದಿನದ ಸುದ್ದಿ1 day ago

ಕೊಂಕಣ ರೈಲ್ವೆ, ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ ಮತ್ತು ಭಾರತೀಯ ರೈಲ್ವೆ ವಿಲೀನ ಪ್ರಯತ್ನ ಪ್ರಗತಿಯಲ್ಲಿ

ಸುದ್ದಿದಿನಡೆಸ್ಕ್:ಕೊಂಕಣ ರೈಲ್ವೆ ಹಾಗೂ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ – HMRDCL ಅನ್ನು ಭಾರತೀಯ ರೈಲ್ವೆ ಜೊತೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಈಗಾಗಲೇ ಮಾತುಕತೆ...

ದಿನದ ಸುದ್ದಿ1 day ago

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ : ಡಿಸಿಎಂ ಡಿ.ಕೆ. ಶಿವಕುಮಾರ್

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ದಿನದ ಸುದ್ದಿ1 day ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’

ಸುದ್ದಿದಿನ,ದಾವಣಗೆರೆ: ಇಂದಿನ ಆಧುನಿಕ ಸಂಸ್ಕೃತಿಯ ನಡುವೆ ನಮ್ಮ ಮೂಲ ಸಂಸ್ಕೃತಿ ಜನಪದವು ಸರಿ ಹೋಗುತ್ತದೆ ಇದು ಉಳಿದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ ಉಳಿಸುವ ಕಾರ್ಯ ಮಹತ್ತರವಾದದ್ದು ಆ...

ದಿನದ ಸುದ್ದಿ1 day ago

ದಾವಣಗೆರೆ | ಮಕ್ಕಳ ಬೇಸಿಗೆ ರಜೆಗೆ ಶುಭ ಕೋರಿದ ತಿಂಗಳ ಅಂಗಳ

ಸುದ್ದಿದಿನಡೆಸ್ಕ್:ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗ ಹಾಗೂ V 1 ಕಾವ್ಯಧಾರೆಯ ಸಹಯೋಗದೊಂದಿಗೆ ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಏಪ್ರಿಲ್ 10 ರ ಗುರುವಾರ ಮಧ್ಯಾಹ್ನ...

Trending