Connect with us

ದಿನದ ಸುದ್ದಿ

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಳ್ಳಾರಿ:ಸಂಡೂರು ತಾಲ್ಲೂಕಿನ ವಡ್ಡಿನಕಟ್ಟೆ ಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಿರುವ ವಿಜ್ಞಾನ ವಿಭಾಗಕ್ಕೆ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ಪ್ರಸ್ತಕ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ.

ಹುದ್ದೆಗಳು

ಕನ್ನಡ ಉಪನ್ಯಾಸಕರು-01, ಆಂಗ್ಲ ಉಪನ್ಯಾಸಕರು-01, ಭೌತಶಾಸ್ತç ಉಪನ್ಯಾಸಕರು-01, ರಸಾಯನಶಾಸ್ತç-01, ಗಣಿತ-01, ಜೀವಶಾಸ್ತç-01.

ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು. ಅತಿಥಿ ಉಪನ್ಯಾಸಕರಿಗೆ ಮಾಹೆಯಾನ ರೂ.18,150/- ಗೌರವಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಪ್ರಾಂಶುಪಾಲರು, ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆ (ಪ.ಪಂ)-485, ವಡ್ಡಿನಕಟ್ಟೆ, ಸಂಡೂರು (ತಾ), ಬಳ್ಳಾರಿ (ಜಿ) ಇಲ್ಲಿಗೆ ಆಗಸ್ಟ್ 20 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಾಲೆಯ ಇ-ಮೇಲ್ ವಿಳಾಸ: kreiskrcrs0485@gmail.com ಅಥವಾ ಮೊ.9611279510 ಗೆ ಸಂಪರ್ಕಿಸಬಹುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

Published

on

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ (ಕ್ರ್ಸ್ರೈಸ್)ಗಳಲ್ಲಿನ ಪ್ರಾಂಶುಪಾಲರು ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಇರುವ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಿ ಅರ್ಜಿ ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ವಸತಿ ಶಾಲೆಗಳಲ್ಲಿ (ಕ್ರೈಸ್) ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಆವರಣದಲ್ಲಿ ವಾಸ್ತವ್ಯವಿರಲು ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದ್ದು, ಪ್ರತಿಭಾನ್ವಿತ ಮಕ್ಕಳ ಕಲಿಕೆ ಮತ್ತು ಪಾಲನೆಗೆ ಸರ್ಕಾರ ಅನುಕೂಲ ಮಾಡಿಕೊಡಲಾಗಿದೆ.

ಆದರೆ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ವಸತಿ ನಿಲಯದ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯವಿರದೆ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತöವ್ಯವಿರುವ ಮಾಹಿತಿಯು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ, ಹಲವಾರು ಬಾರಿ ಸರ್ಕಾರವು ಆದೇಶ ಹೊರಡಿಸಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿಯೇ ವಾಸ್ತವ್ಯವಿದ್ದು, ಮಕ್ಕಳ ಕಲಿಕೆ, ಪಾಲನೆ, ಪೋಷಣೆಗೆ ಒತ್ತು ನೀಡುವಂತೆ ಕಟ್ಟುನಿಟ್ಟಿನ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ಪಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ವಾಸ್ತವ್ಯ ಇರದೆ ಇರುವುದು ಗಮನಕ್ಕೆ ಬಂದ ಕಾರಣ ದಿನಾಂಕ: 05-07-2025 ರಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ತನಿಖೆ ನಡೆಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದರು. ಆದರೆ 3 ತಿಂಗಳು ಕಳೆದರೂ ಈ ಬಗ್ಗೆ ಯಾವುದೇ ತನಿಖೆ ನಡೆಸದೆ ನಿರ್ಲಕ್ಷö್ಯ ತೋರಿದ ಜಂಟಿ ನಿರ್ದೇಶಕ ನಾಗರಾಜ ಕೆ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುತ್ತದೆ ಎಂದು ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ವಸತಿ ಶಾಲಾ ಆವರಣದಲ್ಲಿ ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಿದ್ದರೂ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುತ್ತಾರೆ. ಇದರಿಂದ ಮಕ್ಕಳ ಶಿಕ್ಷಣ, ಪಾಲನೆ ಮತ್ತು ಪೋಷಣೆಗೆ ಅಡಚಣೆಯಾಗುತ್ತಿದೆ.

| ಡಾ.ಕೆ.ಎ.ಓಬಳೇಶ್,ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending