ದಿನದ ಸುದ್ದಿ
ಬೆಂಗಳೂರು ಮೆಟ್ರೊದಲ್ಲಿ ಉದ್ಯೋಗಾವಕಾಶ
ಸುದ್ದಿದಿನ ಡೆಸ್ಕ್: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು (ಬಿಎಂಆರ್‍ಸಿಎಲ್) ಖಾಲಿ ಇರುವ 5 ಸಹಾಯಕ ಎಂಜಿನಿಯರ್‍ಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಆಫ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಬಿಟೆಕ್/ಬಿಇ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 6ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಹತಾ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ವಿಳಾಸವನ್ನು ದಾಖಲಿಸಬೇಕು. ಅರ್ಹ ಅಭ್ಯರ್ಥಿಗಳ ವಿವರಗಳನ್ನು ಪರಿಶೀಲಿಸಿ ಬಿಎಂಆರ್‍ಸಿಎಲ್ ಕರೆ ಮಾಡಿ ತಿಳಿಸಲಿದೆ.
www.english.bmrc.co.in ತಾಣದಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅದನ್ನು ತುಂಬಿ ಮುಖ್ಯ ವ್ಯವಸ್ಥಾಪಕರು (ಮಾನವ ಸಂಪನ್ಮೂಲ ವಿಭಾಗ) ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ ಎಚ್ ರಸ್ತೆ, ಶಾಂತಿನಗರ, ಬೆಂಗಳೂರು 560027 ಇಲ್ಲಿಗೆ ಸಲ್ಲಿಸಬೇಕು.