ದಿನದ ಸುದ್ದಿ

ವಾರ್ಷಿಕ ಅಮರನಾಥ ಯಾತ್ರೆಗಾಗಿ ನೋಂದಣಿ

Published

on

ಸುದ್ದಿದಿನ ಡೆಸ್ಕ್ : ವಾರ್ಷಿಕ ಅಮರನಾಥ ಯಾತ್ರೆಗಾಗಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಜಮ್ಮು ಕಾಶ್ಮೀರ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೆಸ್ ಬ್ಯಾಂಕ್ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್‌ನ 100ಶಾಖೆಗಳಲ್ಲಿ ಅಮರನಾಥ ಯಾತ್ರೆಗಾಗಿ ನೋಂದಣಿ ನಡೆಯುತ್ತಿದೆ.

ಅಮರನಾಥ ಯಾತ್ರಾ ಮಂಡಳಿಯ ಮೊಬೈಲ್ ಆಪ್ ಮತ್ತು ಜಾಲತಾಣ ಮೂಲಕವೂ ನೋಂದಣಿ ಮಾಡಬಹುದಾಗಿದೆ. ಅಮರನಾಥ ಯಾತ್ರೆ ವೇಳೆ ಭದ್ರತೆ ವಿಷಯದಲ್ಲಿ ಯಾವುದೇ ಲೋಪ ಬರದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರದಲ್ಲೇ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ತಿಳಿಸಿದ್ದಾರೆ.

ಅಮರನಾಥ ಯಾತ್ರೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜತೆ ಸಮಾಲೋಚನೆ ಸಭೆ ನಡೆಸಿದ ಅಜಯ್ ಕುಮಾರ್ ಬಲ್ಲಾ, ಮುಂದಿನ ದಿನಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸುವ ಬಗ್ಗೆ ಸೂಚನೆ ನೀಡಿದರು. ರಾಮ್‌ಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರೆಗೆ ಸಕಲ ಸಿದ್ಧತೆ ಮಾಡಲಾಗಿದೆ. 3ಸಾವಿರದ600 ಯಾತ್ರಿಕರಿಗೆ ಎಲ್ಲ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಯಾತ್ರಿಗಳಿಗೆ ಆರ್‌ಎಫ್‌ಐಡಿ ಟ್ಯಾಗ್ ನೀಡಲಾಗುವುದು. ಇದರಿಂದ ಯಾತ್ರಿಗಳ ಚಲನವಲನ ಹಾಗೂ ಅವರು ಇರುವ ಸ್ಥಳ ಜಿಪಿಎಸ್ ಮೂಲಕ ಪತ್ತೆಯಾಗಲಿದೆ. ಈ ಬಾರಿ 3 ಲಕ್ಷಕ್ಕೂ ಅಧಿಕ ಮಂದಿ ಅಮರನಾಥ ಯಾತ್ರೆ ಕೈಗೊಳ್ಳುವ ನಿರೀಕ್ಷೆ ಇದೆ. ಜೂನ್ 30 ರಿಂದ ಅಮರನಾಥ ಯಾತ್ರೆ ಆರಂಭವಾಗಲಿದೆ. ಆಗಸ್ಟ್ 11ರಂದು ಯಾತ್ರೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version