ದಿನದ ಸುದ್ದಿ

ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಾವಳಿ 1963ರ ಕಲಂ 4(1) ಮತ್ತು (3) ಹಾಗೂ ನಿಯಮ 3ರ ಮೇರೆಗೆ ನೊಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಹಿರಿಯ ಕಾರ್ಮಿಕ ನಿರೀಕ್ಷಕರು 1, 2, 3ನೇ ವೃತ್ತ ದಾವಣಗೆರೆ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

ಸಂಸ್ಥೆಗಳು 15 ದಿನಗಳ ಒಳಗಾಗಿ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ
https://www.ekarmika.karnataka.gov.in/ekarmika/Static/Home.aspx ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version