ದಿನದ ಸುದ್ದಿ

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

Published

on

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಈ ಮೊದಲು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ 74 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version