ದಿನದ ಸುದ್ದಿ

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ.

ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತು.ಮೇ.ಯೋ.ವಿ. ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version