ದಿನದ ಸುದ್ದಿ

ದಾವಣಗೆರೆ | ಸೆ.20 ರಂದು ರಿಪಬ್ಲಿಕನ್ ಪಾರ್ಟಿಯ ರಾಜ್ಯಮಟ್ಟದ ಸರ್ವ ಸದಸ್ಯರ ಸಭೆ

Published

on

ಸುದ್ದಿದಿನ,ದಾವಣಗೆರೆ :ಹರಿಹರದಲ್ಲಿರುವ ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಭೀಮವಾದ ರಾಜ್ಯ ಸಮಿತಿಯ ರಾಜ್ಯಮಟ್ಟದ ಸರ್ವ ಸದಸ್ಯರ ಸಭೆಯನ್ನು‌ ಸೆಪ್ಟೆಂಬರ್ 20ನೇ ತಾರೀಖು ಭಾನುವಾರ ಬೆಳಗ್ಗೆ 10-30ಕ್ಕೆ ಆಲೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಡಾ.ಆರ್.ಮೋಹನ್‍ರಾಜ್ ಅವರು ವಹಿಸಿಕೊಳ್ಳಲಿದ್ದಾರೆ. ಕೋವಿಡ್-19ರ ಕಾರಣದಿಂದಾಗಿ ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಹಾಗೂ ಸುರಕ್ಷಿತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂಬುದಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಹಾಗೂ ಕಾರ್ಯಕ್ರಮದ ಉಸ್ತುವಾರಿಗಳಾದ ಎಲ್.ಆರ್.ಚಂದ್ರಪ್ಪ ಕಂದಗಲ್ಲು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version