ದಿನದ ಸುದ್ದಿ
ಹಿಂದುಳಿದ ವರ್ಗಗಳ ಮೀಸಲಾತಿ; ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ : ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿದಿನ ಬೀದರ್ : ಹಿಂದುಳಿದ ವರ್ಗಗಳಿಗೆ ( Backwoods classes ) ಮೀಸಲಾತಿ ( Reservation ) ಹೆಚ್ಚಳದ ಬಗ್ಗೆ ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆ ಬಲ್ಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯಗಳ ಆಶೋತ್ತರಗಳು ಹೆಚ್ಚಿದ್ದು, ಎಲ್ಲರೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಂದೆ ಬರಬೇಕು ಎಂಬ ಆಶಯವಿದೆ ಎಂದು ಹೇಳಿದರು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಿಪೆಟ್ ಯೋಜನೆಯ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ ಬೀದರ್ ನಲ್ಲಿ ಸ್ಥಾಪನೆಯಾಗುತ್ತಿರುವುದು ಸಂತಸದ ಸಂಗತಿ. ಈ ಯೋಜನೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ. ರಾಜ್ಯಕ್ಕೆ ಈ ಕೇಂದ್ರವನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರನ್ನು ಅಭಿನಂದಿಸುವುದಾಗಿ ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243