ದಿನದ ಸುದ್ದಿ
ವಸತಿ ಶಾಲೆ ಸೀಟು ಹಂಚಿಕೆ
ಸುದ್ದಿದಿನ,ದಾವಣಗೆರೆ :2020-21ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿ.ಆರ್ ಅಂಬೇಡ್ಕರ್/ಪ.ಜಾತಿ/ಪ.ವರ್ಗ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ-ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಈ ಹಿಂದೆ ಅರ್ಜಿ ಆಹ್ವಾನಿಸಿ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಅದರಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏ.03 ರಂದು ಬೆಳಿಗ್ಗೆ 11 ಗಂಟೆಗೆ ವೆಬ್‍ಸೈಟ್
http://kea.kar.nic.in ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರಕಟಿಸಲಾಗುವುದು. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ಪಡೆದ ಅಭ್ಯರ್ಥಿಗಳು ಏ.05 ರಿಂದ 10 ರವರೆಗೆ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂಬಂಧಿಸಿದ ವಸತಿ ಶಾಲೆಗೆ ತಪ್ಪದೇ ಪ್ರವೇಶ ಪಡೆಯುವುದು.
ಇದನ್ನೂ ಓದಿ |ಕೋವಿಡ್ ಮಾರ್ಗಸೂಚಿ ಪಾಲಿಸದ ವ್ಯಾಪಾರ-ವಹಿವಾಟು ನಡೆಸುವ ಮಾಲೀಕರ ವಿರುದ್ದ ಕಠಿಣ ಕ್ರಮ : ಡಿಸಿ ಮಹಾಂತೇಶ ಬೀಳಗಿ
ಆಯ್ಕೆ ಪ್ರಕ್ರಿಯೆಯು ಆನ್‍ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರಿತವಾಗಿರುವುದರಿಂದ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ವೆಬ್‍ಸೈಟ್ http://kea.kar.nic.in ನ್ನು ಸಂಪರ್ಕಿಸಬಹುದು. ಜಿಲ್ಲಾ ಹಂತದಲ್ಲಿ ಯಾವುದೇ ರೀತಿಯ ಆಯ್ಕೆ ಪ್ರಕ್ರಿಯೆ ಇರುವುದಿಲ್ಲವೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243