Connect with us

ದಿನದ ಸುದ್ದಿ

ಕೆಐಎಡಿಬಿ ಜಮೀನು ಡಿನೋಟಿಫಿಕೇಷನ್ ಆರೋಪ ; ಯಡಿಯೂರಪ್ಪ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಒತ್ತಾಯ

Published

on

ಸುದ್ದಿದಿನ, ಬೆಂಗಳೂರು : ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು‌.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ ಐ ಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು.

ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಬಿ.ಎಸ್.ಯಡಿಯೂರಪ್ಪನವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಬಿ.ಎಸ್.ಯಡಿಯೂರಪ್ಪನವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ ಎಂದು ಒತ್ತಾಯಿಸಿದರು.

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ.

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಆದೇಶದಲ್ಲಿ ತಿಳಿಸಿರುವುದು ಬಿ.ಎಸ್.ಯಡಿಯೂರಪ್ಪನವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ.

ಬಿ.ಎಸ್.ಯಡಿಯೂರಪ್ಪನವರ ವಿರುದ್ದದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

‘ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?

ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending