Connect with us

ದಿನದ ಸುದ್ದಿ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ಶೇಂಗಾ ಖರೀದಿಸುವ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸರ್ಕಾರ ಆದೇಶ ನೀಡಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ ರೂ. 1868 ಹಾಗೂ ಗ್ರೇಡ್-ಎ ಭತ್ತಕ್ಕೆ 1888 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.

ಸಾಮಾನ್ಯ ಭತ್ತ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂ. (ಪ್ರತಿ ಎಕರೆಗೆ 16 ಕ್ವಿಂ. ನಂತೆ) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೊಂದಣಿ ಮಾಡಿದಂತಹ ರೈತರಿಂದ ಭತ್ತವನ್ನು, ನಿಗದಿತ ಅಕ್ಕಿ ಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಕಡಿಮೆ ದರ ಇದೆ.

ಹೀಗಾಗಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭ ಮಾಡುತ್ತಿರುವುದು ರೈತರಿಗೆ ಅನುಕೂಲವಾಗಲಿದೆ. ಭತ್ತ ಮಾರಾಟ ಮಾಡಬಯಸುವ ರೈತರು ಕೃಷಿ ಇಲಾಖೆ ಜಾರಿಗೊಳಿಸಿರುವ ಫ್ರೂಟ್ಸ್ (ಈಖUIಖಿS) ದತ್ತಾಂಶದಲ್ಲಿ ತಮ್ಮ ಹೆಸರು ನೊಂದಣಿ ಮಾಡಿಸಿರಬೇಕು. ಫ್ರೂಟ್ಸ್ ದತ್ತಾಂಶದಲ್ಲಿ ನೊಂದಣಿ ಆಗಿರದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ಇದುವರೆಗೂ ನೊಂದಣಿ ಮಾಡಿಸದೇ ಇರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನೊಂದಣಿ ಮಾಡಿಸಲು ಅವಕಾಶವಿದೆ. ಸ

ರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿ ಗಿರಣಿಗಳನ್ನು ಭತ್ತ ಖರೀದಿ ಕಾರ್ಯಕ್ಕೆ ನೊಂದಾಯಿಸಿಕೊಳ್ಳಬೇಕಿದ್ದು, ನ. 20 ರಿಂದ 25 ರವರೆಗೆ ನೊಂದಣಿ ಮಾಡಿಕೊಳ್ಳಬೇಕು. ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್‍ಗಳನ್ನು ನಿಯೋಜಿಸಿ, ಇವರಿಗೆ ಸೂಕ್ತ ತರಬೇತಿ ನೀಡಬೇಕು. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೊಂದಣಿ ಕಾರ್ಯ ನ. 30 ರಿಂದ ಡಿ. 30 ರವರೆಗೆ ನಡೆಯಲಿದೆ. ಭತ್ತ ಮಾರಾಟ ಮಾಡುವ ರೈತರಿಗೆ 03 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

16 ಹೋಬಳಿ ಕೇಂದ್ರಗಳಲ್ಲಿ ಖರೀದಿ ಕೇಂದ್ರ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸುವ ಸಲುವಾಗಿ ಕಳೆದ ಬಾರಿ ತಾಲ್ಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ ಈ ಬಾರಿ ಜಗಳೂರು ತಾಲ್ಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಒಟ್ಟು 16 ಹೋಬಳಿ ಕೇಂದ್ರಗಳಲ್ಲಿಯೂ ಭತ್ತ ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.

ಸಿಬ್ಬಂದಿ ಕೊರತೆಯಾದಲ್ಲಿ ಜಿಲ್ಲಾಡಳಿತದ ವತಿಯಿಂದಲೇ ಸಿಬ್ಬಂದಿ ನಿಯೋಜಿಸಲಾಗುವುದು. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಮಂಟೇಸ್ವಾಮಿ ಅವರು ಮಾತನಾಡಿ, ಸದ್ಯ ಭತ್ತಕ್ಕೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆ ಇದೆ. ಫ್ರೂಟ್ಸ್ ದತ್ತಾಂಶ ವ್ಯವಸ್ಥೆ ಪ್ರಾರಂಭವಾದಾಗಿನಿಂದ, ರೈತರಿಗೆ ತ್ವರಿತವಾಗಿ ಹಣ ಪಾವತಿ ಆಗುತ್ತಿದೆ. ಕಳೆದ ಬಾರಿ ಬೆಂಬಲ ಬೆಲೆ ಯೋಜನೆಯಡಿ ಸುಮಾರು 40 ಸಾವಿರ ಕ್ವಿಂ. ನಷ್ಟು ಭತ್ತ ಖರೀದಿ ಆಗಿತ್ತು. ಎಲ್ಲ ರೈತರಿಗೂ ಹಣ ಪಾವತಿಯಾಗಿದೆ ಎಂದರು.

ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಅವರು ಮಾತನಾಡಿ, ಈ ಬಾರಿ ಜಿಲ್ಲೆಯ 66450 ಹೆ. ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸುಮಾರು 3.30 ಲಕ್ಷ ಟನ್ ಭತ್ತ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಸದ್ಯ ಜಿಲ್ಲೆಯಲ್ಲಿ ಭತ್ತ ಕಟಾವು ಪ್ರಕ್ರಿಯೆ ಆರಂಭವಾಗಿದೆ. ರೈತರು ತರುವ ಭತ್ತದ ಮಾದರಿ ಗುಣಮಟ್ಟ ಪರಿಶೀಲನೆಗೆ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯಿಂದ ಗ್ರೇಡರ್‍ಗಳನ್ನು ನಿಯೋಜಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending