ದಿನದ ಸುದ್ದಿ
ಭತ್ತದ ಬೆಳೆಯಲ್ಲಿ ದುಂಡಾಣು ಅಂಗಮಾರಿ ರೋಗದ ನಿವಾರಣೆ ಹೇಗೆ..?
ಸುದ್ದಿದಿನ,ದಾವಣಗೆರೆ : ಜಿಲ್ಲೆಯಾದ್ಯಂತ ಸುಮಾರು 66 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿದ್ದು, ಭತ್ತದ ಬೆಳೆಯು ಬೆಳವಣಿಗೆ ಹಂತದಿಂದ ತೆಂಡೆ ಒಡೆಯುವ ಹಂತದಲ್ಲಿದ್ದು, ಕೆಲ ಪ್ರದೇಶಗಳಲ್ಲಿ ದುಂಡಾಣು ಅಂಗಮಾರಿ ರೋಗದ ಬಾಧೆಯು ಕಾಣಿಸಿಕೊಂಡಿದೆ. ಈ ರೋಗವು ಕ್ಸಾಂತೊಮೊನಾಸ್ ಒರಿಝೆ ಎಂಬ ದುಂಡಾಣುವಿನಿಂದ (ಬ್ಯಾಕ್ಟೀರಿಯಾ) ಹರಡುವುದು.
ರೋಗದ ಲಕ್ಷಣಗಳು
ಎಲೆಯ ಅಂಚಿನಲ್ಲಿ ಉದ್ದನೆಯ ಒಣಗಿದ ಪಟ್ಟಿಗಳು ಕಂಡು ಬರುತ್ತವೆ. ನಂತರದ ಹಂತದಲ್ಲಿ ಎಲೆಗಳು ಪೂರ್ತಿಯಾಗಿ ಒಣಗಿದಂತಾಗುತ್ತದೆ.
ನಿರ್ವಹಣಾ ಕ್ರಮಗಳು
ಗೋಣಿ ಚೀಲದಲ್ಲಿ ಸಗಣಿಯನ್ನು ಹಾಕಿ ಕಟ್ಟಿ, ನೀರು ಹಾಯಿಸುವ ಜಾಗದಲ್ಲಿ ಇಡುವುದರಿಂದ ನೀರಿನ ಜೊತೆಯಲ್ಲಿ ಹರಿಯುವ ಸಗಣಿ ರಾಡಿಯಿಂದ ಈ ರೋಗವನ್ನು ನಿರ್ವಹಣೆ ಮಾಡಬಹುದು. ಸ್ಟ್ರೆಪ್ಟೋಸೈಕ್ಲಿನ್ 0.5 ಗ್ರಾಂ. ಮತ್ತು ತಾಮ್ರದ ಆಕ್ಸಿಕ್ಲೋರೈಡ್ 2.15 ಗ್ರಾಂ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243