ರಾಜಕೀಯ
ನದಿ ಜೋಡಣೆ ಯೋಜನೆ ; ಒಕ್ಕೂಟ ವ್ಯವಸ್ಥೆಗೆ ಕೇಂದ್ರ ಸರ್ಕಾರ ಮಾಡಿರುವ ದ್ರೋಹ : ಸಿದ್ದರಾಮಯ್ಯ ಆಕ್ರೋಶ
ಸುದ್ದಿದಿನ, ಬೆಂಗಳೂರು : ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸದೆ, ರಾಜ್ಯದ ಜನರ ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಕ್ಷಿಣದ ನದಿಗಳ ಜೋಡನೆಗೆ ರೂ. 46,000 ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಸಚಿವರ ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ಇದರಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು.
ಕೃಷ್ಣ, ಗೋಧಾವರಿ, ಪೆನ್ನಾರ್ ಮತ್ತು ಕಾವೇರಿ ನದಿಗಳ ಜೋಡಣೆ ಬಗ್ಗೆ ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಯಲ್ಲಿ ಚರ್ಚಿಸಲಾಗಿದೆ, ಯೋಜನೆಯಿಂದ 347 ಟಿ.ಎಂ.ಸಿ ನೀರು ಸಿಗಲಿದ್ದು, ದಕ್ಷಿಣದ ರಾಜ್ಯಗಳಿಗೆ ಹಂಚಿಕೆ ಮಾಡುವ ಯೋಜನೆ ಇದಾಗಿದೆ ಎಂದರು.
ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸದೆ, ರಾಜ್ಯದ ಜನರ ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆಯನ್ನು ಕೇಂದ್ರ @BJP4India ಸರ್ಕಾರ ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹ. 1/14#ನದಿಜೋಡಣೆ pic.twitter.com/127E9YKTMI
— Siddaramaiah (@siddaramaiah) February 4, 2022
ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ಶೇ. 70 ಕೃಷಿ ಭೂಮಿ ಮಳೆ ಆಶ್ರಿತ ಪ್ರದೇಶವಾಗಿದೆ. ನದಿಗಳ ಜೋಡಣೆಯಿಂದ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತೆ. ಹೀಗಿದ್ದಾಗ ನಾವೇಕೆ ಈ ಯೋಜನೆಯನ್ನು ಒಪ್ಪಬೇಕು? ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ತಕ್ಷಣ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ನದಿಜೋಡಣೆ ಬಗ್ಗೆ ಚರ್ಚೆ ನಡೆಸಬೇಕು. ನದಿಯಲ್ಲಿರುವ ನೀರಿನ ಲಭ್ಯತೆ ಮತ್ತು ಅದರಲ್ಲಿ ರಾಜ್ಯಗಳ ಪಾಲಿನ ಬಗ್ಗೆ ಮಾಹಿತಿ ಸಂಗ್ರಹಿಸಿ ರಾಜ್ಯಗಳಿಗೆ ನೀಡಬೇಕು.
1978 ರಲ್ಲಿ ಮೊರಾರ್ಜಿ ದೇಸಾಯಿ, ನಂತರ ಪ್ರಧಾನಿ ಎ.ಬಿ.ವಾಜಪೇಯಿ ಅವರು ನದಿ ಜೋಡಣೆ ಯೋಜನೆಯ ಪ್ರಸ್ತಾಪ ಮಾಡಿದ್ದರು. ಗಂಗಾ ನದಿ ಹಿಮಾಲಯದಲ್ಲಿ ಹುಟ್ಟುವ ಕಾರಣಕ್ಕೆ ವರ್ಷವಿಡೀ ತುಂಬಿ ಹರಿಯುವುದರಿಂದ ನಮ್ಮ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು, ಅದು ಹುಸಿಯಾಗಿದೆ. ವಾಜಪೇಯಿ ಅವರು ಗಂಗಾ – ಕಾವೇರಿ ನದಿ ಜೋಡಣೆ ಯೋಜನೆಯನ್ನು ಪ್ರಸ್ತಾಪ ಮಾಡಿದರಾದರೂ ಆ ಬಗ್ಗೆ ಕ್ರಮ ಕೈಗೊಂಡಿಲ್ಲ. ಈಗಿನ ಬಿಜೆಪಿ ಸರ್ಕಾರ ಮತ್ತೆ ನದಿ ಜೋಡಣೆ ಪ್ರಸ್ತಾಪ ಮಾಡಿದೆ. ಇದರ ಸಾಧಕ ಬಾಧಕಗಳ ಬಗ್ಗೆ ರಾಜ್ಯದ ಜನರಿಗೆ ಮೊದಲು ಮಾಹಿತಿ ನೀಡಲಿ.
ಬಜೆಟ್ ಮಂಡಿಸಿ ಮೂರು ದಿನಗಳಾದರೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ನದಿ ಜೋಡಣೆ ಪ್ರಸ್ತಾಪಕ್ಕೆ ಯಾವೊಬ್ಬ ಸಂಸದ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಮಾತನಾಡಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರ?
ಹಣಕಾಸು ಸಚಿವೆ @nsitharaman ಅವರು ದಕ್ಷಿಣದ ನದಿಗಳ ಜೋಡನೆಗೆ ರೂ. 46,000 ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಸಚಿವರ ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ಇದರಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. 2/14#ನದಿಜೋಡಣೆ
— Siddaramaiah (@siddaramaiah) February 4, 2022
ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ, ಒಮ್ಮತದ ವಿರೋಧವನ್ನು ಕೇಂದ್ರಕ್ಕೆ ತಿಳಿಸಬೇಕು ಎಂದು ಆಗ್ರಹಿಸುತ್ತೇನೆ.
ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ ಮೇಕೆದಾಟು ಯೋಜನೆಗೆ ಮೊದಲು ಪರಿಸರ ಅನುಮತಿ ಪತ್ರ ಕೊಡಿಸಲಿ. ದಕ್ಷಿಣದ ನದಿಗಳ ಜೋಡಣೆ ಆ ಮೇಲೆ ನೋಡೋಣ.
ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ.
ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ಅಮಾನವೀಯ ಮಾತ್ರವಲ್ಲ ಸಂವಿಧಾನ ಬಾಹಿರವೂ ಹೌದು.
ಕೂಡಲೇ ಕಾಲೇಜಿನ ಪ್ರಾಂಶುಪಾಲರನ್ನು ವಜಾಗೊಳಿಸಬೇಕು.
ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೇ ಸಂಘ ಪರಿವಾರದ ನಿಜವಾದ ಅಜೆಂಡಾ, ಹಿಜಾಬ್ ಒಂದು ನೆಪ ಅಷ್ಟೆ. ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಆಗಾಗ ಘೋಷಣೆ ಕೂಗುವ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ಈ ವಿವಾದ ಬಂದಿಲ್ಲವೇ?
ಬಿಜೆಪಿ ಮತ್ತು ಸಂಘ ಪರಿವಾರ ಬಹಳ ವ್ಯವಸ್ಥಿತವಾಗಿ ಹಿಜಾಬ್ ವಿವಾದವನ್ನು ರಾಜ್ಯದಾದ್ಯಂತ ಪಸರಿಸುವ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಇಂತಹ ಕೃತ್ಯಗಳನ್ನು ತಡೆಯಬೇಕು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


