ದಿನದ ಸುದ್ದಿ
ರಿಯಾ ಚಕ್ರವರ್ತಿ ಗೆ ಜೈಲು..?
ಸುದ್ದಿದಿನ,ಮುಂಬೈ: ಜೂನ್ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಗುರುವಾರ ವಜಾಗೊಳಿಸಿದೆ.
ಸಾವನ್ನಪ್ಪಿದ ನಟ ಸುಶಾಂತ್‍ಗೆ ರಿಯಾ ಚಕ್ರವರ್ತಿ ಗಾಂಜಾ ಸೇವನೆ ಮಾಡಲು ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್‍ಸಿಬಿ ಸೋಮವಾರ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು. ಈ ಮೂಲಕ ಮತ್ತೆ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243