Connect with us

ದಿನದ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ; ಆರೋಪಿತರ ಬಂಧನ

Published

on

ಸುದ್ದಿದಿನಡೆಸ್ಕ್: ಹಣ ಕೊಡುವಂತೆ ಹೆದರಿಸಿ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ದರೋಡೆ ಕೋರರನ್ನು ನಗರದ ವಿದ್ಯಾನಗರ ಪೋಲೀಸರು ಬಂಧಿಸಿದ್ದಾರೆ.

ತುಮಕೂರಿನ ಬಿಪಿನ್ ಕುಮಾರ್ ಎಂಬಾತ ಇದೇ 5 ನೇ ತಾರೀಖಿನಂದು ದಾವಣಗೆರೆಯ ರೈಸ್‌ಮಿಲ್‌ನಲ್ಲಿ ಕೆಲಸ ಹುಡುಕಿಕೊಂಡು ಬಂದಿದ್ದು, ಬೆಳಗ್ಗೆ ಸುಮಾರು ಹತ್ತು ಗಂಟೆಯಲ್ಲಿ ಹೈವೆನಲ್ಲಿದ್ದ ಪೆಟ್ಟಿ ಅಂಗಡಿಯಲ್ಲಿ ಟೀ ಕುಡಿದು ಅಂಡರ್ ಬ್ರಿಡ್ಜ್ ಕೆಳಗೆ ಹೋಗುತ್ತಿರುವಾಗ ಯಾರೋ ಇಬ್ಬರು ತನ್ನನ್ನು ವಿಚಾರಿಸಿ ತಮ್ಮ ಬೈಕಿನಲ್ಲಿ ಕೂರಿಸಿಕೊಂಡು ಚಾನೆಲ್ ಹತ್ತಿರ ಕರೆದುಕೊಂಡು ಹೋಗಿ ತನ್ನನ್ನು ಹಣಕೊಡುವಂತೆ ಹೆದರಿಸಿ ತನ್ನ ಬಳಿ ಇದ್ದ ಇಪ್ಪತ್ತು ಸಾವಿರ ಮೌಲ್ಯದ ಸ್ಯಾಮ್‌ಸಂಗ್ ಎ15 ಮೊಬೈಲ್ ಫೋನ್‌ನ್ನು ಬಲವಂತವಾಗಿ ಕಿತ್ತುಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದು, ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

ಪ್ರಕರಣರಕ್ಕೆ ಸಂಬಂಧಿಸಿದಂತೆ ಆರೋಪಿತರನ್ನು ಪತ್ತೆ ಮಾಡಲು ಶ್ರೀ ವಿಜಯಕುಮಾರ್.ಎಂ. ಸಂತೋಷ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು. ಶ್ರೀ ಮಂಜುನಾಥ.ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ ಶ್ರೀ.ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ, ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಪ್ರಭಾವತಿ.ಸಿ.ಶೇತಸನದಿ ರವರ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪಿ.ಎಸ್.ಐ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಯಿತು.

ತಂಡವು ಆರೋಪಿತರಾದ ಎಂ: ಬೀರೇಶ – ಬೀರ, 26 ವರ್ಷ, ತರಗಾರ ಕೆಲಸ, ವಾಸ 3ನೇ ಕ್ರಾಸ್, ಅಶೋಕ ನಗರ, ದಾವಣಗೆರೆ ಎ2: ವಿನಾಯಕ – ವಿನ್ನಿ. -ಗಿರಿ, 24 ವರ್ಷ, ತರಗಾರ ಕೆಲಸ, 2ನೇ ಮೇನ್, 3ನೇ ಕ್ರಾಸ್, ಅಶೋಕ ನಗರ, ದಾವಣಗೆರೆ ಎ3: ಅರುಣ್ , 23 ವರ್ಷ, ಎಲೆಕ್ನಿಷಿಯನ್, ವಾಸ 3ನೇ ಮೇನ್, 1ನೇ ಕಾಸ್, ವಿನೋಬನಗರ, ದಾವಣಗೆರೆ, ಎ4: ಕಾರ್ತಿಕ್ , 19 ವರ್ಷ, ಎಲೆಕ್ನಿಷಿಯನ್, ವಾಸ 3ನೇ ಮೇನ್, 8ನೇ ಕ್ರಾಸ್, ವಿನೋನಗರ, ದಾವಣಗೆರೆ ಎ5: ತರುಣ್, 20 ವರ್ಷ, ವಾಟರ್ ವಾಶ್ ಕೆಲಸ, ವಾಸ 3ನೇ ಮೇನ್, 14ನೇ ಕ್ರಾಸ್, ವಿನೋಬನಗರ, ದಾವಣಗೆರೆ, ಎ6: ಮದನ್, 21 ವರ್ಷ, ಗೋಲ್ಡ್ ಕೆಲಸ, ವಾಸ 3ನೇ ಮೇನ್, 8ನೇ ಕ್ರಾಸ್, ವಿನೋಬನಗರ, ದಾವಣಗೆರೆ ರವರುಗಳನ್ನು ವಶಕ್ಕೆ ಪಡೆದು ದರೋಡೆ ಮಾಡಿದ್ದ 1) 20,000/- ರೂ ಬೆಲೆ ಬಾಳುವ ಸ್ಯಾಮ್‌ಸಂಗ್ ಎ15 ಮೊಬೈಲ್, ದರೋಡೆಗೆ ಬಳಸಿದ್ದ 1) KA-17 HH-5172 ನೇ ನಂಬರ್‌ ಹೋಂಡಾ ಶೈನ್ ಬೈಕ್ ಅಂದಾಜು ಬೆಲೆ ರೂ 50000/- & 2) KA-17 HM-2020 ಅಂದಾಜು ಬೆಲೆ 60000/- ಪಡಿಸಿಕೊಂಡಿರುತ್ತೆ.

ಪ್ರಕರಣದಲ್ಲಿ ಆರೋಪಿತರನ್ನು ಪತ್ತೆಕಾರ್ಯದಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳಾದ ಶ್ರೀಮತಿ ಪ್ರಭಾವತಿ.ಸಿ.ಶೇತಸನದಿ ಪೊಲೀಸ್ ಇನ್ಸ್‌ಪೆಕ್ಟರ್ ವಿದ್ಯಾನಗರ ಠಾಣೆ, ಶ್ರೀ ವಿಶ್ವನಾಥ ಜಿ.ಎನ್ ಪಿಎಸ್‌ಐ, ಶ್ರೀ ಎಂ.ಎಸ್ ಹೊಸಮನಿ ಪಿ.ಎಸ್.ಐ ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ಆನಂದ.ಎಂ, ಭೋಜಪ್ಪ ಕಿಚಡಿ, ಮಂಜಪ್ಪ.ಟಿ, ಯೋಗೀಶ್ ನಾಯ್ಕ, ಗೋಪಿನಾಥ.ಬಿ.ನಾಯ್ಕ, ಲಕ್ಷ್ಮಣ್.ಆರ್. ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಯಾದ ರಾಘವೇಂದ್ರ, ಶಾಂತರಾಜ್ ಮತ್ತು ಕಮಾಂಡ್ ಸೆಂಟರ್ ಸಿಬ್ಬಂದಿ ಮಾರುತಿ, ಸೋಮಶೇಖರ್ ರವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀಮತಿ ಉಮಾ ಪ್ರಶಾಂತ್ ಐ.ಪಿ.ಎಸ್ ರವರು ಶ್ಲಾಘಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.

ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.

ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending