ಕ್ರೀಡೆ
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ ದಾಖಲೆ ಮುರಿದ ರೋ’ಹಿಟ್’ ಶರ್ಮಾ
ಸುದ್ದಿದಿನ ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಟಿ20 ಪಂದ್ಯಾವಳಿಯಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ವಿರಾಟ್ ಕೊಹ್ಲಿಯ ದಾಖಲೆಗಳನ್ನು ಮುರಿದಿದ್ದಾರೆ. ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.
ಅನೇಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬರೋಬ್ಬರಿ 4 ಬಾರಿಸಿದ ವಿಶ್ವದ ಮಾದಲ ಕ್ರಿಕೆಟಿಗನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ದಾಖಲೆಗಳನ್ನು ಮುರಿದು ಹಾಕಿದ್ದಾರೆ. 2ನೇ ಪಂದ್ಯ ಆರಂಭಕ್ಕೂ ಮುನ್ನ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.