ದಿನದ ಸುದ್ದಿ
ದೇಶದ ಪ್ರಮುಖ ಸುದ್ದಿ ಸಂಸ್ಥೆಗಳಿಗೆ 1.1ಕೋಟಿ ರೂ ದಂಡ

ಸುದ್ದಿದಿನ ಡೆಸ್ಕ್ : ಕತುವಾ ಅತ್ಯಾಚಾರ ಪ್ರಕರಣ ಪ್ರಸಾರ ಸಂಬಂಧ ಪ್ರಮುಖ ಸುದ್ದಿ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ 1.1ರೂ ದಂಡ ವಿಧಿಸಿದೆ. ಜನವರಿಯಲ್ಲಿ ನಡೆದಿದ್ದ ಅಪ್ರಾಪ್ತೆಯ ಅತ್ಯಾಚಾರದ ಸುದ್ದಿಯನ್ನು ಸಾರ್ವಜನಿಕವಾಗಿ ಪ್ರಸಾರ ಮಾಡಿದ್ದರಿಂದ ದಂಡ ಹಾಕಿದೆ.
ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿಗಳಾದ ಗೀತಾ ಮಿತ್ತಲ್ ಒಳಗೊಂಡ ಪೀಠವು ಹನ್ನೆರಡು ಸುದ್ದಿಗಳಿಗೆ ತಲಾ 10 ಲಕ್ಷ ರೂ. ದಂಡ ವಿಧಿಸಿದೆ. ದ ಟೈಮ್ಸ್ ಆಫ್ ಇಂಡಿಯಾ, ಹಿಂದುಸ್ತಾನ್ ಟೈಮ್ಸ್, ದ ಇಂಡಿಯನ್ ಎಕ್ಸ್ಪ್ರೆಸ್, ದ ಹಿಂದು, ಎನ್.ಡಿಟಿವಿ, ಪಿಯೊನಿಯರ್, ರಿಪಬ್ಲಿಕ್ ಟಿವಿ, ಡೆಕ್ಕನ್ ಕ್ರಾನಿಕಲ್, ದ ವೀಕ್, ದ ಸ್ಟೇಟ್ಸ್ ಮನ್, ಇಂಡಿಯಾ ಟಿವಿ ಮತ್ತು ಫಸ್ಟ್ ಪೋಸ್ಟ್ ಸುದ್ದಿ ಸಂಸ್ಥೆ ಗಳಿಗೆ ತಲಾ 10 ಲಕ್ಷ ರೂ. ದಂಡ ವಿಧಿಸಿದೆ.
ಫೇಸ್ ಬುಕ್ ಇಂಡಿಯಾ, ಗೂಗಲ್, ಯೂಟ್ಯೂಬ್ ದಂಡ ವಿಧಿಸಿದೆ. ವಿದೇಶಿ ಮಾಧ್ಯಮಗಳಾದ ಅಲ್ ಜಜೀರಾ, ಬಜ್.ಫೀಡ್ ಸಂಸ್ಥೆಗಳಿಗೂ ಕೋರ್ಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
ಡೆಕ್ಕನ್ ಕ್ರಾನಿಕಲ್ ಸಂಸ್ಥೆಯು ಹಣಕಾಸಿನ ಸಮಸ್ಯೆ ನಡುವೆಯೂ ದಂಡ ಭರಿಸಿದೆ. ಎಲ್ಲಾ ಸುದ್ದಿಸಂಸ್ಥೆಗಳು ಕ್ಷಮೆ ಯಾಚಿಸಿದ್ದು, ಕೋರ್ಟ್ ಗೆ ಪಾವತಿಯಾದ ದಂಡ ಹಣವನ್ನು ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಕುಟುಂಬಕ್ಕೆ ನೀಡಲಾಗುತ್ತದೆ ಎಂದು ದ ಪ್ರಿಂಟ್ ವರದಿ ಮಾಡಿದೆ.
ನ್ಯಾಯಮೂರ್ತಿ ಮಿತ್ತಲ್ ಅವರು ಮೊದಲು 25ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದ್ದರು. ಆದರೆ, ಕೆಲವು ಮಾಧ್ಯಮಗಳ ವಕೀಲರು, ಮಾಧ್ಯಮಗಳು ಭಾರಿ ಮೊತ್ತದ ದಂಡ ಪಾವತಿಸಲು ಹೊರೆಯಾಗುತ್ತದೆ ಎಂದು ಮನವಿ ಮಾಡಿದ್ದರಿಂದ ದಂಡದ ಹಣವನ್ನು ಕಡಿಮೆ ಮಾಡಿದ್ದಾರೆ.
ಅತ್ಯಾಚಾರ ಪ್ಕರಣದ ಸುದ್ದಿ ಪ್ರಸಾರದ ಬಗ್ಗೆ ನಿಗಾ ಇಡಲು ಕೋರ್ಟ್ ಹಿರಿಯ ವಕೀಲ ಅರವಿಂದ ನಿಗಂ ಅವರನ್ನು ನೇಮಕ ಮಾಡಿತ್ತು. ಮೊದಲು ದಂಡ ಪಾವತಿಸಿ ನಂತರ ಕೋರ್ಟ್ ಮುಂದೆ ಹಾಜರಾಗುವಂತೆ ಖಡಕ್ ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಕೇರಿ

-
ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ವಾರಾಂತ್ಯ ಕಫ್ರ್ಯೂ: ಸಂಪೂರ್ಣ ಸ್ತಬ್ಧ
ಸುದ್ದಿದಿನ,ಚಿತ್ರದುರ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ರಾತ್ರಿ ಮತ್ತು ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿದ್ದು, ವಾರಾಂತ್ಯದ ಕಫ್ರ್ಯೂ ವೇಳೆ ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿಯಂತ್ರಣದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಗತ್ಯವಸ್ತುಗಳಾದ ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು, ತರಕಾರಿ, ಹಾಲಿನ ಬೂತ್, ಮೀನು, ಮಾಂಸ, ಪಶು ಆಹಾರ ಅಂಗಡಿಗಳ ಸೇವೆಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಇದ್ದು, ಮೆಡಿಕಲ್ ಸ್ಟೋರ್ಗಳು ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಸೌಕರ್ಯಗಳು ಲಭ್ಯವಿರುತ್ತವೆ ಎಂದರು.
ವಾರಾಂತ್ಯದ ಕಫ್ರ್ಯೂ ವೇಳೆ ಕೋವಿಡ್ ಲಸಿಕೆ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದ್ದು, ಲಸಿಕೆ ಪಡೆದುಕೊಂಡು ಬರಲು ಮಾತ್ರ ಅನುಮತಿ ನೀಡಿದ್ದು, ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಹಾಜರು ಪಡಿಸಬೇಕು. ಮದುವೆಗೆ 50 ಜನ ಹಾಗೂ ಅಂತ್ಯಕ್ರಿಯೆಗೆ 20 ಜನ ಮೀರುವಂತಿಲ್ಲ. ಮದುವೆಗೆ ತೆರಳುವವರು ಆಹ್ವಾನ ಪತ್ರಿಕೆ ಹಾಜರುಪಡಿಸಬೇಕು ಎಂದರು.
ವಾರದ ದಿನಗಳಾದ ಸೋಮವಾರದಿಂದ ಶುಕ್ರವಾರದವೆಗೆ ಪ್ರತಿ ದಿನ ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳು ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ಬಟ್ಟೆ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳು ಅಲ್ಲದ ಅಂಗಡಿಗಳು ಇರುವುದಿಲ್ಲ. ಸಲೂನ್ಗಳು, ಬ್ಯೂಟಿಪಾರ್ಲರ್ಗಳು ಕೋವಿಡ್ ಮಾರ್ಗಸೂಚಿಯನ್ವಯ ವಾರದ ದಿನಗಳಲ್ಲಿ ಮಾತ್ರ ತೆರೆದಿರುತ್ತವೆ ಎಂದು ಹೇಳಿದರು.
ನಿರ್ಮಾಣ ಸಾಮಾಗ್ರಿಗಳಿಗೆ ಸಂಬಂಧಿಸಿದ ಅಂಗಡಿಗಳು, ವಾರದ ದಿನಗಳಲ್ಲಿ ತೆರೆದಿರುತ್ತವೆ ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಸಿದ ಹಾಗೂ ಇದಕ್ಕೆ ಪೂರಕವಾಗಿರುವ ಅಂಗಡಿಗಳು, ದಾಸ್ತಾನು ಮಳಿಗೆ, ಕೃಷಿ ಯಂತ್ರಗಾರಿಕೆಗೆ ವಾರದ ದಿನಗಳಲ್ಲಿ ಅವಕಾಶವಿರುತ್ತದೆ. ಇ-ಕಾಮರ್ಸ್ಗೆ ಅವಕಾಶವಿದ್ದು, ದಿನಸಿಗಳ ಮನೆಬಾಗಿಲಿಗೆ ಪಾರ್ಸೆಲ್ ಪಡೆಯಲು ಅವಕಾಶವಿರುತ್ತದೆ.
ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿರುತ್ತದೆ. ಲಾಡ್ಜ್ಗಳಲ್ಲಿ ವಾಸ್ತವ್ಯ ಹೂಡುವವರಿಗೆ ಅತಿಥಿ ಸೇವೆಗೆ ಮಾತ್ರ ಅವಕಾಶವಿದೆ ಎಂದರು.
ಧಾರ್ಮಿಕ ಸಮಾರಂಭ, ಜಾತ್ರೆ ನಿಷೇಧಿಸಲಾಗಿದ್ದು, ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ. ಪೂಜಾಸ್ಥಳ, ಪೂಜೆಗೆ ಮಾತ್ರ ಸೀಮಿತಗೊಳಿಸಿ ಸಾರ್ವಜನಿಕರ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘಟನೆ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸಾರ್ವಜನಿಕರು ಅನಾಗತ್ಯವಾಗಿ ಸಂಚಾರ ಮಾಡದೇ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ |ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 6 ಸಾವಿರ ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್..!
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 795, ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ 247 ಕೋವಿಡ್ ಬೆಡ್ಗಳನ್ನು ಮೀಸಲಿರಿಸಲಾಗಿದೆ. ಸರ್ಕಾರಿಯಲ್ಲಿ 55 ಆಕ್ಸಿನೇಟೆಡ್ ಬೆಡ್ ಹಾಗೂ ಖಾಸಗಿಯಲ್ಲಿ 50 ಬೆಡ್ಗಳಿವೆ. ಸರ್ಕಾರಿ ಐಸಿಯು 41, ಖಾಸಗಿ 50 ಐಸಿಯುಗಳಿವೆ ಮತ್ತು ವೆಂಟಿಲೇಟರ್ಗಳು ಖಾಸಗಿ 30, ಸರ್ಕಾರಿ 31 ಇವೆ. ಹಾಗೂ ಇದಕ್ಕೆ ಸಂಬಂಧಿಸಿದ ಔಷಧಿಯು ದಾಸ್ತಾನು ಇರುತ್ತದೆ.
ಒಂದು ವೇಳೆ ಇನ್ನೂ ಹೆಚ್ಚಾದಲ್ಲಿ ಹಾಸ್ಟೆಲ್ಗಳಲ್ಲಿ ಕೋವಿಡ್ಗೆ ಚಿಕಿತ್ಸೆಗಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕೋವಿಡ್ಗೆ ಸಂಬಂಧಿಸಿದಂತೆ ಯಾವುದೇ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳು ಕೋವಿಡ್ಗೆ ಚಿಕಿತ್ಸೆ ನೀಡುವಾಗ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಕೆಪಿಎಂ ಕಾಯ್ದೆ ಅನ್ವಯ ಯಾರಾದರೂ ಅನುಮತಿ ಪಡೆಯದೇ ಚಿಕಿತ್ಸೆ ನೀಡುತ್ತಿದ್ದರೆ ಅಂತಹ ಆಸ್ಪತ್ರೆ, ಕ್ಲಿನಿಕ್ಗಳ ಮೇಲೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಾರಾಷ್ಟ್ರ | ಕೋವಿಡ್ ಸೆಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ 13 ಸೋಂಕಿತರು ಸಾವು..!

ಸುದ್ದಿದಿನ ಡೆಸ್ಕ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ವಿರಾರ್ನಲ್ಲಿರುವ ಕೋವಿಡ್ -19 ಕೇಂದ್ರದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 13 ರೋಗಿಗಳು ಸಾವನ್ನಪ್ಪಿದ ನಂತರ ಶುಕ್ರವಾರ ಮಹಾರಾಷ್ಟ್ರದ ಆತಂಕಗಳು ಮತ್ತಷ್ಟು ಹೆಚ್ಚಿವೆ.
ಮುಂಜಾನೆ 03: 13 ಕ್ಕೆ ಬಂಜಾರ ಹೋಟೆಲ್ನಿಂದ ತಿರುಪತಿ ನಗರದ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ 5.50 ರ ಸುಮಾರಿಗೆ ಬೆಂಕಿ ನಂದಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಂಕಿ ಕಾಣಿಸಿಕೊಂಡಿದೆ.
Maharashtra | 13 people have died in a fire that broke out at Vijay Vallabh COVID care hospital in Virar, early morning today pic.twitter.com/DoySNt4CSQ
— ANI (@ANI) April 23, 2021
ವಾಸೈ ವಿರಾರ್ ನಗರ ಮುನ್ಸಿಪಲ್ ಕಾರ್ಪೊರೇಷನ್ (ವಿವಿಸಿಎಂಸಿ) ತಂಡಗಳು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಘಟನೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.
Maharashtra | 13 people have died after a fire broke out in the Intensive Care Unit (ICU) around 3am today. 21 patients including those in critical condition have been shifted to another hospital: Dr. Dilip Shah, official, Vijay Vallabh COVID care hospital, Virar pic.twitter.com/0GNUlHlgt4
— ANI (@ANI) April 23, 2021
ಪಾಲ್ಘರ್ ಅವರ ರಕ್ಷಕ ಸಚಿವರಾಗಿರುವ ಕೃಷಿ ಸಚಿವ ದಾದಾ ಭೂಸ್ ಅವರು “ನಾನು ಘಟನೆಯ ಸ್ಥಳ ತಲುಪಿದ್ದು, 13 ಸಾವುಗಳು ಉಂಟಾಗಿರುವುದನ್ನು ಖಚಿತ ಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

ಸುದ್ದಿದಿನ, ಬೆಂಗಳೂರು :400 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಅವರ ಕಚೇರಿ ಗುರುವಾರ ತಿಳಿಸಿದೆ.
ಇದು ಖರೀದಿಯ ಮೊದಲ ಹಂತವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದ್ದು,”ಇದನ್ನು 18 ರಿಂದ 44 ವರ್ಷದೊಳಗಿನ ವ್ಯಕ್ತಿಗಳಿಗೆ ಲಸಿಕೆ ಹಾಕಲು ಬಳಸಲಾಗುತ್ತದೆ” ಎಂದು ಅದು ಹೇಳಿದೆ. ಇಲ್ಲಿಯವರೆಗೆ, ಕರ್ನಾಟಕವು 45 ವರ್ಷಕ್ಕಿಂತ ಮೇಲ್ಪಟ್ಟ 76.41 ಲಕ್ಷ ಜನರಿಗೆ ಲಸಿಕೆ ನೀಡಿದೆ.
ಇದನ್ನೂ ಓದಿ | ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು : ಎಂಪಿ ಜಿ.ಎಂ. ಸಿದ್ದೇಶ್ವರ
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸ್ಥಳೀಯವಾಗಿ ತಯಾರಿಸಿದ ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆಯನ್ನು ಕೋವಿಶೀಲ್ಡ್ ಖರೀದಿಸಲು ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ.
18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರನ್ನು ಒಳಗೊಳ್ಳುವ ಮೂರನೇ ಹಂತದ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ. ಕೆಲವು ಬಿಜೆಪಿ ಆಡಳಿತದ ರಾಜ್ಯಗಳು ಎಲ್ಲಾ ವಯಸ್ಕರಿಗೆ ಉಚಿತವಾಗಿ ಲಸಿಕೆಗಳನ್ನು ನೀಡುವುದಾಗಿ ಘೋಷಿಸಿವೆ. ಈ ಕುರಿತು ಕರ್ನಾಟಕ ಇನ್ನೂ ಕರೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ನಿಶ್ಚಿತಾರ್ಥ ಸಂಭವ! ಶನಿವಾರ- ರಾಶಿ ಭವಿಷ್ಯ ಏಪ್ರಿಲ್-17,2021
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಸಂಜೆಯೊಳಗೆ ಒಂದು ಖುಷಿ ಸಂದೇಶ! ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-18,2021
-
ದಿನದ ಸುದ್ದಿ5 days ago
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಸಾಮಾಜಿಕ ಸಂವರ್ಧನೆಗೆ ಸಾಹಿತ್ಯಿಕ ಚರ್ಚೆ ಅವಶ್ಯ : ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ
-
ದಿನದ ಸುದ್ದಿ5 days ago
ಮತ್ತೆ ಬಂದರೂ ಅದೇ ಕೊರೋನ, ನಾವು ಹೆದರದಿರೋಣ
-
ದಿನದ ಸುದ್ದಿ3 days ago
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್
-
ದಿನದ ಸುದ್ದಿ5 days ago
ಡೀಲರ್ಶಿಪ್ಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ದಾವಣಗೆರೆ | ಮೇ 04 ರವರೆಗೆ ರಾತ್ರಿ ಕಫ್ರ್ಯೂ ಹಾಗೂ ವಾರಾಂತ್ಯ ಕಫ್ರ್ಯೂ ಘೋಷಣೆ