ದಿನದ ಸುದ್ದಿ
ರೂ.10172 ಕೋಟಿ ಜಿಎಸ್‍ಟಿ ದಾಖಲೆ ಸಂಗ್ರಹ ಕೇಂದ್ರ ಜಿ.ಎಸ್.ಟಿ : ಬೆಳಗಾವಿ ವಿಭಾಗದಲ್ಲಿ ಜಿ.ಎಸ್.ಟಿ ಆದಾಯ ದಾಖಲೆ ಸಂಗ್ರಹ..!
ಸುದ್ದಿದಿನ,ಬಳ್ಳಾರಿ : ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಬೆಳಗಾವಿ ವಿಭಾಗದಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ರೂ.10172 ಕೋಟಿಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವನ್ನು ಸಾಧಿಸಿದೆ. ಇಂತಹ ಜಿಎಸ್‍ಟಿ ಸಂಗ್ರಹವು, ದೃಢವಾದ ಆರ್ಥಿಕ ಬೆಳವಣಿಗೆಯ ಸಂಕೇತವಾಗಿದೆ ಮತ್ತು ದೇಶವು ಸಾಂಕ್ರಾಮಿಕದ ನೆರಳಿನಿಂದ ದೂರ ಸರಿದಿದೆ ಎಂಬುದರ ಸೂಚಕವಾಗಿದೆ ಎಂದು ಬೆಳಗಾವಿ ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ಅವರು ತಿಳಿಸಿದ್ದಾರೆ.
ಬೆಳಗಾವಿ ಆಯುಕ್ತಾಲಯ ವ್ಯಾಪ್ತಿಯು ದೊಡ್ಡದಾಗಿದ್ದು, ಇದು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹನ್ನೆರಡು ಜಿಲ್ಲೆಗಳಲ್ಲಿ ವ್ಯಾಪಿಸಿದೆ. ದಾಖಲೆಯ ಸಂಗ್ರಹವು ಈ ಜಿಲ್ಲೆಗಳಲ್ಲಿ ರೋಮಾಂಚಕ ಮತ್ತು ದೃಢವಾದ ಆರ್ಥಿಕ ಚಟುವಟಿಕೆಯ ಸೂಚನೆಯಾಗಿದೆ. ಇದು ಈ ಪ್ರದೇಶದ ಜನಸಂಖ್ಯೆಯಲ್ಲಿ ಅಂತರ್ಗತವಾಗಿರುವ ಉದ್ಯಮಶೀಲ ಸ್ವಭಾವವನ್ನು ಎತ್ತಿ ತೋರಿಸುತ್ತದೆ.
ಈ ಜಿಲ್ಲೆಗಳಲ್ಲಿ ಒಟ್ಟು 2,30,566 ತೆರಿಗೆದಾರರು ಜಿಎಸ್‍ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಮತ್ತು ಇವುಗಳನ್ನು ರಾಜ್ಯ ಅಥವಾ ಕೇಂದ್ರ ಜಿಎಸ್‍ಟಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಕೇಂದ್ರ ಜಿಎಸ್‍ಟಿ ಆಡಳಿತದ ಅಡಿಯಲ್ಲಿ ನೋಂದಾಯಿಸಲಾದ ತೆರಿಗೆದಾರರಿಂದ, ಬೆಳಗಾವಿ ಕೇಂದ್ರ ಜಿಎಸ್‍ಟಿ ರಚನೆಯಿಂದ ರೂ.10,172 ಕೋಟಿಗಳನ್ನು ಸಂಗ್ರಹಿಸಲಾಗಿದೆ. 2019-20ನೇ ಸಾಲಿನ ಆಯುಕ್ತಾಲಯದ ಆದಾಯ ರೂ.7,677 ಕೋಟಿ, 2020-21ಕ್ಕೆ ರೂ.7,124 ಕೋಟಿ ಮತ್ತು 2021-22ನೇ ಸಾಲಿಗೆ ರೂ.10,172 ಕೋಟಿಯಷ್ಟಿದ್ದು, ಇದು ಹಿಂದಿನ ವರ್ಷಗಳ ಸಂಗ್ರಹಕ್ಕಿಂತ ಶೇ.43ರಷ್ಟು ಹೆಚ್ಚಳವಿದೆ.
ಉಕ್ಕು, ಸಿಮೆಂಟ್, ಗಣಿಗಾರಿಕೆ, ಸಕ್ಕರೆಯ ಪ್ರಮುಖ ಕೈಗಾರಿಕೆಗಳಾದ ಜೆಎಸ್‍ಡಬ್ಲ್ಯೂ ಸ್ಟೀಲ್, ಕೆಸೋರಾಮ್ ಇಂಡಸ್ಟ್ರೀಸ್, ಓರಿಯಂಟ್ ಸಿಮೆಂಟ್, ಎನ್‍ಎಂಡಿಸಿ ಇತ್ಯಾದಿಗಳು, ಈ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ ಅಪಾರ ಸಂಖ್ಯೆಯ ವರ್ತಕರು ಕೂಡ ದಾಖಲೆಯ ಜಿಎಸ್‍ಟಿ ಸಂಗ್ರಹಕ್ಕೆ ಕೊಡುಗೆ ನೀಡಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ, ಬೆಳಗಾವಿ ಜಿಎಸ್‍ಟಿ ಆಯುಕ್ತಾಲಯ ತೆರಿಗೆದಾರರ ಅನುಸರಣೆಗೆ ಅನುಕೂಲವಾಗುವಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಆಯುಕ್ತರು ವ್ಯಾಪಾರ ಸಂಸ್ಥೆಗಳ ಸದಸ್ಯರೊಂದಿಗೆ ವ್ಯಾಪಕ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು ಮತ್ತು ಅವುಗಳನ್ನು ಪರಿಹರಿಸಲು ನಿರ್ದೇಶನಗಳನ್ನು ನೀಡಿದರು.
ಕಾರ್ಯನಿರತ ಬಂಡವಾಳದ ಸಕಾಲಿಕ ಲಭ್ಯತೆಯನ್ನು ಅನುಸರಿಸುವ ಮೂಲಕ ವ್ಯಾಪಾರ ಮತ್ತು ಉದ್ಯಮವನ್ನು ಸುಗಮಗೊಳಿಸಲು, ಅರ್ಹವಾದ ಜಿಎಸ್‍ಟಿ ಮರುಪಾವತಿಗಳ ಸಕಾಲಿಕ ಮಂಜೂರಾತಿಯನ್ನು ಖಾತ್ರಿಪಡಿಸಲಾಗಿದೆ ಮತ್ತು ಅದನ್ನು ಆಯುಕ್ತರು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರಾಷ್ಟ್ರದ ‘ಆಜಾದಿ ಕಾ ಅಮೃತ್ ಮಹೋತ್ಸ’ವದ ಅಂಗವಾಗಿ,ವ್ಯಾಪಾರ ಮತ್ತು ಉದ್ಯಮಕ್ಕೆ ಸಹಾಯ ಮಾಡಲು ತೆರಿಗೆದಾರರ ಸೌಲಭ್ಯ ಕೇಂದ್ರವನ್ನು (ಖಿಚಿxಠಿಚಿಥಿeಡಿ ಈಚಿಛಿiಟiಣಚಿಣioಟಿ ಅeಟಿಣಡಿe) ಬೆಳಗಾವಿಯಲ್ಲಿ ರಚಿಸಲಾಗಿದೆ.
ಆಯುಕ್ತಾಲಯ ಕೂಡ, ತೆರಿಗೆ ವಂಚಕರ ವಿರುದ್ಧ ಉತ್ತಮವಾಗಿ ಕಾರ್ಯನಿರ್ವಹಿಸಿದೆ. 2021 ರಸೆಪ್ಟೆಂಬರ್‍ನಲ್ಲಿ ಇ-ವೇ ಬಿಲ್ ಇಲ್ಲದೆ ಸಾಗಿಸುತ್ತಿದ್ದ ಕಾರಣ ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆಯ ಬೃಹತ್ ಸರಕುಗಳನ್ನು ಜಪ್ತಿ ಮಾಡಲಾಗಿದೆ.
ಶೀಘ್ರನಾಶವಾಗುವಂತಹ ಈ ಅಡಿಕೆಯ ಸರಕನ್ನು, ಯಶಸ್ವಿಯಾಗಿ ಹರಾಜು ಮಾಡಿ, ಜಿಎಸ್‍ಟಿ ಮೊತ್ತವನ್ನು ವಸೂಲಿ ಮಾಡಲಾಗಿದೆ. ಬೇಹುಗಾರಿಕೆ ಅಧಿಕಾರಿಗಳು ಕೂಡ, ರೂ.ಮೂರುಕೋಟಿ ನಗದು ಮತ್ತು ರೂ.503 ಕೋಟಿ ಹೂಡುವಳಿ ತೆರಿಗೆ ಜಮೆ ಯಲ್ಲಿ, ಈ ಹಣಕಾಸು ವರ್ಷದಲ್ಲಿ 101ಸಂಖ್ಯೆಯ ಅಪರಾಧ ಪ್ರಕರಣಗಳನ್ನು ದಾಖಲೆಮಾಡುವ ಮೂಲಕ/ಪತ್ತೆ ಮಾಡಲಾಗಿ ಜಿಎಸ್‍ಟಿ ವಸೂಲಿಮಾಡಿದ್ದಾರೆ.
ಬೇಹುಗಾರಿಕೆ ತಂಡದಿಂದಲೂ.549 ಕೋಟಿ(ಖs.549 ಅಡಿoಡಿes) ಬೇಹುಗಾರಿಕೆ ಮತ್ತು ಮರುಪಡೆಯುವಿಕೆ ಪ್ರಕ್ರಿಯೆಯು ನಡೆಯುತ್ತಿದೆ. ತೆರಿಗೆ ವಂಚಕರ ವಿರುದ್ಧ ಕ್ರಮಕೈಗೊಳ್ಳಲು ಜಿಎಸ್‍ಟಿ ಕಾನೂನಿನಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡೂ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.
2021-22 ಆರ್ಥಿಕ ವರ್ಷವನ್ನು ಪೂರ್ಣಗೊಳಿಸಿದ ನಂತರ ತಡವಾದ ಶುಲ್ಕವನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ, ಜಿಎಸ್‍ಟಿ ರಿಟನ್ರ್ಸ್ ಸಲ್ಲಿಸುವಂತೆ ಬೆಳಗಾವಿ ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ವ್ಯಾಪಾರವೃಂದವನ್ನು ವಿನಂತಿಸಿದ್ದಾರೆ.
ಅವರು ದಾವೆಗಳನ್ನು ತಪ್ಪಿಸಲು ಅರ್ಹವಾದ ಹೂಡುವಳಿತೆರಿಗೆಜಮೆ ಅನ್ನು ಮಾತ್ರ ಪಡೆದುಕೊಳ್ಳಲು ತೆರಿಗೆದಾರರಿಗೆ ವಿನಂತಿಸಿದ್ದಾರೆ. ಕೃತಕ ಬುದ್ಧಿಮತ್ತೆ ಪ್ರೇರಿತ ದತ್ತಾಂಶ ಗಣಿಗಾರಿಕೆ ಕಾರ್ಯವಿಧಾನವು ಹೆಚ್ಚು ವಿಕಸನಗೊಂಡಿದೆ ಮತ್ತು ಇದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸುಸ್ತಿದಾರರ ವಿರುದ್ಧ ಕ್ರಮವನ್ನು ತೀವ್ರಗೊಳಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ಕಾರ್ಯವಿಧಾನವು ಪ್ರಾಮಾಣಿಕ ತೆರಿಗೆ ಪಾವತಿದಾರರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ. ಜಿಎಸ್‍ಟಿ ಸುಸ್ತಿದಾರರನ್ನು ಪತ್ತೆ ಮಾಡಲು, ಕೇಂದ್ರ ಮತ್ತು ರಾಜ್ಯ ಜಿಎಸ್‍ಟಿ ಅಧಿಕಾರಿಗಳ ನಡುವೆ ಹೆಚ್ಚಿನ ಸಂವಹನ ಮತ್ತು ಸಮನ್ವಯವಿದೆ ಎಂಬ ಅಂಶವನ್ನು ಅವರು ಎತ್ತಿ ತೋರಿಸಿದ್ದಾರೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಸಂಯೋಜನೆ (COMPOSITION Scheme) ಅಥವಾ ತ್ರೈಮಾಸಿಕ ರಿಟರ್ನ್ ಫೈಲಿಂಗ್ ಮತ್ತು ತೆರಿಗೆಗಳ ಮಾಸಿಕ ಪಾವತಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವುದನ್ನು ಅವರು ಉತ್ತೇಜಿಸಿದರು. ಅವರು ಯಾವುದೇ ಜಿಎಸ್‍ಟಿ ವಂಚನೆಯನ್ನು PREV@gov.in ಗೆ ವರದಿ ಮಾಡಲು ಸಾರ್ವಜನಿಕರಿಗೆ ವಿನಂತಿಸಿದ್ದಾರೆ.
ವ್ಯಾಪಾರ ಮತ್ತು ಉದ್ಯಮವನ್ನು ಮೀಸಲಾದ ವ್ಯಾಪಾರ ಸೌಲಭ್ಯ ಕೇಂದ್ರ ಅಥವಾ ಜಿಎಸ್‍ಟಿಸೇವಾ ಕೇಂದ್ರ ಅಥವಾ TECH@gov.in ನಲ್ಲಿ ಸಂಪರ್ಕಿಸಲು ಅಥವಾ ನೇರವಾಗಿ ಟೆಲಿಗ್ರಾಮ್ https://t.me/belagavicgst ಮೂಲಕ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

