Connect with us

ದಿನದ ಸುದ್ದಿ

ರೂ.10172 ಕೋಟಿ ಜಿಎಸ್‍ಟಿ ದಾಖಲೆ ಸಂಗ್ರಹ ಕೇಂದ್ರ ಜಿ.ಎಸ್.ಟಿ : ಬೆಳಗಾವಿ ವಿಭಾಗದಲ್ಲಿ ಜಿ.ಎಸ್.ಟಿ ಆದಾಯ ದಾಖಲೆ ಸಂಗ್ರಹ..!

Published

on

ಸುದ್ದಿದಿನ,ಬಳ್ಳಾರಿ : ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಬೆಳಗಾವಿ ವಿಭಾಗದಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ರೂ.10172 ಕೋಟಿಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವನ್ನು ಸಾಧಿಸಿದೆ. ಇಂತಹ ಜಿಎಸ್‍ಟಿ ಸಂಗ್ರಹವು, ದೃಢವಾದ ಆರ್ಥಿಕ ಬೆಳವಣಿಗೆಯ ಸಂಕೇತವಾಗಿದೆ ಮತ್ತು ದೇಶವು ಸಾಂಕ್ರಾಮಿಕದ ನೆರಳಿನಿಂದ ದೂರ ಸರಿದಿದೆ ಎಂಬುದರ ಸೂಚಕವಾಗಿದೆ ಎಂದು ಬೆಳಗಾವಿ ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ಅವರು ತಿಳಿಸಿದ್ದಾರೆ.

ಬೆಳಗಾವಿ ಆಯುಕ್ತಾಲಯ ವ್ಯಾಪ್ತಿಯು ದೊಡ್ಡದಾಗಿದ್ದು, ಇದು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹನ್ನೆರಡು ಜಿಲ್ಲೆಗಳಲ್ಲಿ ವ್ಯಾಪಿಸಿದೆ. ದಾಖಲೆಯ ಸಂಗ್ರಹವು ಈ ಜಿಲ್ಲೆಗಳಲ್ಲಿ ರೋಮಾಂಚಕ ಮತ್ತು ದೃಢವಾದ ಆರ್ಥಿಕ ಚಟುವಟಿಕೆಯ ಸೂಚನೆಯಾಗಿದೆ. ಇದು ಈ ಪ್ರದೇಶದ ಜನಸಂಖ್ಯೆಯಲ್ಲಿ ಅಂತರ್ಗತವಾಗಿರುವ ಉದ್ಯಮಶೀಲ ಸ್ವಭಾವವನ್ನು ಎತ್ತಿ ತೋರಿಸುತ್ತದೆ.

ಈ ಜಿಲ್ಲೆಗಳಲ್ಲಿ ಒಟ್ಟು 2,30,566 ತೆರಿಗೆದಾರರು ಜಿಎಸ್‍ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಮತ್ತು ಇವುಗಳನ್ನು ರಾಜ್ಯ ಅಥವಾ ಕೇಂದ್ರ ಜಿಎಸ್‍ಟಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಕೇಂದ್ರ ಜಿಎಸ್‍ಟಿ ಆಡಳಿತದ ಅಡಿಯಲ್ಲಿ ನೋಂದಾಯಿಸಲಾದ ತೆರಿಗೆದಾರರಿಂದ, ಬೆಳಗಾವಿ ಕೇಂದ್ರ ಜಿಎಸ್‍ಟಿ ರಚನೆಯಿಂದ ರೂ.10,172 ಕೋಟಿಗಳನ್ನು ಸಂಗ್ರಹಿಸಲಾಗಿದೆ. 2019-20ನೇ ಸಾಲಿನ ಆಯುಕ್ತಾಲಯದ ಆದಾಯ ರೂ.7,677 ಕೋಟಿ, 2020-21ಕ್ಕೆ ರೂ.7,124 ಕೋಟಿ ಮತ್ತು 2021-22ನೇ ಸಾಲಿಗೆ ರೂ.10,172 ಕೋಟಿಯಷ್ಟಿದ್ದು, ಇದು ಹಿಂದಿನ ವರ್ಷಗಳ ಸಂಗ್ರಹಕ್ಕಿಂತ ಶೇ.43ರಷ್ಟು ಹೆಚ್ಚಳವಿದೆ.

ಉಕ್ಕು, ಸಿಮೆಂಟ್, ಗಣಿಗಾರಿಕೆ, ಸಕ್ಕರೆಯ ಪ್ರಮುಖ ಕೈಗಾರಿಕೆಗಳಾದ ಜೆಎಸ್‍ಡಬ್ಲ್ಯೂ ಸ್ಟೀಲ್, ಕೆಸೋರಾಮ್ ಇಂಡಸ್ಟ್ರೀಸ್, ಓರಿಯಂಟ್ ಸಿಮೆಂಟ್, ಎನ್‍ಎಂಡಿಸಿ ಇತ್ಯಾದಿಗಳು, ಈ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ ಅಪಾರ ಸಂಖ್ಯೆಯ ವರ್ತಕರು ಕೂಡ ದಾಖಲೆಯ ಜಿಎಸ್‍ಟಿ ಸಂಗ್ರಹಕ್ಕೆ ಕೊಡುಗೆ ನೀಡಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ, ಬೆಳಗಾವಿ ಜಿಎಸ್‍ಟಿ ಆಯುಕ್ತಾಲಯ ತೆರಿಗೆದಾರರ ಅನುಸರಣೆಗೆ ಅನುಕೂಲವಾಗುವಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಆಯುಕ್ತರು ವ್ಯಾಪಾರ ಸಂಸ್ಥೆಗಳ ಸದಸ್ಯರೊಂದಿಗೆ ವ್ಯಾಪಕ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು ಮತ್ತು ಅವುಗಳನ್ನು ಪರಿಹರಿಸಲು ನಿರ್ದೇಶನಗಳನ್ನು ನೀಡಿದರು.

ಕಾರ್ಯನಿರತ ಬಂಡವಾಳದ ಸಕಾಲಿಕ ಲಭ್ಯತೆಯನ್ನು ಅನುಸರಿಸುವ ಮೂಲಕ ವ್ಯಾಪಾರ ಮತ್ತು ಉದ್ಯಮವನ್ನು ಸುಗಮಗೊಳಿಸಲು, ಅರ್ಹವಾದ ಜಿಎಸ್‍ಟಿ ಮರುಪಾವತಿಗಳ ಸಕಾಲಿಕ ಮಂಜೂರಾತಿಯನ್ನು ಖಾತ್ರಿಪಡಿಸಲಾಗಿದೆ ಮತ್ತು ಅದನ್ನು ಆಯುಕ್ತರು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರಾಷ್ಟ್ರದ ‘ಆಜಾದಿ ಕಾ ಅಮೃತ್ ಮಹೋತ್ಸ’ವದ ಅಂಗವಾಗಿ,ವ್ಯಾಪಾರ ಮತ್ತು ಉದ್ಯಮಕ್ಕೆ ಸಹಾಯ ಮಾಡಲು ತೆರಿಗೆದಾರರ ಸೌಲಭ್ಯ ಕೇಂದ್ರವನ್ನು (ಖಿಚಿxಠಿಚಿಥಿeಡಿ ಈಚಿಛಿiಟiಣಚಿಣioಟಿ ಅeಟಿಣಡಿe) ಬೆಳಗಾವಿಯಲ್ಲಿ ರಚಿಸಲಾಗಿದೆ.

ಆಯುಕ್ತಾಲಯ ಕೂಡ, ತೆರಿಗೆ ವಂಚಕರ ವಿರುದ್ಧ ಉತ್ತಮವಾಗಿ ಕಾರ್ಯನಿರ್ವಹಿಸಿದೆ. 2021 ರಸೆಪ್ಟೆಂಬರ್‍ನಲ್ಲಿ ಇ-ವೇ ಬಿಲ್ ಇಲ್ಲದೆ ಸಾಗಿಸುತ್ತಿದ್ದ ಕಾರಣ ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆಯ ಬೃಹತ್ ಸರಕುಗಳನ್ನು ಜಪ್ತಿ ಮಾಡಲಾಗಿದೆ.

ಶೀಘ್ರನಾಶವಾಗುವಂತಹ ಈ ಅಡಿಕೆಯ ಸರಕನ್ನು, ಯಶಸ್ವಿಯಾಗಿ ಹರಾಜು ಮಾಡಿ, ಜಿಎಸ್‍ಟಿ ಮೊತ್ತವನ್ನು ವಸೂಲಿ ಮಾಡಲಾಗಿದೆ. ಬೇಹುಗಾರಿಕೆ ಅಧಿಕಾರಿಗಳು ಕೂಡ, ರೂ.ಮೂರುಕೋಟಿ ನಗದು ಮತ್ತು ರೂ.503 ಕೋಟಿ ಹೂಡುವಳಿ ತೆರಿಗೆ ಜಮೆ ಯಲ್ಲಿ, ಈ ಹಣಕಾಸು ವರ್ಷದಲ್ಲಿ 101ಸಂಖ್ಯೆಯ ಅಪರಾಧ ಪ್ರಕರಣಗಳನ್ನು ದಾಖಲೆಮಾಡುವ ಮೂಲಕ/ಪತ್ತೆ ಮಾಡಲಾಗಿ ಜಿಎಸ್‍ಟಿ ವಸೂಲಿಮಾಡಿದ್ದಾರೆ.

ಬೇಹುಗಾರಿಕೆ ತಂಡದಿಂದಲೂ.549 ಕೋಟಿ(ಖs.549 ಅಡಿoಡಿes) ಬೇಹುಗಾರಿಕೆ ಮತ್ತು ಮರುಪಡೆಯುವಿಕೆ ಪ್ರಕ್ರಿಯೆಯು ನಡೆಯುತ್ತಿದೆ. ತೆರಿಗೆ ವಂಚಕರ ವಿರುದ್ಧ ಕ್ರಮಕೈಗೊಳ್ಳಲು ಜಿಎಸ್‍ಟಿ ಕಾನೂನಿನಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡೂ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.

2021-22 ಆರ್ಥಿಕ ವರ್ಷವನ್ನು ಪೂರ್ಣಗೊಳಿಸಿದ ನಂತರ ತಡವಾದ ಶುಲ್ಕವನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ, ಜಿಎಸ್‍ಟಿ ರಿಟನ್ರ್ಸ್ ಸಲ್ಲಿಸುವಂತೆ ಬೆಳಗಾವಿ ಕೇಂದ್ರ ಜಿಎಸ್‍ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ವ್ಯಾಪಾರವೃಂದವನ್ನು ವಿನಂತಿಸಿದ್ದಾರೆ.

ಅವರು ದಾವೆಗಳನ್ನು ತಪ್ಪಿಸಲು ಅರ್ಹವಾದ ಹೂಡುವಳಿತೆರಿಗೆಜಮೆ ಅನ್ನು ಮಾತ್ರ ಪಡೆದುಕೊಳ್ಳಲು ತೆರಿಗೆದಾರರಿಗೆ ವಿನಂತಿಸಿದ್ದಾರೆ. ಕೃತಕ ಬುದ್ಧಿಮತ್ತೆ ಪ್ರೇರಿತ ದತ್ತಾಂಶ ಗಣಿಗಾರಿಕೆ ಕಾರ್ಯವಿಧಾನವು ಹೆಚ್ಚು ವಿಕಸನಗೊಂಡಿದೆ ಮತ್ತು ಇದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸುಸ್ತಿದಾರರ ವಿರುದ್ಧ ಕ್ರಮವನ್ನು ತೀವ್ರಗೊಳಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ಕಾರ್ಯವಿಧಾನವು ಪ್ರಾಮಾಣಿಕ ತೆರಿಗೆ ಪಾವತಿದಾರರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ. ಜಿಎಸ್‍ಟಿ ಸುಸ್ತಿದಾರರನ್ನು ಪತ್ತೆ ಮಾಡಲು, ಕೇಂದ್ರ ಮತ್ತು ರಾಜ್ಯ ಜಿಎಸ್‍ಟಿ ಅಧಿಕಾರಿಗಳ ನಡುವೆ ಹೆಚ್ಚಿನ ಸಂವಹನ ಮತ್ತು ಸಮನ್ವಯವಿದೆ ಎಂಬ ಅಂಶವನ್ನು ಅವರು ಎತ್ತಿ ತೋರಿಸಿದ್ದಾರೆ.

ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಸಂಯೋಜನೆ (COMPOSITION Scheme) ಅಥವಾ ತ್ರೈಮಾಸಿಕ ರಿಟರ್ನ್ ಫೈಲಿಂಗ್ ಮತ್ತು ತೆರಿಗೆಗಳ ಮಾಸಿಕ ಪಾವತಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವುದನ್ನು ಅವರು ಉತ್ತೇಜಿಸಿದರು. ಅವರು ಯಾವುದೇ ಜಿಎಸ್‍ಟಿ ವಂಚನೆಯನ್ನು PREV@gov.in ಗೆ ವರದಿ ಮಾಡಲು ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

ವ್ಯಾಪಾರ ಮತ್ತು ಉದ್ಯಮವನ್ನು ಮೀಸಲಾದ ವ್ಯಾಪಾರ ಸೌಲಭ್ಯ ಕೇಂದ್ರ ಅಥವಾ ಜಿಎಸ್‍ಟಿಸೇವಾ ಕೇಂದ್ರ ಅಥವಾ TECH@gov.in ನಲ್ಲಿ ಸಂಪರ್ಕಿಸಲು ಅಥವಾ ನೇರವಾಗಿ ಟೆಲಿಗ್ರಾಮ್ https://t.me/belagavicgst ಮೂಲಕ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending