ದಿನದ ಸುದ್ದಿ
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
- ಗಿರೀಶ್ ಕುಮಾರ್ ಗೌಡ
ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್‌ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್‌ಡಿಬಿಗೆ ಕಳೆದ ಬಜೆಟ್‌ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್‌ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.
| www.suddidina.com | contact : watsapp 9980346243 |

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ6 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ5 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

