ದಿನದ ಸುದ್ದಿ

ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ

Published

on

ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ.

ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು.

ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version