Connect with us

ರಾಜಕೀಯ

ಸಾಹಿತಿಗಳ ಕೂದಲು ಮುಟ್ಟಲು ಕಾಂಗ್ರೆಸ್ ಬಿಡುವುದಿಲ್ಲ : ಬಿ ಕೆ ಹರಿಪ್ರಸಾದ್

Published

on

ಸುದ್ದಿದಿನ,ಹೊಸಪೇಟೆ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಬುರ್ಗಿ, ಪನ್ಸಾರೆ, ಗೌರಿ ಲಂಕೇಶ್ ಅವರನ್ನ ಬಲಪಂಥೀಯ ಸಂಘಟನೆಗಳು, ಸನಾತನವಾದಿಗಳು ಹತ್ಯೆ ಮಾಡಿದ್ದಾರೆ.ಈಗ ಸಿದ್ರಾಮಯ್ಯ ಸೇರಿದಂತೆ ಅನೇಕ ಸಾಹಿತಿಗಳಿಗೆ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ. ಕಾಂಗ್ರೆಸ್ ಪಕ್ಷ ದೇಶದ ಐಕ್ಯತೆಗಾಗಿ ತ್ಯಾಗ ಬಲಿದಾನ ಮಾಡಲು ಸಿದ್ದ ಎಂದು ಪತ್ರಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ರಾಜೀವ್ ಗಾಂಧಿ, ಇಂದಿರಾಗಾಂಧಿಯವರು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ನಮಗೆ ಯಾವ ಭಯವೂ ಇಲ್ಲ ಕೋಮುವಾದಿಗಳಿಗೆ ಎದೆಯೊಡ್ಡಿ ನಿಲ್ಲಲು ನಾವು ಸಿದ್ದರಿದ್ದೇವೆ. ಆದ್ರೆ ಸಾಹಿತಿಗಳ ಕೂದಲು ಮುಟ್ಟಲು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ರು.

ರಾಜ್ಯದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಪತ್ರ ಬರುತ್ತೆ ಅಂದ್ರೆ ರಾಜ್ಯದ ಗೃಹ ಮರಕೋತಿ ಆಟ ಆಡಕ್ಕೆ ಲಾಯಕ್. ಗೃಹ ಸಚಿವರೇ ಮತೀಯವಾದಿ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಅವರ ಸಂಘಟನೆಗಳು ಬಾಲ ಬಿಚ್ಚಲು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಇಂತಹ ಗೃಹ ಸಚಿವ ಕೂಡಲೇ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳು ಕ್ರಿಯೆಗೆ ಪ್ರತಿಕ್ರಿಯೆ ಸಹಜ ಅಂತಾರೆ ಇಂತವರಿಂದ ರಕ್ಷಣೆ ಸಾಧ್ಯವಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ವೆಂಕಟರಾವ್ ಘೋರ್ಪಡೆ, ರಘು ಗುಜ್ಜಲ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ.

ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜತೆಗೆ, ದೊಡ್ಡ ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಿಂದ 24 ನಾಮಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ 18 ನಾಮಪತ್ರಗಳು ಸಲ್ಲಿಕೆಯಾದರೆ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 11 ನಾಮಪತ್ರಗಳು, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 7 ನಾಮಪತ್ರಗಳು, ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದಿಂದ 12ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 13 ನಾಮಪತ್ರಗಳು ನಿನ್ನೆ ಸಲ್ಲಿಕೆಯಾಗಿದ್ದವು.

ಇದುವರೆಗೆ ಒಟ್ಟು 103 ಅಭ್ಯರ್ಥಿಗಳಿಂದ 156 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಸಂಜೆ ವೇಳೆಗೆ ಅಂತಿಮವಾಗಿ ಕಣದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಾಗುವುದು. ನಾಮಪತ್ರ ವಾಪಸ್ ಪಡೆಯಲು ಇದೇ 20ರಂದು ಕೊನೆಯ ದಿನವಾಗಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಜೂನ್ 3 ರಂದು ಮತದಾನ ನಡೆಯಲಿದೆ. ಮತದಾನದ ಸಂಬಂಧ ಚಿತ್ರದುರ್ಗ ಜಿಲ್ಲೆಯ ಮತದಾನ ಕೇಂದ್ರಗಳ ಪಟ್ಟಿಯನ್ನು ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಿಸಿದರು. ಜಿಲ್ಲೆಯಲ್ಲಿ ಒಟ್ಟು 7 ಮತದಾನ ಕೇಂದ್ರಗಳಿವೆ.

ಮೊಳಕಾಲ್ಮೂರು ತಾಲೂಕಿನ ಶಿಕ್ಷಕರ ಮತದಾರರು ಮೊಳಕಾಲ್ಮೂರು ಪಟ್ಟಣದ ತಾಲೂಕು ಆಡಳಿತ ಕೇಂದ್ರದಲ್ಲಿ ಮತ ಚಲಾಯಿಸಬಹುದು. ಚಳ್ಳಕೆರೆ ನಗರದ ಬಿ.ಎಂ.ಜಿ.ಎಚ್.ಎಸ್ ಶಾಲೆ, ಚಿತ್ರದುರ್ಗ ನಗರದ ಬಾಲಕಿಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ 1, ಕೋಠಡಿ 2 ರಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಿರಿಯೂರು ನಗರದ ತಾಲೂಕಿನ ಕಚೇರಿಯಲ್ಲಿ, ಹೊಸದುರ್ಗ ಪಟ್ಟಣ ತಾಲೂಕು ಕಚೇರಿಯ ಸಭಾಂಗಣದಲ್ಲಿ ಹೊಳಲ್ಕರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮತಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಕ ಮತದಾರರು ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 4 ಸಾವಿರದ 615 ಶಿಕ್ಷಕ ಮತದಾರರು ಇದ್ದಾರೆ ಎಂದು ಅವರು ಅಂಕಿ-ಅಂಶ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ, ಮೈಸೂರು : ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಸಂತ್ರಸ್ತೆಯರಿಗೆ ನೆರವು ನೀಡುವ ಬದಲು, ಸರ್ಕಾರ ಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ. ಪೆನ್‌ಡ್ರೈವ್ ಚಿತ್ರೀಕರಣ ಮಾಡಿದವರು ಹಾಗೂ ಹಂಚಿದವರ ಬಗ್ಗೆ ತನಿಖೆ ಮಾಡದೇ ಕೆಲವು ರಾಜಕಾರಣಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು.

ಭ್ರಷ್ಟಾಚಾರದ ಪೆನ್‌ಡ್ರೈವ್ ನೀಡಿದರೆ ರಾಜ್ಯ ಸರ್ಕಾರ ತನಿಖೆ ನಡೆಸಲು ಸಿದ್ಧವಿದೆಯೇ ಎಂದು ಪ್ರಶ್ನಿಸಿದ್ದಾರೆ.

ರೈತರ ಬರಪರಿಹಾರ ಹಣ ಸಾಲಕ್ಕೆ ಜಮೆ ಮಾಡುವ ಬ್ಯಾಂಕ್ ವರ್ತನೆ ಖಂಡಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ಸುದ್ದಿದಿನ ಡೆಸ್ಕ್ : ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿರುವ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಅವರು ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡದಂತೆ ತಾಕೀತು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌರತ್ವ ಪ್ರಮಾಣಪತ್ರ ಹಸ್ತಾಂತರ

Published

on

ಸುದ್ದಿದಿನ ಡೆಸ್ಕ್ : ಪೌರತ್ವ ತಿದ್ದುಪಡಿ ನಿಯಮಗಳು 2024 ರ ಅಧಿಸೂಚನೆಯ ನಂತರ ಪೌರತ್ವ ಪ್ರಮಾಣ ಪತ್ರಗಳ ಮೊದಲ ಪ್ರತಿಗಳನ್ನು ಕೆಲ ಅರ್ಜಿದಾರರಿಗೆ ಬುಧವಾರ ವಿತರಿಸಲಾಯಿತು.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ 14 ಮಂದಿ ಅರ್ಜಿದಾರರಿಗೆ ಪೌರತ್ವ ಪ್ರಮಾಣ ಪತ್ರಗಳನ್ನು ಹಸ್ತಾಂತರಿಸಿದರು. ಇಮೇಲ್ ಮೂಲಕ ಡಿಜಿಟಲ್ ಸಹಿ ಹೊಂದಿದ ಪ್ರಮಾಣ ಪತ್ರಗಳನ್ನು ಇತರ ಹಲವು ಅರ್ಜಿದಾರರಿಗೆ ನೀಡಲಾಗುತ್ತಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಪೌರತ್ವ ಪ್ರಮಾಣ ಪತ್ರಗಳನ್ನು ಪಡೆದುಕೊಂಡ ಅರ್ಜಿದಾರರನ್ನು ಅಭಿನಂದಿಸಿರುವ ಕೇಂದ್ರ ಗೃಹ ಕಾರ್ಯದರ್ಶಿ, ಪೌರತ್ವ ತಿದ್ದುಪಡಿ ನಿಯಮಗಳು 2024ರ ಪ್ರಮುಖ ಲಕ್ಷಣಗಳನ್ನು ವಿವರಿಸಿದ್ದಾರೆ.

ಕಳೆದ ಮಾರ್ಚ್ 11 ರಂದು ಅಧಿಸೂಚನೆ ಹೊರಡಿಸಲಾಗಿದ್ದ ನಿಯಮಗಳ ಅಡಿಯಲ್ಲಿ 31-12-2024ರವರೆಗೆ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನ-ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending