ದಿನದ ಸುದ್ದಿ
ಜ. 6, 7 ಮತ್ತು 8 ರಂದು ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮ ವಿವರ
ಸುದ್ದಿದಿನ,ದಾವಣಗೆರೆ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.
ಧ್ವಜಾರೋಹಣ
ಜನವರಿ 6 ರಂದು ಬೆಳಿಗ್ಗೆ 7 ರಿಂದ 7-30ರವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಯ್ಯ ಹಿರೇಮಠ ಅವರು ನಾಡಧ್ವಜಾರೋಹಣ ನೆವೇರಿಸಲಿದ್ದಾರೆ.
ಮೆರವಣಿಗೆ
ಅಂದು ಬೆಳಿಗ್ಗೆ 7-30ರಿಂದ 10-30ರವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ. ಶ್ರೀ ಪುಸಿದ್ದೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣ, ಆರ್‍ಟಿಒ ಕಚೇರಿ ಮಾರ್ಗವಾಗಿ ಸಮ್ಮೇಳ ವೇದಿಕೆ ತಲುಪಲಿದೆ. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಉಪವಿಭಾಗಾಧಿಕಾರಿಗಳಾದ ಶಿವಾನಂದ ಉಳ್ಳೆಗಡ್ಡಿ, ರಾಯಪ್ಪ ಹುಣಸಗಿ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಜಯಾನಂದ ಜಾವಣ್ಣನವರ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಪಾಲ್ಗೊಳ್ಳಲಿದ್ದಾರೆ.
ಸಮಾರಂಭ ಉದ್ಘಾಟನೆ
ಬೆಳಿಗ್ಗೆ 10-30ಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ನೆರವೇರಿಸಿ ಉದ್ಘಾಟನಾ ನುಡಿಗಳನ್ನಾಡುವರು. ವಿಧಾನ ಪರಿಷತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಶಾಸಕರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ನೆಹರು ಓಲೇಕಾರ ಅವರು ಸ್ವಾಗತಿಸುವರು.
ಕಾರ್ಮಿಕ ಖಾತೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರಿಂದ ಮೊದಲ ಮಾತು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರಿಂದ ಆಶಯ ನುಡಿ, ಸಮ್ಮೇಳನಾಧ್ಯಕ್ಷರಾದ ಡಾ.ದೊಡ್ಡರಂಗೇಗೌಡರಿಂದ ಭಾಷಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪರಿಷತ್ತಿನ ಪುಸ್ತಕಗಳ ಬಿಡುಗಡೆ, ಕನ್ನಡ ಮತ್ತು ಸಂಸ್ಕøತಿ ಇಂಧನ ಖಾತೆ ಸಚಿವರಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ, ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಂದ ವೇದಿಕೆ ಉದ್ಘಾಟನೆ, ಸಂಸದ ಶಿವಕುಮಾರ ಉದಾಸಿ ಅವರಿಂದ ಹಾವೇರಿ ಜಿಲ್ಲಾ ಪುಸ್ತಕಗಳ ಬಿಡುಗಡೆ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಚಿತ್ರಕಲಾಪ್ರದರ್ಶನ, ಶಾಸಕರಾದ ಅರುಣಕುಮಾರ ಪೂಜಾರ ಅವರು ವಾಣಿಜ್ಯ ಮಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಪುಸ್ತಕ ಮಳಿಗೆ ಉದ್ಘಾಟಿಸುವರು.
ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ವಿಧಾನ ಪರಿಷತ್ ಸದಸ್ಯರಾದ ಆರ್.ಶಂಕರ್ ವ\ಸ್ತು ಪ್ರದರ್ಶನ ಹಾಗೂ ಪ್ರದೀಪ ಶೆಟ್ಟರ ಮಾಧ್ಯಮ ಕೇಂದ್ರ ಉದ್ಘಾಟಿಸಲಿದ್ದಾರೆ.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ, ವಿಧಾನ ಸಭೆ ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ, ರುದ್ರಪ್ಪ ಲಮಾಣಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಉಪಸ್ಥಿತರಿರುವರು.
ಸಾಮರಸ್ಯದ ಭಾವ- ಕನ್ನಡದ ಜೀವ
ಮಧ್ಯಾಹ್ನ 2 ರಿಂದ 4ರವರೆಗೆ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಗೋಷ್ಠಿ-1 “ಸಾಮರಸ್ಯದ ಭಾವ-ಕನ್ನಡದ ಜೀವ” ಜರುಗಲಿದ್ದು, ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಶಿಕ್ಷಣ ತಜ್ಞ ಡಾ,ಗುರುರಾಜ ಕರ್ಜಗಿ ಅವರಿಂದ ಆಶಯನುಡಿ, ಕನಕರ ಭಾವೈಕ್ಯತಾ ದೃಷ್ಟಿ ಕುರಿತು ಡಾ.ವೈ.ಎಂ.ಯಾಕೊಳ್ಳಿ, ಶರೀಫರ ಸಾಮರಸ್ಯ ದೃಷ್ಟಿ ಕುರಿತು ಡಾ.ಅಡಿವೆಪ್ಪ ವಾಲಿ ಹಾಗೂ ಸರ್ವಜ್ಞರ ಸಾಮಾಜಿಕ ದೃಷ್ಟಿ ಕುರಿತು ಡಾ.ನಾಗರಾಜ ದ್ಯಾಮನಕೊಪ್ಪ ವಿಷಯ ಮಂಡನೆ ಮಾಡಲಿದ್ದಾರೆ.
ಗೋಷ್ಠಿ 2 ಸಂಜೆ 4 ರಿಂದ 6ರವರೆಗೆ ಜರುಗಲಿದ್ದು, ಹಿರಿಯ ಕವಿ ಸರಜೂ ಕಾಟ್ಕರ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಹಿರಿಯ ಕವಯತ್ರಿ ಡಾ.ವಿಜಯಶ್ರೀ ಸಬರದ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯಲ್ಲಿ 25 ಕವಿಗಳು ಭಾಗವಹಿಸಲಿದ್ದಾರೆ.
ಸಾಧಕರಿಗೆ ಸನ್ಮಾನ
ಸಂಜೆ 6 ರಿಂದ 7 ಗಂಟೆವರೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ಚಲನಚಿತ್ರ ಕಲಾವಿದ ರಮೇಶ ಅರವಿಂದ ಆಶಯ ನುಡಿಗಳನ್ನಾಡುವರು. ವಿಶ್ರಾಂತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಸನ್ಮಾನಿಸುವರು.
ಸನ್ಮಾನಿತರು
ನಿವೃತ್ತ ನ್ಯಾಯಾಧೀಶರು ಹಾಗೂ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪನವರ ಮಗ ನಿವೃತ್ತ ಹಿರಿಯ ಸೇನಾಧಿಕಾರಿ ಏರ್ ಮಾರ್ಷಲ್ ಕೆ.ಸಿ. ಕಾರಿಯಪ್ಪ, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್., ಫರ್ಡಿನೆಂಡ್ ಕಿಟ್ವೆಲ್ ಅವರ ಮರಿಮೊಮ್ಮಗ ಯಾರ್ಕ್‍ಕಟ್ಟೆಲ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮದ ಸಿಇಒ ಹರಿಮಾರರ್, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಾಧಿಪತಿ ಮಾಲ್ಡೀವ್ ದೇಶದ ಗೌರವ ಕೌನ್ಸಿಲ್ ಜನರಲ್ ಡಾ.ವಿ.ಜಿ.ಜೋಸೆಫ್, ಚಲನಚಿತ್ರ ಕಲಾವಿದ ರಮೇಶ ಅರವಿಂದ, ಹಿರಿಯ ವೈದ್ಯ ಡಾ.ಶರಣ ಪಾಟೀಲ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ.ಹಿರೇಮಠ, ನವದೆಹಲಿ ಅಂಚೆ ಸೇವಾ ಮಂಡಳಿ ಸದಸ್ಯ ಚಾಲ್ರ್ಸ್ ಲೋಬೋ, ಹಿರಿಯ ಪೊಲೀಸ್ ಅಧಿಕಾರಿ ಅಮರ್‍ಕುಮಾರ್ ಪಾಂಡೆ, ಹೊರನಾಡ ಕನ್ನಡಿ ಬ್ರಹ್ಮಕುಮಾರ ಮೃತ್ಯುಂಜಯ, ಹಿರಿಯ ಸಾಹಿತಿ ಬ.ಫ.ಯಲಿಗಾರ, ರಂಗಭೂಮಿ ಕಲಾವಿದ ಗೋಪಾಲಕೃಷ್ಣ ನಾಯರಿ, ಜರ್ಮನಿ ನಗರಸಭಾ ಸದಸ್ಯ ವಿದುಷಿ ನಂದಿನಿ ನಾರಾಯಣ್, ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ, ಹಿರಿಯ ಸಾಹಿತಿ ಶ್ರೀಮತಿ ವಿದ್ಯಾವತಿ ಅಂಕಲಗಿ, ಹಿರಿಯ ಸಾಹಿತಿ ವಿದ್ಯಾವಾಚಸ್ಪತಿ ಡಾ.ಕವಿತಾಕೃಷ್ಣ, ರಂಗಕರ್ಮಿ ಡಿ.ವಿ.ಎಸ್.ಗುಪ್ತ, ಸಹಕಾರ ಕ್ಷೇತ್ರದ ಸಾಧಕ ಶ್ರೀಮತಿ ಶಕುಂತಲಾ ಭಟ್ ಹಳೆಯಂಗಡಿ, ಹಿರಿಯ ಸಾಹಿತಿ ಪ್ರೊ. ಅನ್ನದಾನಿ ಹಿರೇಮಠ, ಸಮಾಜ ಸೇವಕ ಚಂದ್ರಶೇಖರ ಬಾಳೆ, ಕನ್ನಡ ಸೇವಾನಿರತರಾದ ರಾಮಲಿಂಗ ಶೆಟ್ಟಿ, ಹೊರದೇಶದ ಕನ್ನಡಿಗರಾದ ಕನ್ನಡತಿ ಭಾಗೀರಥಿ, ಕನ್ನಡಪರ ಹೋರಾಟಗಾರ ಮಹಾದೇವ ತಳವಾರ, ಸಂಘಟಕ ಟಿ.ಸಿ.ವೆಂಕಟಾಚಲಪತಿ, ಸಾಮಾಜಿಕ ಹೋರಾಟಗಾರ ಫಕೀರಪ್ಪ ಹೊತ್ನಳ್ಳಿ, ಹಿರಿಯ ಪತ್ರಕರ್ತ ರಾಜು ನದಾಫ, ಹಿರಿಯ ಸಂಶೋಧಕ ಡಾ.ಎಸ್.ಡಿ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಜೆ 7 ರಿಂದ ರಾತ್ರಿ 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ವೇದಿಕೆ-2 ಪಾಪು-ಚಂಪಾ ವೇದಿಕೆ ಹೆಳವನಕಟ್ಟೆ ಗಿರಿಯ ಮಹಾಮಂಟ: ಜನವರಿ 6 ರಂದು ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಹಾವೇರಿ ಜಿಲ್ಲಾ ದರ್ಶನ ಗೋಷ್ಠಿ-1 ಜರುಗಲಿದೆ. ಹಿರಿಯ ಸಾಹಿತಿ ಹನುಮಂತಗೌಡ ಗೊಲ್ಲರ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಜೀವರಾಜ ಛತ್ರದ ಆಶಯ ನುಡಿಗಳನ್ನಾಡಲಿದ್ದಾರೆ. ರಜತ ಸಂಭ್ರಮದಲ್ಲಿ ಹಾವೇರಿ ಜಿಲ್ಲೆಯ ಕುರಿತು ವೈ.ಬಿ.ಆಲದಕಟ್ಟಿ, ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಕುರಿತು ಡಾ.ಎಸ್.ಪಿ.ಗೌಡರ್. ಕರ್ನಾಟಕ ಏಕೀಕರಣದಲ್ಲಿ ಹಾವೇರಿ ಜಿಲ್ಲೆಯ ಪಾತ್ರ ಕುರಿತು ಮಾರುತಿ ಶಿಡ್ಲಾಪುರ ಹಾಗೂ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಕುರಿತು ಡಾ.ರಮೇಶ ತೆವರಿ ಅವರು ಮಾತನಾಡಲಿದ್ದಾರೆ.
ಗೋಷ್ಠಿ-2 “ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕರ್ನಾಟಕದ ಕೊಡುಗೆ” ಸಂಜೆ 4 ರಿಂದ 5 ಗಂಟೆವರೆಗೆ ಜರುಗಲಿದೆ. ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ಕುರಿತು ಪ್ರೊ.ಟಿ.ಜಿ.ಹರೀಶ್ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡ ಪ್ರತಿಕೋದ್ಯಮದ ಕೊಡುಗಡೆ ಕುರಿತು ವಿಲಾಸ ಮೇಲಗಿರಿ ಅವರು ಮಾತನಾಡಲಿದ್ದಾರೆ.
ಗೋಷ್ಠಿ-3 “ಕನ್ನಡ ದಿಗ್ಗಜರು” ಸಂಜೆ 5 ರಿಂದ 7 ಗಂಟೆವರೆಗೆ ಜರುಗಲಿದೆ.ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಅವರು ಆಶಯ ನುಡಿಗಳನ್ನಾಡಲಿದ್ದಾರೆ.
ನಾಡೋಜ ಡಾ.ಪಾಟೀಲ ಪುಟ್ಟಪ್ಪ ಕುರಿತು ಡಾ.ಮಲ್ಲಿಕಾರ್ಜುನ ಸಿದ್ದಣ್ಣನವರ, ಪ್ರೊ.ಚಂದ್ರಶೇಖರ ಪಾಟೀಲ ಕುರಿತು ವಿಜಯಕಾಂತ ಪಾಟೀಲ, ಡಾ.ಮಹಾದೇವ ಬಣಕಾರ ಕುರಿತು ಡಾ.ಪ್ರೇಮಾನಂದ ಲಕ್ಕಣ್ಣನವರ ಹಾಗೂ ಡಾ.ಶ್ರೀನಿವಾಸ ಹಾವನೂರ ಕುರಿತು ಸಂಜಯ ಹಾವನೂರ ಅವರು ಮಾತನಾಡಲಿದ್ದಾರೆ. ಸಂಜೆ 7 ರಿಂದ ರಾತ್ರಿ 10-30ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ವೇದಿಕೆ-3 ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ವೇದಿಕೆ
ಗೋಷ್ಠಿ-1 ಶತಮಾನ-ಪುರುಷರು ಈ ಮಹನೀಯರ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಧ್ಯಾಹ್ನ 2 ರಿಂದ 3-30ರವರೆಗೆ ಜರುಗಲಿದೆ. ಹಿರಿಯ ಜಾನಪದ ವಿದ್ವಾಂಸ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಬರಹಗಾರ ಬಾಬು ಕೃಷ್ಣಮೂರ್ತಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ.
ಜಿ.ನಾರಾಯಣ ಕುರಿತು ಕೆ.ಟಿ.ಶ್ರೀಕಂಠೇಗೌಡ, ಡಾ.ಹಿರೇಮಲ್ಲೂರು ಈಶ್ವರನ್ ಕುರಿತು ಪ್ರೊ.ಶಶಿಧರ ತೋಡ್ಕರ್, ಸು.ರಂ.ಎಕ್ಕುಂಡಿ ಕುರಿತು ಜೆ.ಎಂ.ರಾಜಶೇಖರ, ಶಾಂತವೇರಿ ಗೋಪಾಲಗೌಡ ಕುರಿತು ನೆಂಪೆ ದೇವರಾಜ, ಹಾಸ್ಯ ನಟ ನರಸಿಂಹರಾಜು ಕುರಿತು ಶ್ರೀಮತಿ ಸುಧಾ ನರಸಿಂಹರಾಜು ಅವರು ಮಾತನಾಡಲಿದ್ದಾರೆ.
ಗೋಷ್ಠಿ-2: ಮಧ್ಯಾಹ್ನ 3-30 ರಿಂದ 5-15ರವರೆಗೆ ಸಂಕೀರ್ಣ ಗೋಷ್ಠಿ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಗಮಕ ಕಲೆ ಅಳಿವು ಉಳಿವು ಕುರಿತು ಡಾ.ಎ.ವಿ.ಪ್ರಸನ್ನ, ಲಿಂಗತ್ವ ಅಲ್ಪಸಂಖ್ಯಾತರ ಭವಿಷ್ಯ ಮತ್ತು ಭರವಸೆಗಳು ಕುರಿತು ಶ್ರೀಮತಿ ಕೆ.ಸಿ.ಅಕ್ಷತಾ, ಮೊಬೈಲ್: ಸಾಧಕ ಮತ್ತು ಬಾಧಕಗಳು ಕುರಿತು ಡಾ.ಶುಭಾ ಮರವಂತೆ, ಪೊಲೀಸ್ ಸಾಹಿತ್ಯ ಕುರಿತು ಡಿ.ಸಿ.ರಾಜಪ್ಪ ಅವರು ಮಾತನಾಡಲಿದ್ದಾರೆ.
ಗೋಷ್ಠಿ-3: ಸಂಜೆ 5 ರಿಂದ 15 ರಿಂದ 7 ಗಂಟೆವರೆಗೆ ಬೆಳ್ಳಿತೆರೆ-ಕಿರುತೆರೆ ಜರುಗಲಿದೆ. ಹಿರಿಯ ಕಲಾವಿದ ಎಚ್.ಜಿ.ದತ್ತಾತ್ರೇಯ(ದತ್ತಣ್ಣ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್ ಆಶಯ ನುಡಿಗಳನ್ನಾಡಲಿದ್ದಾರೆ.
ಚಲನಚಿತ್ರ ಸಾಹಿತ್ಯ ಪರಂಪರೆ ಕುರಿತು ಎನ್.ಎಸ್.ಶ್ರೀಧರಮೂರ್ತಿ, ಸಮಾಜದ ಮೇಲೆ ಧಾರಾವಾಹಿಗಳ ಪರಿಣಾಮ ಕುರಿತು ಶ್ರೀಮತಿ ಕುಸುಮ ಆಯರಹಳ್ಳಿ ಹಾಗೂ ಕನ್ನಡ ಚಲನಚಿತ್ರಗಳಲ್ಲಿ ದೇಶಭಕ್ತಿ ಮತ್ತು ಕನ್ನಡಪರ ಗೀತಗೆಳು ಕುರಿತು ಪ್ರಕಾಶ್ ಮಲ್ಪೆ ಅವರು ಮಾತನಾಡಲಿದ್ದಾರೆ. ಸಂಜೆ 7 ರಿಂದ ರಾತ್ರು 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಜನವರಿ 7 ಶನಿವಾರ ವೇದಿಕೆ-1 ಗೋಷ್ಠಿ-3
ಕನ್ನಡದಲ್ಲಿ ಕಾನೂನು ಸಾಹಿತ್ಯ ಬೆಳಿಗ್ಗೆ 9 ರಿಂದ 10 ಗಂಟೆವರೆಗೆ ಜರುಗಲಿದೆ. ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ಅವರಿಂದ ಆಶಯ ನುಡಿ, ಶ್ರೀ ಸಾಮಾನ್ಯನಿಗೆ ಕನ್ನಡದಲ್ಲಿ ಕಾನೂನಿನ ಅರಿವು ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿದ್ದಪ್ಪ ಕೆಂಪಗೌಡರ ಹಾಗೂ ಕಾನೂನು ವಿಷಯಗಳ ಕುರಿತು ಸಾಹಿತ್ಯ ರಚನೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಬಿ.ಶಿವಲಿಂಗೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.
ವಿಶೇಷ ಉಪನ್ಯಾಸ
ಬೆಳಿಗ್ಗೆ 10 ರಿಂದ 11 ಗಂಟವೆರೆಗ ವಿಶೇಷ ಉಪನ್ಯಾಸ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ, ಸರಸ್ವತಿ ಸಮ್ಮಾನ್ ಪುರಸ್ಕøತರ ಕುರಿತ ಗ್ರಂಥಗಳ ಬಿಡುಗಡೆ. ಹಿರಿಯ ಬರಹಗಾರ ಡಾ.ಪ್ರೇಮಶೇಖರ ಪ್ರಸ್ತಾವನೆ, ಸರಸ್ವತಿ ಸಮ್ಮಾನ ಪುರಸ್ಕøತ ಡಾ.ಎಸ್.ಎಲ್. ಭೈರಪ್ಪ ಹಾಗೂ ಹಿರಿಯ ಸಾಹಿತಿ ಡಾ.ಪ್ರಧಾನ ಗುರುದತ್ತ ಅವರು ಉಪನ್ಯಾಸ ನೀಡಲಿದ್ದಾರೆ. ಸರಸ್ವತಿ ಸಮ್ಮಾನ ಪುರಸ್ಕøತ ಎಂ.ವೀರಪ್ಪ ಮೊಯಿಲಿ ಉಪಸ್ಥಿತರಿರುವರು.
ಗೋಷ್ಠಿ-4: ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಯುವ ಕರ್ನಾಟಕ ನಾಡು-ನುಡಿ ಚಿಂತನೆ ಜರುಗಲಿದೆ.
ಹಿರಿಯ ಕ್ರಿಕೆಟ್ ಆಟಗಾರ ವೆಂಕಟೇಶ ಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀಮತಿ ಮಾಲತಿ ಹೊಳ್ಳ ಅವರು ಆಶಯ ನುಡಿಗಳನ್ನಾಡುವರು. ಯುವ ಕನ್ನಡಿಗರಿಗೆ ಸೈನ್ಯದಲ್ಲಿ ಅವಕಾಶಗಳ ಕುರಿತು ಸ್ಕ್ವಾಡ್ರನ್ ಲೀಡರ್ ವಿನುತಾ ಜಿ.ಆರ್, ಯುವ ಕರ್ನಾಟಕ ಹೊಸ ತಲೆಮಾರಿನ ಮನಸ್ಥಿತಿ ಕುರಿತು ಪ್ರೊ.ಸ್ಮøತಿ ಹರಿತ್ಸ ಹಾಗೂ ಯುವ ಲೇಖಕರು ಮತ್ತು ಪ್ರಸ್ತುತ ಸಾಹಿತ್ಯ ಕುರಿತು ಶ್ರೀಮತಿ ದೀಪಾ ಹಿರೇಗುತ್ತಿ ಮಾತನಾಡಲಿದ್ದಾರೆ.
ಗೋಷ್ಠಿ-5: ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಮಾಧ್ಯಮ
ಹೊಸತನ ಮತ್ತು ಆವಿಷ್ಕಾರಗಳು ವಿಷಯ ಜರುಗಲಿದೆ. ಬೆಂಗಳೂರು ವಿವಿ ಹಿರಿಯ ಪ್ರಾಧ್ಯಾಪಕ ಡಾ.ಬಿ.ಕೆ.ರವಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಮೋಹನ ಹೆಗಡೆ ಆಶಯ ನುಡಿಗಳನ್ನಾಡಲಿದ್ದಾರೆ. ಮುದ್ರಣ ಮಾಧ್ಯಮದಲ್ಲಿ ಕನ್ನಡದ ಬಳಕೆ ಕುರಿತು ಸುದರ್ಶನ್ ಚನ್ನಂಗಿಹಳ್ಳಿ, ಸಾಮಾಜಿಕ ಜಾಲತಾಣಗಳು: ಅರಿವು ಮತ್ತು ಅಪಾಯ ಕುರಿತು ಎಚ್.ಎನ್.ಸುದರ್ಶನ್ ಹಾಗೂ ಡಿಜಿಟಲ್ ಮಾಧ್ಯಮದ ಮುಂದಿನ ಸವಾಲುಗಳು ಕುರಿತು ಡಾ.ಸಿಬಂತಿ ಪದ್ಮನಾಭ ಅವರು ವಿಷಯ ಮಂಡಿಸಲಿದ್ದಾರೆ.
ಗೋಷ್ಠಿ-6: ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಶಿಕ್ಷಣದಲ್ಲಿ ಕನ್ನಡದ ಅಸ್ಮಿತೆ ಜರುಗಲಿದೆ. ವಿಶ್ರಾಂತ ಕುಲಪತಿಗಳು ಡಾ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪ್ರಾಧ್ಯಾಪಕ ಡಾ.ಮಾಧವ ಪೆರಾಜೆ ಆಶಯ ನುಡಿಗಳನ್ನಾಡಲಿದ್ದಾರೆ. ಕನ್ನಡ ಶಾಲೆಗಳ ವಸ್ತುಸ್ಥಿತಿ ಕುರಿತು ಡಾ.ಎಚ್.ಎನ್.ಮುರಳೀಧರ, ಕನ್ನಡ ಭಾಷೆಯ ಮೇಲೆ ಇಂಗ್ಲಿಷ್ ಮಾಧ್ಯಮ ಬೀರುವ ಪರಿಣಾಮಗಳು ಕುರಿತು ಡಾ.ಹರ್ಷಿತ್ ಜೋಸೆಫ್, ಉನ್ನತ ಶಿಕ್ಷಣದಲ್ಲಿ ಕನ್ನಡ ಪಠ್ಯ ಮತ್ತು ಬೋಧನೆ ಕುರಿತು ಡಾ.ಧನಂಜಯ್ ಕುಂಬ್ಳೆ ಅವರು ವಿಷಯ ಮಂಡಿಸಲಿದ್ದಾರೆ.
ಸಂಜೆ 5 ರಿಂದ 6 ಗಂಟೆವರೆಗೆ ಸಮ್ಮೇಳನಾಧ್ಯಕ್ಷರ ಜೊತೆ ಮಾತು-ಮಂಥನ ಜರುಗಲಿದ್ದು, ಸಮ್ಮೇಳನಾದ್ಯಕ್ಷರಾದ ಡಾ.ದೊಡ್ಡರಂಗೇಗೌಡ ಅವರು ಪಾಲ್ಗೊಳ್ಳಲಿದ್ದಾರೆ. ಡಾ.ತಲಕಾಡು ಚಿಕ್ಕರಂಗೇಗೌಡ ಪ್ರಧಾನ ನಿರ್ವಹಣೆ ಮಾಡಲಿದ್ದಾರೆ.
ಮಾತು ಮಂಥನದಲ್ಲಿ ಮಹಾಬಲಮೂರ್ತಿ ಕೊಡ್ಲೆಕೆರೆ, ಶ್ರೀಮತಿ ಸಂಕಮ್ಮ ಜಿ ಸಂಕಣ್ಣನವರ, ಶ್ರೀಮಾಲತೇಶ ಅಂಗೂರ, ವಿ.ಮನೋಹರ, ಡಾ.ಶೀಲಾದೇವಿ ಎಸ್.ಮರಳಿಮಠ, ಬಾಪು ಪದ್ಮನಾಭ, ಡಾ. ಶಾರದಾ ಮುಳ್ಳೂರು, ಬುಕ್ಕಾಪಟ್ನ ವಾಸು, ರುದ್ರಣ್ಣ ಹರ್ತಿಕೋಟೆ, ಅಂಜನ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ.
ಸಾಧಕರಿಗೆ ಸನ್ಮಾನ: ಸಂಜೆ 6 ರಿಂದ 7ಗಂಟೆವರೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಕಾಗಿನೆಲೆ ಶ್ರೀ ಕ್ಷೇತ್ರದ ನಿರಂಜನಾನಂದಪುರಿ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಜಯದೇವ ಆಸ್ಪತ್ರೆಯ ನಾಡೋಜ ಡಾ.ಸಿ.ಎನ್.ಮಂಜುನಾಥ ಆಶಯ ನುಡಿಗಳನ್ನಾಡಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರು ಸನ್ಮಾನಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

