Connect with us

ದಿನದ ಸುದ್ದಿ

ಜ. 6, 7 ಮತ್ತು 8 ರಂದು ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮ ವಿವರ

Published

on

ಸುದ್ದಿದಿನ,ದಾವಣಗೆರೆ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.

ಧ್ವಜಾರೋಹಣ

ಜನವರಿ 6 ರಂದು ಬೆಳಿಗ್ಗೆ 7 ರಿಂದ 7-30ರವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಯ್ಯ ಹಿರೇಮಠ ಅವರು ನಾಡಧ್ವಜಾರೋಹಣ ನೆವೇರಿಸಲಿದ್ದಾರೆ.

ಮೆರವಣಿಗೆ

ಅಂದು ಬೆಳಿಗ್ಗೆ 7-30ರಿಂದ 10-30ರವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ. ಶ್ರೀ ಪುಸಿದ್ದೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣ, ಆರ್‍ಟಿಒ ಕಚೇರಿ ಮಾರ್ಗವಾಗಿ ಸಮ್ಮೇಳ ವೇದಿಕೆ ತಲುಪಲಿದೆ. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಉಪವಿಭಾಗಾಧಿಕಾರಿಗಳಾದ ಶಿವಾನಂದ ಉಳ್ಳೆಗಡ್ಡಿ, ರಾಯಪ್ಪ ಹುಣಸಗಿ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಜಯಾನಂದ ಜಾವಣ್ಣನವರ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಪಾಲ್ಗೊಳ್ಳಲಿದ್ದಾರೆ.

ಸಮಾರಂಭ ಉದ್ಘಾಟನೆ

ಬೆಳಿಗ್ಗೆ 10-30ಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ನೆರವೇರಿಸಿ ಉದ್ಘಾಟನಾ ನುಡಿಗಳನ್ನಾಡುವರು. ವಿಧಾನ ಪರಿಷತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಶಾಸಕರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ನೆಹರು ಓಲೇಕಾರ ಅವರು ಸ್ವಾಗತಿಸುವರು.

ಕಾರ್ಮಿಕ ಖಾತೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರಿಂದ ಮೊದಲ ಮಾತು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರಿಂದ ಆಶಯ ನುಡಿ, ಸಮ್ಮೇಳನಾಧ್ಯಕ್ಷರಾದ ಡಾ.ದೊಡ್ಡರಂಗೇಗೌಡರಿಂದ ಭಾಷಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪರಿಷತ್ತಿನ ಪುಸ್ತಕಗಳ ಬಿಡುಗಡೆ, ಕನ್ನಡ ಮತ್ತು ಸಂಸ್ಕøತಿ ಇಂಧನ ಖಾತೆ ಸಚಿವರಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ, ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಂದ ವೇದಿಕೆ ಉದ್ಘಾಟನೆ, ಸಂಸದ ಶಿವಕುಮಾರ ಉದಾಸಿ ಅವರಿಂದ ಹಾವೇರಿ ಜಿಲ್ಲಾ ಪುಸ್ತಕಗಳ ಬಿಡುಗಡೆ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಚಿತ್ರಕಲಾಪ್ರದರ್ಶನ, ಶಾಸಕರಾದ ಅರುಣಕುಮಾರ ಪೂಜಾರ ಅವರು ವಾಣಿಜ್ಯ ಮಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಪುಸ್ತಕ ಮಳಿಗೆ ಉದ್ಘಾಟಿಸುವರು.

ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ವಿಧಾನ ಪರಿಷತ್ ಸದಸ್ಯರಾದ ಆರ್.ಶಂಕರ್ ವ\ಸ್ತು ಪ್ರದರ್ಶನ ಹಾಗೂ ಪ್ರದೀಪ ಶೆಟ್ಟರ ಮಾಧ್ಯಮ ಕೇಂದ್ರ ಉದ್ಘಾಟಿಸಲಿದ್ದಾರೆ.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ, ವಿಧಾನ ಸಭೆ ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ, ರುದ್ರಪ್ಪ ಲಮಾಣಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಉಪಸ್ಥಿತರಿರುವರು.

ಸಾಮರಸ್ಯದ ಭಾವ- ಕನ್ನಡದ ಜೀವ

ಮಧ್ಯಾಹ್ನ 2 ರಿಂದ 4ರವರೆಗೆ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಗೋಷ್ಠಿ-1 “ಸಾಮರಸ್ಯದ ಭಾವ-ಕನ್ನಡದ ಜೀವ” ಜರುಗಲಿದ್ದು, ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಶಿಕ್ಷಣ ತಜ್ಞ ಡಾ,ಗುರುರಾಜ ಕರ್ಜಗಿ ಅವರಿಂದ ಆಶಯನುಡಿ, ಕನಕರ ಭಾವೈಕ್ಯತಾ ದೃಷ್ಟಿ ಕುರಿತು ಡಾ.ವೈ.ಎಂ.ಯಾಕೊಳ್ಳಿ, ಶರೀಫರ ಸಾಮರಸ್ಯ ದೃಷ್ಟಿ ಕುರಿತು ಡಾ.ಅಡಿವೆಪ್ಪ ವಾಲಿ ಹಾಗೂ ಸರ್ವಜ್ಞರ ಸಾಮಾಜಿಕ ದೃಷ್ಟಿ ಕುರಿತು ಡಾ.ನಾಗರಾಜ ದ್ಯಾಮನಕೊಪ್ಪ ವಿಷಯ ಮಂಡನೆ ಮಾಡಲಿದ್ದಾರೆ.

ಗೋಷ್ಠಿ 2 ಸಂಜೆ 4 ರಿಂದ 6ರವರೆಗೆ ಜರುಗಲಿದ್ದು, ಹಿರಿಯ ಕವಿ ಸರಜೂ ಕಾಟ್ಕರ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಹಿರಿಯ ಕವಯತ್ರಿ ಡಾ.ವಿಜಯಶ್ರೀ ಸಬರದ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯಲ್ಲಿ 25 ಕವಿಗಳು ಭಾಗವಹಿಸಲಿದ್ದಾರೆ.

ಸಾಧಕರಿಗೆ ಸನ್ಮಾನ

ಸಂಜೆ 6 ರಿಂದ 7 ಗಂಟೆವರೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ಚಲನಚಿತ್ರ ಕಲಾವಿದ ರಮೇಶ ಅರವಿಂದ ಆಶಯ ನುಡಿಗಳನ್ನಾಡುವರು. ವಿಶ್ರಾಂತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಸನ್ಮಾನಿಸುವರು.

ಸನ್ಮಾನಿತರು

ನಿವೃತ್ತ ನ್ಯಾಯಾಧೀಶರು ಹಾಗೂ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪನವರ ಮಗ ನಿವೃತ್ತ ಹಿರಿಯ ಸೇನಾಧಿಕಾರಿ ಏರ್ ಮಾರ್ಷಲ್ ಕೆ.ಸಿ. ಕಾರಿಯಪ್ಪ, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್., ಫರ್ಡಿನೆಂಡ್ ಕಿಟ್ವೆಲ್ ಅವರ ಮರಿಮೊಮ್ಮಗ ಯಾರ್ಕ್‍ಕಟ್ಟೆಲ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮದ ಸಿಇಒ ಹರಿಮಾರರ್, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಾಧಿಪತಿ ಮಾಲ್ಡೀವ್ ದೇಶದ ಗೌರವ ಕೌನ್ಸಿಲ್ ಜನರಲ್ ಡಾ.ವಿ.ಜಿ.ಜೋಸೆಫ್, ಚಲನಚಿತ್ರ ಕಲಾವಿದ ರಮೇಶ ಅರವಿಂದ, ಹಿರಿಯ ವೈದ್ಯ ಡಾ.ಶರಣ ಪಾಟೀಲ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ.ಹಿರೇಮಠ, ನವದೆಹಲಿ ಅಂಚೆ ಸೇವಾ ಮಂಡಳಿ ಸದಸ್ಯ ಚಾಲ್ರ್ಸ್ ಲೋಬೋ, ಹಿರಿಯ ಪೊಲೀಸ್ ಅಧಿಕಾರಿ ಅಮರ್‍ಕುಮಾರ್ ಪಾಂಡೆ, ಹೊರನಾಡ ಕನ್ನಡಿ ಬ್ರಹ್ಮಕುಮಾರ ಮೃತ್ಯುಂಜಯ, ಹಿರಿಯ ಸಾಹಿತಿ ಬ.ಫ.ಯಲಿಗಾರ, ರಂಗಭೂಮಿ ಕಲಾವಿದ ಗೋಪಾಲಕೃಷ್ಣ ನಾಯರಿ, ಜರ್ಮನಿ ನಗರಸಭಾ ಸದಸ್ಯ ವಿದುಷಿ ನಂದಿನಿ ನಾರಾಯಣ್, ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ, ಹಿರಿಯ ಸಾಹಿತಿ ಶ್ರೀಮತಿ ವಿದ್ಯಾವತಿ ಅಂಕಲಗಿ, ಹಿರಿಯ ಸಾಹಿತಿ ವಿದ್ಯಾವಾಚಸ್ಪತಿ ಡಾ.ಕವಿತಾಕೃಷ್ಣ, ರಂಗಕರ್ಮಿ ಡಿ.ವಿ.ಎಸ್.ಗುಪ್ತ, ಸಹಕಾರ ಕ್ಷೇತ್ರದ ಸಾಧಕ ಶ್ರೀಮತಿ ಶಕುಂತಲಾ ಭಟ್ ಹಳೆಯಂಗಡಿ, ಹಿರಿಯ ಸಾಹಿತಿ ಪ್ರೊ. ಅನ್ನದಾನಿ ಹಿರೇಮಠ, ಸಮಾಜ ಸೇವಕ ಚಂದ್ರಶೇಖರ ಬಾಳೆ, ಕನ್ನಡ ಸೇವಾನಿರತರಾದ ರಾಮಲಿಂಗ ಶೆಟ್ಟಿ, ಹೊರದೇಶದ ಕನ್ನಡಿಗರಾದ ಕನ್ನಡತಿ ಭಾಗೀರಥಿ, ಕನ್ನಡಪರ ಹೋರಾಟಗಾರ ಮಹಾದೇವ ತಳವಾರ, ಸಂಘಟಕ ಟಿ.ಸಿ.ವೆಂಕಟಾಚಲಪತಿ, ಸಾಮಾಜಿಕ ಹೋರಾಟಗಾರ ಫಕೀರಪ್ಪ ಹೊತ್ನಳ್ಳಿ, ಹಿರಿಯ ಪತ್ರಕರ್ತ ರಾಜು ನದಾಫ, ಹಿರಿಯ ಸಂಶೋಧಕ ಡಾ.ಎಸ್.ಡಿ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಜೆ 7 ರಿಂದ ರಾತ್ರಿ 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ವೇದಿಕೆ-2 ಪಾಪು-ಚಂಪಾ ವೇದಿಕೆ ಹೆಳವನಕಟ್ಟೆ ಗಿರಿಯ ಮಹಾಮಂಟ: ಜನವರಿ 6 ರಂದು ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಹಾವೇರಿ ಜಿಲ್ಲಾ ದರ್ಶನ ಗೋಷ್ಠಿ-1 ಜರುಗಲಿದೆ. ಹಿರಿಯ ಸಾಹಿತಿ ಹನುಮಂತಗೌಡ ಗೊಲ್ಲರ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಜೀವರಾಜ ಛತ್ರದ ಆಶಯ ನುಡಿಗಳನ್ನಾಡಲಿದ್ದಾರೆ. ರಜತ ಸಂಭ್ರಮದಲ್ಲಿ ಹಾವೇರಿ ಜಿಲ್ಲೆಯ ಕುರಿತು ವೈ.ಬಿ.ಆಲದಕಟ್ಟಿ, ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಕುರಿತು ಡಾ.ಎಸ್.ಪಿ.ಗೌಡರ್. ಕರ್ನಾಟಕ ಏಕೀಕರಣದಲ್ಲಿ ಹಾವೇರಿ ಜಿಲ್ಲೆಯ ಪಾತ್ರ ಕುರಿತು ಮಾರುತಿ ಶಿಡ್ಲಾಪುರ ಹಾಗೂ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಕುರಿತು ಡಾ.ರಮೇಶ ತೆವರಿ ಅವರು ಮಾತನಾಡಲಿದ್ದಾರೆ.

ಗೋಷ್ಠಿ-2 “ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕರ್ನಾಟಕದ ಕೊಡುಗೆ” ಸಂಜೆ 4 ರಿಂದ 5 ಗಂಟೆವರೆಗೆ ಜರುಗಲಿದೆ. ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ಕುರಿತು ಪ್ರೊ.ಟಿ.ಜಿ.ಹರೀಶ್ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡ ಪ್ರತಿಕೋದ್ಯಮದ ಕೊಡುಗಡೆ ಕುರಿತು ವಿಲಾಸ ಮೇಲಗಿರಿ ಅವರು ಮಾತನಾಡಲಿದ್ದಾರೆ.

ಗೋಷ್ಠಿ-3 “ಕನ್ನಡ ದಿಗ್ಗಜರು” ಸಂಜೆ 5 ರಿಂದ 7 ಗಂಟೆವರೆಗೆ ಜರುಗಲಿದೆ.ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಅವರು ಆಶಯ ನುಡಿಗಳನ್ನಾಡಲಿದ್ದಾರೆ.

ನಾಡೋಜ ಡಾ.ಪಾಟೀಲ ಪುಟ್ಟಪ್ಪ ಕುರಿತು ಡಾ.ಮಲ್ಲಿಕಾರ್ಜುನ ಸಿದ್ದಣ್ಣನವರ, ಪ್ರೊ.ಚಂದ್ರಶೇಖರ ಪಾಟೀಲ ಕುರಿತು ವಿಜಯಕಾಂತ ಪಾಟೀಲ, ಡಾ.ಮಹಾದೇವ ಬಣಕಾರ ಕುರಿತು ಡಾ.ಪ್ರೇಮಾನಂದ ಲಕ್ಕಣ್ಣನವರ ಹಾಗೂ ಡಾ.ಶ್ರೀನಿವಾಸ ಹಾವನೂರ ಕುರಿತು ಸಂಜಯ ಹಾವನೂರ ಅವರು ಮಾತನಾಡಲಿದ್ದಾರೆ. ಸಂಜೆ 7 ರಿಂದ ರಾತ್ರಿ 10-30ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ವೇದಿಕೆ-3 ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ವೇದಿಕೆ

ಗೋಷ್ಠಿ-1 ಶತಮಾನ-ಪುರುಷರು ಈ ಮಹನೀಯರ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಧ್ಯಾಹ್ನ 2 ರಿಂದ 3-30ರವರೆಗೆ ಜರುಗಲಿದೆ. ಹಿರಿಯ ಜಾನಪದ ವಿದ್ವಾಂಸ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಬರಹಗಾರ ಬಾಬು ಕೃಷ್ಣಮೂರ್ತಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ.

ಜಿ.ನಾರಾಯಣ ಕುರಿತು ಕೆ.ಟಿ.ಶ್ರೀಕಂಠೇಗೌಡ, ಡಾ.ಹಿರೇಮಲ್ಲೂರು ಈಶ್ವರನ್ ಕುರಿತು ಪ್ರೊ.ಶಶಿಧರ ತೋಡ್ಕರ್, ಸು.ರಂ.ಎಕ್ಕುಂಡಿ ಕುರಿತು ಜೆ.ಎಂ.ರಾಜಶೇಖರ, ಶಾಂತವೇರಿ ಗೋಪಾಲಗೌಡ ಕುರಿತು ನೆಂಪೆ ದೇವರಾಜ, ಹಾಸ್ಯ ನಟ ನರಸಿಂಹರಾಜು ಕುರಿತು ಶ್ರೀಮತಿ ಸುಧಾ ನರಸಿಂಹರಾಜು ಅವರು ಮಾತನಾಡಲಿದ್ದಾರೆ.

ಗೋಷ್ಠಿ-2: ಮಧ್ಯಾಹ್ನ 3-30 ರಿಂದ 5-15ರವರೆಗೆ ಸಂಕೀರ್ಣ ಗೋಷ್ಠಿ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಗಮಕ ಕಲೆ ಅಳಿವು ಉಳಿವು ಕುರಿತು ಡಾ.ಎ.ವಿ.ಪ್ರಸನ್ನ, ಲಿಂಗತ್ವ ಅಲ್ಪಸಂಖ್ಯಾತರ ಭವಿಷ್ಯ ಮತ್ತು ಭರವಸೆಗಳು ಕುರಿತು ಶ್ರೀಮತಿ ಕೆ.ಸಿ.ಅಕ್ಷತಾ, ಮೊಬೈಲ್: ಸಾಧಕ ಮತ್ತು ಬಾಧಕಗಳು ಕುರಿತು ಡಾ.ಶುಭಾ ಮರವಂತೆ, ಪೊಲೀಸ್ ಸಾಹಿತ್ಯ ಕುರಿತು ಡಿ.ಸಿ.ರಾಜಪ್ಪ ಅವರು ಮಾತನಾಡಲಿದ್ದಾರೆ.

ಗೋಷ್ಠಿ-3: ಸಂಜೆ 5 ರಿಂದ 15 ರಿಂದ 7 ಗಂಟೆವರೆಗೆ ಬೆಳ್ಳಿತೆರೆ-ಕಿರುತೆರೆ ಜರುಗಲಿದೆ. ಹಿರಿಯ ಕಲಾವಿದ ಎಚ್.ಜಿ.ದತ್ತಾತ್ರೇಯ(ದತ್ತಣ್ಣ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್ ಆಶಯ ನುಡಿಗಳನ್ನಾಡಲಿದ್ದಾರೆ.
ಚಲನಚಿತ್ರ ಸಾಹಿತ್ಯ ಪರಂಪರೆ ಕುರಿತು ಎನ್.ಎಸ್.ಶ್ರೀಧರಮೂರ್ತಿ, ಸಮಾಜದ ಮೇಲೆ ಧಾರಾವಾಹಿಗಳ ಪರಿಣಾಮ ಕುರಿತು ಶ್ರೀಮತಿ ಕುಸುಮ ಆಯರಹಳ್ಳಿ ಹಾಗೂ ಕನ್ನಡ ಚಲನಚಿತ್ರಗಳಲ್ಲಿ ದೇಶಭಕ್ತಿ ಮತ್ತು ಕನ್ನಡಪರ ಗೀತಗೆಳು ಕುರಿತು ಪ್ರಕಾಶ್ ಮಲ್ಪೆ ಅವರು ಮಾತನಾಡಲಿದ್ದಾರೆ. ಸಂಜೆ 7 ರಿಂದ ರಾತ್ರು 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಜನವರಿ 7 ಶನಿವಾರ ವೇದಿಕೆ-1 ಗೋಷ್ಠಿ-3

ಕನ್ನಡದಲ್ಲಿ ಕಾನೂನು ಸಾಹಿತ್ಯ ಬೆಳಿಗ್ಗೆ 9 ರಿಂದ 10 ಗಂಟೆವರೆಗೆ ಜರುಗಲಿದೆ. ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.

ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ಅವರಿಂದ ಆಶಯ ನುಡಿ, ಶ್ರೀ ಸಾಮಾನ್ಯನಿಗೆ ಕನ್ನಡದಲ್ಲಿ ಕಾನೂನಿನ ಅರಿವು ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿದ್ದಪ್ಪ ಕೆಂಪಗೌಡರ ಹಾಗೂ ಕಾನೂನು ವಿಷಯಗಳ ಕುರಿತು ಸಾಹಿತ್ಯ ರಚನೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಬಿ.ಶಿವಲಿಂಗೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

ವಿಶೇಷ ಉಪನ್ಯಾಸ

ಬೆಳಿಗ್ಗೆ 10 ರಿಂದ 11 ಗಂಟವೆರೆಗ ವಿಶೇಷ ಉಪನ್ಯಾಸ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ, ಸರಸ್ವತಿ ಸಮ್ಮಾನ್ ಪುರಸ್ಕøತರ ಕುರಿತ ಗ್ರಂಥಗಳ ಬಿಡುಗಡೆ. ಹಿರಿಯ ಬರಹಗಾರ ಡಾ.ಪ್ರೇಮಶೇಖರ ಪ್ರಸ್ತಾವನೆ, ಸರಸ್ವತಿ ಸಮ್ಮಾನ ಪುರಸ್ಕøತ ಡಾ.ಎಸ್.ಎಲ್. ಭೈರಪ್ಪ ಹಾಗೂ ಹಿರಿಯ ಸಾಹಿತಿ ಡಾ.ಪ್ರಧಾನ ಗುರುದತ್ತ ಅವರು ಉಪನ್ಯಾಸ ನೀಡಲಿದ್ದಾರೆ. ಸರಸ್ವತಿ ಸಮ್ಮಾನ ಪುರಸ್ಕøತ ಎಂ.ವೀರಪ್ಪ ಮೊಯಿಲಿ ಉಪಸ್ಥಿತರಿರುವರು.

ಗೋಷ್ಠಿ-4: ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಯುವ ಕರ್ನಾಟಕ ನಾಡು-ನುಡಿ ಚಿಂತನೆ ಜರುಗಲಿದೆ.
ಹಿರಿಯ ಕ್ರಿಕೆಟ್ ಆಟಗಾರ ವೆಂಕಟೇಶ ಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀಮತಿ ಮಾಲತಿ ಹೊಳ್ಳ ಅವರು ಆಶಯ ನುಡಿಗಳನ್ನಾಡುವರು. ಯುವ ಕನ್ನಡಿಗರಿಗೆ ಸೈನ್ಯದಲ್ಲಿ ಅವಕಾಶಗಳ ಕುರಿತು ಸ್ಕ್ವಾಡ್ರನ್ ಲೀಡರ್ ವಿನುತಾ ಜಿ.ಆರ್, ಯುವ ಕರ್ನಾಟಕ ಹೊಸ ತಲೆಮಾರಿನ ಮನಸ್ಥಿತಿ ಕುರಿತು ಪ್ರೊ.ಸ್ಮøತಿ ಹರಿತ್ಸ ಹಾಗೂ ಯುವ ಲೇಖಕರು ಮತ್ತು ಪ್ರಸ್ತುತ ಸಾಹಿತ್ಯ ಕುರಿತು ಶ್ರೀಮತಿ ದೀಪಾ ಹಿರೇಗುತ್ತಿ ಮಾತನಾಡಲಿದ್ದಾರೆ.

ಗೋಷ್ಠಿ-5: ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಮಾಧ್ಯಮ

ಹೊಸತನ ಮತ್ತು ಆವಿಷ್ಕಾರಗಳು ವಿಷಯ ಜರುಗಲಿದೆ. ಬೆಂಗಳೂರು ವಿವಿ ಹಿರಿಯ ಪ್ರಾಧ್ಯಾಪಕ ಡಾ.ಬಿ.ಕೆ.ರವಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಮೋಹನ ಹೆಗಡೆ ಆಶಯ ನುಡಿಗಳನ್ನಾಡಲಿದ್ದಾರೆ. ಮುದ್ರಣ ಮಾಧ್ಯಮದಲ್ಲಿ ಕನ್ನಡದ ಬಳಕೆ ಕುರಿತು ಸುದರ್ಶನ್ ಚನ್ನಂಗಿಹಳ್ಳಿ, ಸಾಮಾಜಿಕ ಜಾಲತಾಣಗಳು: ಅರಿವು ಮತ್ತು ಅಪಾಯ ಕುರಿತು ಎಚ್.ಎನ್.ಸುದರ್ಶನ್ ಹಾಗೂ ಡಿಜಿಟಲ್ ಮಾಧ್ಯಮದ ಮುಂದಿನ ಸವಾಲುಗಳು ಕುರಿತು ಡಾ.ಸಿಬಂತಿ ಪದ್ಮನಾಭ ಅವರು ವಿಷಯ ಮಂಡಿಸಲಿದ್ದಾರೆ.

ಗೋಷ್ಠಿ-6: ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಶಿಕ್ಷಣದಲ್ಲಿ ಕನ್ನಡದ ಅಸ್ಮಿತೆ ಜರುಗಲಿದೆ. ವಿಶ್ರಾಂತ ಕುಲಪತಿಗಳು ಡಾ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪ್ರಾಧ್ಯಾಪಕ ಡಾ.ಮಾಧವ ಪೆರಾಜೆ ಆಶಯ ನುಡಿಗಳನ್ನಾಡಲಿದ್ದಾರೆ. ಕನ್ನಡ ಶಾಲೆಗಳ ವಸ್ತುಸ್ಥಿತಿ ಕುರಿತು ಡಾ.ಎಚ್.ಎನ್.ಮುರಳೀಧರ, ಕನ್ನಡ ಭಾಷೆಯ ಮೇಲೆ ಇಂಗ್ಲಿಷ್ ಮಾಧ್ಯಮ ಬೀರುವ ಪರಿಣಾಮಗಳು ಕುರಿತು ಡಾ.ಹರ್ಷಿತ್ ಜೋಸೆಫ್, ಉನ್ನತ ಶಿಕ್ಷಣದಲ್ಲಿ ಕನ್ನಡ ಪಠ್ಯ ಮತ್ತು ಬೋಧನೆ ಕುರಿತು ಡಾ.ಧನಂಜಯ್ ಕುಂಬ್ಳೆ ಅವರು ವಿಷಯ ಮಂಡಿಸಲಿದ್ದಾರೆ.

ಸಂಜೆ 5 ರಿಂದ 6 ಗಂಟೆವರೆಗೆ ಸಮ್ಮೇಳನಾಧ್ಯಕ್ಷರ ಜೊತೆ ಮಾತು-ಮಂಥನ ಜರುಗಲಿದ್ದು, ಸಮ್ಮೇಳನಾದ್ಯಕ್ಷರಾದ ಡಾ.ದೊಡ್ಡರಂಗೇಗೌಡ ಅವರು ಪಾಲ್ಗೊಳ್ಳಲಿದ್ದಾರೆ. ಡಾ.ತಲಕಾಡು ಚಿಕ್ಕರಂಗೇಗೌಡ ಪ್ರಧಾನ ನಿರ್ವಹಣೆ ಮಾಡಲಿದ್ದಾರೆ.

ಮಾತು ಮಂಥನದಲ್ಲಿ ಮಹಾಬಲಮೂರ್ತಿ ಕೊಡ್ಲೆಕೆರೆ, ಶ್ರೀಮತಿ ಸಂಕಮ್ಮ ಜಿ ಸಂಕಣ್ಣನವರ, ಶ್ರೀಮಾಲತೇಶ ಅಂಗೂರ, ವಿ.ಮನೋಹರ, ಡಾ.ಶೀಲಾದೇವಿ ಎಸ್.ಮರಳಿಮಠ, ಬಾಪು ಪದ್ಮನಾಭ, ಡಾ. ಶಾರದಾ ಮುಳ್ಳೂರು, ಬುಕ್ಕಾಪಟ್ನ ವಾಸು, ರುದ್ರಣ್ಣ ಹರ್ತಿಕೋಟೆ, ಅಂಜನ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ.

ಸಾಧಕರಿಗೆ ಸನ್ಮಾನ: ಸಂಜೆ 6 ರಿಂದ 7ಗಂಟೆವರೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಕಾಗಿನೆಲೆ ಶ್ರೀ ಕ್ಷೇತ್ರದ ನಿರಂಜನಾನಂದಪುರಿ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಜಯದೇವ ಆಸ್ಪತ್ರೆಯ ನಾಡೋಜ ಡಾ.ಸಿ.ಎನ್.ಮಂಜುನಾಥ ಆಶಯ ನುಡಿಗಳನ್ನಾಡಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರು ಸನ್ಮಾನಿಸುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending