ದಿನದ ಸುದ್ದಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 2 ದಿನಗಳ ಕಾಲ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

Published

on

ಸುದ್ದಿದಿನ,ದಾವಣಗೆರೆ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿವರೆಗೂ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸಾಗಲಿದೆ.

ಈ ರಥಯಾತ್ರೆ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳು, ರೈತ ಕಾರ್ಮಿಕ ಸಂಘಟನೆಗಳು, ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರೆ ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕರು ಗೌರವಯುತವಾಗಿ ಸ್ವಾಗತಿಸಿ ಬೀಳ್ಕೊಡಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version