ದಿನದ ಸುದ್ದಿ

ದಾವಣಗೆರೆ | ಸಕಾಲ ಯೋಜನೆ ದಶಮಾನೋತ್ಸವ : ಏ. 20 ರಂದು ಜಾಥಾ

Published

on

ಸುದ್ದಿದಿನ,ದಾವಣಗೆರೆ : ರಾಜ್ಯದ ನಾಗರಿಕರಿಗೆ ನಿಗದಿತ ಕಾಲ ಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆ ಜಾರಿಗೊಂಡು ಏಪ್ರಿಲ್ 20 ಕ್ಕೆ ಹತ್ತು ವರ್ಷ ತುಂಬುತ್ತಿರುವುದರಿಂದ ಇದರ ಅಂಗವಾಗಿ ದಾವಣಗೆರೆ ಜಿಲ್ಲೆಯಲ್ಲಿ ದಶಮಾನೋತ್ಸವ ಆಚರಣೆಯನ್ನು ಜಾಥ ಮುಖೇನ ಹಮ್ಮಿಕೊಳ್ಳಲಾಗಿದೆ.

ದಾವಣಗೆರೆ ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಯಾ ತಾಲ್ಲೂಕು ಆಡಳಿತ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸಕಾಲ ಯೋಜನೆಯ ಬಗೆಗೆ ಜಾಥಾ ನಡೆಸಲು ಕ್ರಮ ಕೈಗೊಳ್ಳಬೇಕು, ಸಕಾಲ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version