ದಿನದ ಸುದ್ದಿ
ಸಖಿ ಒನ್ ಸ್ಟಾಪ್ ಸೆಂಟರ್ ; ಸಿಬ್ಬಂದಿ ನೇಮಕಾತಿ : ಅರ್ಜಿ ಆಹ್ವಾನ
ಸುದ್ದಿದಿನ,ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಗೆ 8 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಆಡಳಿತಗಾರರು-1, ಆಪ್ತ ಸಮಾಲೋಚರು-1, ಸಾಮಾಜಿಕ ಕಾರ್ಯಕರ್ತರು-2, ಪ್ಯಾರಾಲೀಗಲ್ ಸಿಬ್ಬಂದಿ/ಲಾಯರ್ಸ್-2, ಕ್ಲೀನರ್ಸ್-2 ಹುದ್ದೆಗಳಿಗೆ ನಿಗದಿ ಪಡಿಸಿರುವ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ,ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ ಇಲ್ಲಿ ಅರ್ಜಿ ಪಡೆದು ಮೇ 18 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447850 ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243