ದಿನದ ಸುದ್ದಿ
ರೈತರಿಗೆ ಕಡಿಮೆ ಬೆಲೆಗೆ ಗೊಬ್ಬರ ಮಾರಾಟ : ಕೇಂದ್ರ ಸಚಿವ ಸದಾನಂದ ಗೌಡ
ಸುದ್ದಿದಿನ,ಬೆಂಗಳೂರು : ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕಡಿಮೆ ಇರೋದರಿಂದ ಇರುವ ಬೆಲೆಗಿಂತ ರೈತರಿಗೆ ಕಡಿಮೆ ಬೆಲೆಗೆ ಗೊಬ್ಬರ ಮಾರಾಟ ಮಾಡಲಾಗುವುದು ಅನ್ನುವುದನ್ನು ಕೇಂದ್ರ ಸಚಿವ ಸದಾನಂದ ಗೌಡರು ಮನದಟ್ಟು ಮಾಡಿದರು.ಇದನ್ನು ರೈತರಿಗೆ ಮನವರಿಕೆ ಮಾಡಿ ಆತಂಕ ದೂರು ಮಾಡಲು ಸೂಚನೆ ನೀಡಲಾಯಿತು.
ಗುರುವಾರ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಸದಾನಂದಗೌಡ ರಿಗೆ ಕರೆಮಾಡಿ ಗೊಬ್ಬರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಡ್ಯಾಮ್ ಗಳಲ್ಲಿ ಹೆಚ್ಚು ನೀರು ಸಂಗ್ರಹವಾಗಿದ್ದಾರೆ ಅದನ್ನು ರೈತರ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ಹರಿಸಲು ಸೂಚನೆ ನೀಡಲಾಯಿತು.ಹಾಗೇ, ಕಳೆದ ವರ್ಷ ಆದ ಅನಾಹುತ ಮತ್ತೆ ಮರುಕಳಿಸದಂತೆ ಡ್ಯಾಮ್ ಗಳಲ್ಲಿ ಪ್ರತಿನಿತ್ಯ ಲಭ್ಯವಿರುವ ನೀರಿನ ಮಾಹಿತಿಯನ್ನು ಪಡೆಯಲು ಸೂಚಿಸಲಾಯಿತು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243