ದಿನದ ಸುದ್ದಿ
ಮಾತ್ರೆಯ ‘ಕಾಲು ಭಾಗ’ ಇಬ್ಬರು ತಗೊಂಡಿದ್ವಿ : ರವಿಶಂಕರ್
ಸುದ್ದಿದಿನ,ಬೆಂಗಳೂರು: ರಾಗಿಣಿ ಮತ್ತು ನಾನು ಜೊತೆಗೆ ಡ್ರಗ್ಸ್ ತೆಗೆದು ಕೊಳ್ಳುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾನೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿ ರವಿಶಂಕರ್ ನ ಬಾಯಿಬಿಡಿಸಿದ್ದಾರೆ. ಈ ವೇಳೆ ಆತ ನಾನು ರಾಗಿಣಿ ಒಟ್ಟಿಗೆ ಡ್ರಗ್ ಸೇವನೆ ಮಾಡಿದ್ವಿ. ಒಂದು ಮಾತ್ರೆಯ ‘ಕಾಲು ಭಾಗ’ ಇಬ್ಬರು ತಗೊಂಡಿದ್ವಿ. ವೈಭವ್ ಜೈನ್ ಮೂಲಕ ಡ್ರಗ್ಸ್ ತರಿಸಿಕೊಂಡಿದ್ವಿ ಎಂಬುದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243