ದಿನದ ಸುದ್ದಿ
ನ್ಯಾಮತಿ | ಫೆ.14ರಂದು ಸಂತ ಸೇವಾಲಾಲ್‍ರವರ 282ನೇ ಜಯಂತಿ
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತ ಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಬೆಂಗಳೂರು ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸೂರಗೊಂಡನಕೊಪ್ಪ ಇವರ ಸಂಯುಕ್ತಾಶ್ರಾಯದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಇವರು ಜಯಂತ್ಯೋತ್ಸವದ ಉದ್ಘಾಟನೆಯನ್ನು ನೆರವೇರಿಸುವರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಪುಷ್ಪಾರ್ಚನೆ ಮಾಡುವರು. ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಸಭಾಮಂಟಪ ಲೋಕಾರ್ಪಣೆಯನ್ನು ಮಾಡುವರು.
ಮುಖ್ಯಅತಿಥಿಗಳಾಗಿ ಉಪಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಸಚಿವರಾದ ಗೋವಿಂದ ಎಂ ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಎಸ್ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐ.ಟಿ ಮತ್ತು ಬಿ.ಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್ ಅಶ್ವತ್ ನಾರಾಯಣ್, ಪಶುಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ.
ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್, ಕುಡಚಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ್, ದಾವಣಗೆರೆ ಕ್ಷೇತ್ರದ ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ.
ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಬಿ.ವೈ ರಾಘವೇಂದ್ರ, ದಾವಣಗೆರೆ ಜಿ.ಪಂ ಅಧ್ಯಕ್ಷೆ ಕೆ.ವಿ ಶಾಂತಕುಮಾರಿ, ಕಲರ್ಬುಗಿ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಉಮೇಶ್.ಜಿ.ಜಾಧವ್, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಹಾಗೂ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಮಾಡಾಳ್ ವಿರುಪಾಕ್ಷಪ್ಪ, ಮಲೆನಾಡು ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಗುರುಮೂರ್ತಿ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ವಿ ರಾಮಚಂದ್ರ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ್‍ರಾವ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರು ಪ್ರೊ.ಲಿಂಗಣ್ಣ, ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ.
ಮಾಜಿ ಸಚಿವರು ಹಾಗೂ ಹೂವಿನ ಹಡಗಲಿ ಕ್ಷೇತ್ರದ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಹಗರಿಬೊಮ್ಮನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕರಾದ ಎಸ್.ಭೀಮಾನಾಯ್ಕ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಮಪ್ಪ ಲಮಾಣಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ ಅಶೋಕ್ ನಾಯ್ಕ್.
ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರಾದ ದೇವಾನಂದ್ ಫೂಲ್‍ಸಿಂಗ್ ಚೌವ್ಹಾಣ್, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಶಾಸಕರು ಹಾಗೂ ಸಂತಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ರುದ್ರಪ್ಪ.ಎಂ.ಲಮಾಣಿ, ನ್ಯಾಮತಿ ತಾ.ಪಂ ಅಧ್ಯಕ್ಷರು, ಜಿ.ಪಂ ಸದಸ್ಯರು ಹಾಗೂ ತಾ.ಪಂ ಸದಸ್ಯರು ಪಾಲ್ಗೊಳ್ಳುವರು.
ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಹಾಗೂ ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತ ದೂರುಗಳನ್ನು ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ನಿಗಮ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಹಾಗೂ ಮೊ.ಸಂ:9845801361, 8105976617 ನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.
ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.
ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.
ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.
ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.
ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ6 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ6 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ