ದಿನದ ಸುದ್ದಿ

ನಾಗನಹಳ್ಳಿಯಲ್ಲಿ ಸ್ಯಾಟಲೈಟ್ ರೈಲು ನಿಲ್ದಾಣ: ಜಿಟಿಡಿ ಸ್ಥಳ ಪರಿಶೀಲನೆ

Published

on

ಸುದ್ದಿದಿನ ಡೆಸ್ಕ್ : ಸಚಿವ ಜಿ.ಟಿ. ದೇವೇಗೌಡ ಹಾಗೂ ಸಂಸದ ಪ್ರತಾಪ್‌ಸಿಂಹ ಶುಕ್ರವಾರ ಮೈಸೂರು ತಾಲೂಕಿನ ನಾಗನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಯಾಟಲೈಟ್ ರೈಲ್ವೆ ನಿಲ್ದಾಣ ಯೋಜನೆಯ ಸ್ಥಳ ಪರಿಶೀಲಿಸಿದರು.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲುಗಳ ದಟ್ಟಣೆ ತಗ್ಗಿಸುವ ಉದ್ದೇಶದಿಂದ ನಾಗನಹಳ್ಳಿ ರೈಲ್ವೆ ನಿಲ್ದಾಣದ ಬಳಿಯ 118 ಎಕರೆ ಭೂಮಿಯಲ್ಲಿ ಸ್ಯಾಟಲೈಟ್ ರೈಲ್ವೆ ನಿಲ್ದಾಣ ನಿರ್ಮಿಸಲಾಗುತ್ತಿದೆ. ಬಳಿಕ ನಿಲ್ದಾಣಕ್ಕೆ ಬೇಕಿರುವ ಜಮೀನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ರೈತರಲ್ಲಿ ಉಂಟಾಗಿರುವ ಆತಂಕವನ್ನು ಹೋಗಲಾಡಿಸಲು ಸ್ಥಳೀಯರೊಂದಿಗೆ ಸಭೆ ನಡೆಸಲಾಯಿತು.

ಬಿಜೆಪಿ ವಿರುದ್ಧ ಜನ ದಂಗೆ ಹೇಳಬೇಕೆನ್ನುವ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಿ.ಟಿ. ದೇವೇಗೌಡ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿಯು ಸರಕಾರ ಆಡಳಿತ ನಡೆಸಲು ಅವಕಾಶ ಮಾಡಿಕೊಡುತ್ತಿಲ್ಲ. ಒಂದು ಕಡೆ ಭೀಕರ ಬರಗಾಲ, ಮತ್ತೊಂದು ಕಡೆ ನೆರೆ ಇದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿಗೆ ತೊಂದರೆ ಮಾಡುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಅಧಿಕಾರ ನಡೆಸಲು ಅವಕಾಶ ಮಾಡಿಕೊಡಬೇಕು ಅನ್ನುವ ಅರ್ಥದಲ್ಲಿ ಹೇಳಿದ್ದಾರೆ. ಬೇರೆ ಯಾವುದೇ ಉದ್ದೇಶದಿಂದ ಈ ಹೇಳಿಕೆಯನ್ನು ನೀಡಿಲ್ಲ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version