ದಿನದ ಸುದ್ದಿ
ಮಹಿಳೆಯರ ಸಬಲೀಕರಣಕ್ಕೆ “ಶಕ್ತಿ” ಆಸರೆ’: ಸಚಿವ ಸತೀಶ್ ಜಾರಕಿಹೊಳಿ
ಸುದ್ದಿದಿನ,ಬೆಳಗಾವಿ : ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ “ಶಕ್ತಿ” ಯೋಜನೆಯ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು. ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಹಿಳೆಯರಿಗೆ ಕಿವಿಮಾತು ಹೇಳಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ವತಿಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ “ಶಕ್ತಿ” ಯೋಜನೆಗೆ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಈ ದಿನ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲು. ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ದೊರಕಿದೆ. ಈ ಯೋಜನೆಯು ದೇಶಕ್ಕೆ ಮಾದರಿಯಾಗಲಿದೆ.
ಅತ್ಯಂತ ಕಡಿಮೆ ಅವಧಿಯಲ್ಲಿ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಐತಿಹಾಸಿಕ ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಪರ-ವಿರೋಧ ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ.
ಈ ಯೋಜನೆಯಿಂದ ಮಹಿಳಾ ಸಮುದಾಯಕ್ಕೆ ಆರ್ಥಿಕವಾಗಿ ಲಾಭವಾಗಲಿದೆ. ಪ್ರತಿದಿನ ಕೆಲಸಕ್ಕೆ ಹೋಗುವ ಮಹಿಖೆಯರು, ಸಣ್ಣಪುಟ್ಟ ಕೆಲಸಗಳಿಗೆ ದೈನಂದಿನ ಪ್ರಯಾಣ ಮಾಡುವರಿಗೆ ಇದರಿಂದ ಪ್ರಯೋಜನ ಆಗಲಿದೆ.
ಮೊದಲ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇನ್ನುಳಿದ ಗ್ಯಾರಂಟಿ ಯೋಜನೆಗಳು ಕೂಡ ಜಾರಿಗೆ ತರಲಾಗುತ್ತಿದೆ. ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಪಕ್ಷ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಯತ್ತಿದೆ.
ಮಹಿಳೆಯರು ಶಕ್ತಿ ಕಾರ್ಡುಗಳನ್ನು ಪಡೆದುಕೊಂಡು ರಾಜ್ಯದಲ್ಲೆಡೆ ಪ್ರಯಾಣ ಮಾಡಲಿದ್ದಾರೆ. ಸರಕಾರಕ್ಕೆ ಆರ್ಥಿಕ ಹೊರೆಯಾದರೂ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯು ಕೂಡ ಲಾಭ ಗಳಿಸುವ ಮೂಲಕ ಆರ್ಥಿಕವಾಗಿ ಸದೃಢವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಅನುಷ್ಠಾನದಿಂದ ಸರಕಾರಕ್ಜೆ ವಾರ್ಷಿಕ 60 ಸಾವಿರ ಕೋಟಿ ಹೊರೆಯಾದರೂ ಪ್ರವಾಸೋದ್ಯಮ ಪ್ರಗತಿಯಾಗುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯಾಗಲಿದೆ.
ಗ್ಯಾರಂಟಿ ಮಾತ್ರವಲ್ಲದೇ ಸರಕಾರ ನೀಡಿರುವ ಉಳಿದ ಭರವಸೆಗಳನ್ನು ಕೂಡ ಹಂತ ಹಂತವಾಗಿ ಈಡೇರಿಸಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಚುನಾವಣೆ ಸಂದರ್ಭದಲ್ಲಿ ಪಕ್ಷ ನೀಡಿರುವ ಗ್ಯಾರಂಟಿ ಗಳನ್ನು ಜಾರಿಗೆ ತರಲಾಗುತ್ತಿದೆ. “ಶಕ್ತಿ” ಯೋಜನೆ ಅನುಷ್ಠಾನದ ಮೂಲಕ ಗ್ಯಾರಂಟಿ ಈಡೇರಿಕೆಗೆ ಚಾಲನೆ ದೊರೆತಿದೆ ಎಂದು ಸಮಾರಂಭದ ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಕಳೆದ ಸರಕಾರದ ಅವಧಿಯಲ್ಲಿ 265 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿರುತ್ತದೆ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್ ಅವರು, ಶಕ್ತಿ ಯೋಜನೆಯ ಜಾರಿಯಿಂದ ಸರಕಾರಕ್ಕೆ ನಷ್ಟವಾಗಲಿದೆ ಎಂದು ಬಹುತೇಕ ಜನರು ವಾದ ಮಂಡಿಸಿದರು. ಆದರೆ ನಷ್ಟವಾದರೂ ಪರವಾಗಿಲ್ಲ; ಮಹಿಳೆಯರು ಸಬಲರಾಗಬೇಕು ಎಂಬ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ಹೇಳಿದರು.
ಮಹಿಳೆಯರು ಮಾತ್ರ ಬಸ್ ನಲ್ಲಿ ಪ್ರಯಾಣಿಸುವುದಿಲ್ಲ. ಇಡೀ ಕುಟುಂಬವೇ ಪ್ರಯಾಣ ಮಾಡುವುದರಿಂದ ಸಾರಿಗೆ ಸಂಸ್ಥೆಗೆ ಪರೋಕ್ಷವಾಗಿ ಆದಾಯ ಕೂಡ ಬರಬಹುದು. ವ್ಯವಹಾರ ಹೆಚ್ಚಾದಂತೆ ನಷ್ಟದ ಬದಲು ಒಟ್ಟಾರೆ ಲಾಭದ ಪ್ರಮಾಣ ಹೆಚ್ಚಾಗಬಹುದು ಎಂದು ಅವರು ವಿಶ್ಲೇಷಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ, ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೇಣುಗೋಪಾಲ್ ಆರ್. ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಗಣೇಶ್ ರಾಠೋಡ ಸ್ವಾಗತಿಸಿದರು. ಸುನೀತಾ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು.
ಇದಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಅಲಂಕೃತ ಬಸ್ ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಮಹಿಳೆಯರ ಉಚಿತ ಬಸ್ ಪ್ರಯಾಣದ “ಶಕ್ತಿ” ಯೋಜನೆಗೆ ಚಾಲನೆ ನೀಡಿದರು.
ಮಹಿಳೆಯರಿಂದ ತುಂಬಿದ ನಗರ ಸಾರಿಗೆ ಸಂಸ್ಥೆಯ ಬಸ್ ಗಳು ಸಾಂಕೇತಿಕವಾಗಿ ಬೆಳಗಾವಿಯಿಂದ ವಡಗಾವಿಯವರೆಗೆ ಪ್ರಯಾಣ ಬೆಳೆಸಿದವು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕ ಆಸೀಫ್ ಸೇಠ್ ಸೇರಿದಂತೆ ಅನೇಕ ಗಣ್ಯರು ಹಾಗೂ ಅಧಿಕಾರಿಗಳು ಕೂಡ ಬಸ್ ಪ್ರಯಾಣ ಮಾಡಿದರು.
ಈ ಕಾರ್ಯಕ್ರಮದ ಬಳಿಕ ಅಧಿಕೃತವಾಗಿ “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೇವೆ ಆರಂಭಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


