ದಿನದ ಸುದ್ದಿ

ಅಶ್ಲೀಲ ವೆಬ್‌ಸೈಟ್‌ನಲ್ಲಿ ಸತೀಶ್ ಜಾರಕಿಹೊಳಿ ಹೆಸರು : ದೂರು ದಾಖಲು

Published

on

ಸುದ್ದಿದಿನ,ಬೆಳಗಾವಿ: ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಶ್ಲೀಲ ವಿಡಿಯೋಗಳ ಪೋಸ್ಟ್​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯ ಎಸೆಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version