ದಿನದ ಸುದ್ದಿ
ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ‘ಸಾಯಿ ಖೇಲೋ ಇಂಡಿಯಾ’ ಸಂಸ್ಥೆಗೆ ಏಕೆ..? ಕೊಡಬಾರದು..?
- ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಾಪಕರು
ಹಿರಿಯ ವಿದ್ಯಾರ್ಥಿ. ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ
1. ಸಹ್ಯಾದ್ರಿ ಕಾಲೇಜು 1941ರಲ್ಲಿ ಶ್ರೀ ಜಯ ಚಾಮರಾಜೇಂದ್ರ ಒಡೆಯರ ಅಮೃತ ಹಸ್ತದಿಂದ ಉದ್ಘಾಟನೆಯಾಗಿ ಶೈಕ್ಷಣಿಕ ಉದ್ದೇಶಕ್ಕೆ ಬಳಸಿಕೊಳ್ಳಲು ಸುಮಾರು 100ಎಕರೆ ಭೂಮಿಯನ್ನು ದಾನಿಗಳಿಂದ ಪಡೆದು ಕೊಡಮಾಡಲ್ಪಟ್ಟಿದೆ.
ಹಾಗಾದರೆ ಸ್ಪೋರ್ಟ್ಸ್ ಶಿಕ್ಷಣವಲ್ಲವೇ?
ಖಂಡಿತ ಅಲ್ಲ. ಎಲ್ಲ ಕಾಲೇಜುಗಳಲ್ಲಿ NCC, NSS, ಹಾಗೆಯೇ ಸ್ಪೋರ್ಟ್ಸ್ ಕೂಡ ಒಂದು ಭಾಗ. ಅದೇ ಮುಖ್ಯವಲ್ಲ.
ಸಾಹಿ ಖೇಲೋ ಇಂಡಿಯಾದವರು ಅಂತರರಾಷ್ಟ್ರ ಮಟ್ಟದ ತರಬೇತಿ ಕೊಡುತ್ತಾರೆ. ಆ ಮಟ್ಟದ ಶಿಕ್ಷಣ ಮತ್ತು ತರಬೇತಿ ಕೊಡುವುದಕ್ಕೆ ವಿಶ್ವವಿದ್ಯಾನಿಲಯದಲ್ಲಿ Bped, Mped ಶಿಕ್ಷಣವನ್ನು ಕೊಡಲಾಗುತ್ತದೆ. ಅತ್ಯತ್ತಮ ಶಿಕ್ಷಕರು ವಿಶ್ವವಿದ್ಯಾನಿಲಯದಲ್ಲೇ ಇದ್ದಾರೆ.
2. ಸಹ್ಯಾದ್ರಿ ಕಾಲೇಜಿಗೆ ಭವ್ಯವಾದ ಪರಂಪರೆ ಇದೆ. ಯು. ಆರ್ ಅನಂತಮೂರ್ತಿ, ಜಿ.ಎಸ್. ಶಿವರುದ್ರಪ್ಪ , ಪಿ ಲಂಕೇಶ್, ಕಲಿತು ಕಲಿಸಿದ ಕಾಲೇಜು. ಕುವೆಂಪು ಅವರಿಂದ ನಾಮಂಕಿತ ಪಡೆದ ಕಾಲೇಜು. ಅಲ್ಲದೆ ಹಲವಾರು ಐ ಎ ಎಸ್, ಐ ಪಿ ಎಸ್, ಅಧ್ಯಾಪಕರು, ಪ್ರಾಧ್ಯಾಪಕರನ್ನು ರಾಜ್ಯಕ್ಕೆ ರಾಷ್ಟ್ರಕ್ಕೆ ಕೊಟ್ಟ ಕಾಲೇಜು.
3. ಡಿಮ್ಡ ವಿಶ್ವವಿದ್ಯಾನಿಲಯವಾಗುವ ಎಲ್ಲ ಅರ್ಹತೆಯನ್ನು ಹೊಂದಿದೆ. ಹಾಗಾದರೆ ಹಲವಾರು ಸ್ವತಂತ್ರ ವಿಭಾಗಗಳು ಸ್ಥಾಪಿಸಬೇಕಾಗುತ್ತದೆ. ಆಗ ಹಾಲಿ ಇರುವ ಜಾಗ ಸಾಲದಾಗುತ್ತದೆ.
4. ರಾಷ್ಟ್ರ ಮಟ್ಟದ ಸಂಶೋಧನಾ ಕೇಂದ್ರಗಳು, ವೈಜ್ಞಾನಿಕ ಕೇಂದ್ರಗಳು ಸ್ಥಾಪನೆಯಾಗಬಹುದು.
5. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯ ಜ್ಞಾನಗಂಗೋತ್ರಿಯಾಗಿದೆ. ಹಾಲಿ 6500 ವಿದ್ಯಾರ್ಥಿಗಳು ಕಲಿಯುತ್ತಿದ್ದು ಇಲ್ಲಿಯ ಪರಿಸರವೇ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗಿದೆ.
6. ತರಬೇತಿ ನಡೆಯುವುದು 4 ತಿಂಗಳು ಮಾತ್ರ ಉಳಿದಂತೆ ಕಾಲೇಜಿಗೆ ಉಪಯುಕ್ತ
ಸೆಮಿಸ್ಟರ್ ವ್ಯವಸ್ಥೆಯಲ್ಲಿ ಕಾಲೇಜು ನಡೆಯುವುದು ನಾಲ್ಕು ತಿಂಗಳು ಉಳಿದಂತೆ ಎರಡು ತಿಂಗಳು ಪರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳ ಬಿಡುವು ಸಿಗುವುದೇ ಎರಡು ತಿಂಗಳು ಆದರೆ ಅದೇ ಸಂದರ್ಭದಲ್ಲಿ ಅಂತರಾಷ್ಟ್ರಮಟ್ಟಕ್ಕೆ ತರಬೇತಿ ನಡೆದರೆ ಕಾಲೇಜಿನವರೆಗೆ ಅವಕಾಶ ಸಿಗುವುದು ಕನಸಿನ ಮಾತು.
7. ಸದ್ಯ ಕ್ರೀಡಾ ಹಬ್ ನಲ್ಲಿ ಕೇವಲ 14 ಕ್ರೀಡೆಗಳು ಮಾತ್ರ ತರಬೇತಿ
ಹೌದು ಮುಂದೆ ಇನ್ನೂ ಹೆಚ್ಚಿನ ಕ್ರೀಡೆಗಳಿಗೆ ತರಬೇತಿ ನಡೆಯಬಹುದು. ಆಗ ಕ್ರೀಡೆಗಾಗಿ ವಿಸ್ತರಿಸಬೇಕಾದ ಸಂದರ್ಭ ಬಂದೇ ಬರುತ್ತದೆ. ಆಗ ಎತ್ತಂಗಡಿಯಾಗುವುದು ಸಹ್ಯಾದ್ರಿ ಕಾಲೇಜು.
8. ಮ್ಯಾಚ್ ಫ್ಯಾಕ್ಟರಿಯ ಎಂಟು ಎಕರೆ ಜಾಗ ಕಾಲೇಜಿಗೆ ಕೊಟ್ಟು ಅಲ್ಲಿಗೆ ವಿದ್ಯಾರ್ಥಿ ಮತ್ತು ಅಧ್ಯಾಪಕರು ಹೋಗಿಬರಲು ಮೇಲ್ಸೇತುವೆ ನಿರ್ಮಾಣ ಮಾಡಿ ಕೊಡಲಾಗುವುದು.ಇದು ಸಹ ಕನಸಿನ ಮಾತು ಆ ಜಾಗ ಕೋರ್ಟಿನಲ್ಲಿದೆ. ಅರಣ್ಯ ಇಲಾಖೆಯ ಹಕ್ಕಿನಲ್ಲಿದೆ. ಇದನ್ನು ಬಿಡಿಸಿಕೊಡುವುದು ಕಷ್ಟಕರವಾದ ಮಾತು. ಅಲ್ಲದೆ ಸೇತುವೆ ಮೇಲೆ ಹತ್ತಿ ಇಳಿಯಲಾಗದ ಅಧ್ಯಾಪಕರು, ವಿದ್ಯಾರ್ಥಿಗಳು ವಾಹನದಟ್ಟಣೆಯಲ್ಲಿ ರಸ್ತೆ ದಾಟುವಾಗ ಅಪಘಾತಗಳು ಸಂಭವಿಸುತ್ತದೆ.
ಇಂತಹ ನೂರಾರು ಕಾರಣಗಳನ್ನು ಕೊಡಬಹುದು. ‘‘ಸಾಯಿ ಖೇಲೊ ಇಂಡಿಯಾ ಹಬ್ ’’ ಸ್ಥಾಪನೆಗೆ ನಾವುಗಳು ವಿರೋಧಿಗಳಲ್ಲ. ಅದು ಪ್ರತ್ಯೇಕ ಸ್ಥಳದಲ್ಲಿ ತಲೆಯೆತ್ತಿ ಶಿವಮೊಗ್ಗದಲ್ಲಿ ವಿಜೃಂಭಿಸಬೇಕು. ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ಸಿನ ಉಸಿರುಗಟ್ಟಿದ ಸ್ಥಳದಲ್ಲಿ ಅಲ್ಲ. ಜಿಲ್ಲಾಡಳಿತ, ವಿಶ್ವವಿದ್ಯಾನಿಲಯ ಆಡಳಿತ, ಮಾನ್ಯ ಸಂಸದರು ಈ ನಿಟ್ಟಿನಲ್ಲಿ ಯೋಚಿಸಬೇಕೆಂದು ವಿನಂತಿ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


