Connect with us

ದಿನದ ಸುದ್ದಿ

ಆಲೂಗಡ್ಡೆ ಬೆಳೆ ಉಳಿಸಲು ಜನಾಂದೋಲನ

Published

on

ಸುದ್ದಿದಿನ, ಹಾಸನ : ಹಾಸನದ ಅಸ್ಮಿತೆಯಾಗಿರುವ ಆಲೂಗಡ್ಡೆ ಬೆಳೆಯನ್ನು ಉಳಿಸಲು ಜನಾಂದೋಲನ ನಡೆಸಲು ಆಲೂಗಡ್ಡೆ ಬೆಳೆಗಾರರ ದುಂಡುಮೇಜಿನ ಸಭೆ ನಿರ್ಣಯಿಸಿದೆ.

ಹಾಸನದ ಮಾನವಬಂಧುತ್ವ ವೇದಿಕೆ ಕಚೇರಿಯಲ್ಲಿ ಸೋಮವಾರ ಕರ್ನಾಟಕ ಪ್ರಾಂತ ರೈತಸಂಘ, ಆಲೂಗಡ್ಡೆ ಬೆಳೆಗಾರರ ಹೋರಾಟ ಸಮಿತಿಯು ಆಯೋಜಿಸಿದ್ದ ಆಲೂಗಡ್ಡೆ ಬೆಳೆಗಾರರ ದುಂಡುಮೇಜಿನ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಂಡಿದೆ.

ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಪ್ರಮುಖವಾಗಿ ಹಾಸನ ತಾಲೂಕಿನಲ್ಲಿ ಬೆಳೆಯುವ ಆಲೂಗಡ್ಡೆಯು ತನ್ನ ವಿಶಿಷ್ಟ ರುಚಿಯಿಂದಾಗಿ ಚಿಪ್ಸ್ ಮಾಡಲು ಉತ್ತಮ ಎಂದು ಹೆಸರಾಗಿದೆ. ಕಳೆದ ಮೂವತ್ತು ನಲವತ್ತು ವರ್ಷಗಳಿಂದ ಸಾವಿರಾರು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿ ಆಲೂಗಡ್ಡೆಯನ್ನು ಬೆಳೆಯುತ್ತಿದ್ದಾರೆ.

2001-02ರಲ್ಲಿ ಸುಮಾರು 25,925 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದುದು 2010ರ ಹೊತ್ತಿಗೆ 45 ಸಾವಿರ ಹೆಕ್ಟೇರ್ ಸಮೀಪಕ್ಕೆ ಹೋಗಿತ್ತು. ಆದರೆ ಅದೇ ಬೆಳೆಯು ಈ ವರ್ಷಕ್ಕೆ 13 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಕುಸಿದಿದೆ. ಅಂದರೆ 31866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆಯುವುದನ್ನು ಕೈಬಿಡಲಾಗಿದೆ. ಇದರಿಂದ ಸರಿಸುಮಾರು 16 ಸಾವಿರ ರೈತ ಕುಟುಂಬಗಳು ಆಲೂಗಡ್ಡೆ ಬೆಳೆಯನ್ನು ಬೆಳೆಯುವುದನ್ನು ಕೈಬಿಟ್ಟಿವೆ. ಇದಕ್ಕೆ ಪ್ರಮುಖವಾಗಿ ಅಂಗಮಾರಿ ರೋಗ. ಅತಿವೃಷ್ಟಿ, ಅನಾವೃಷ್ಟಿ ಕಾರಣ ಎನ್ನಲಾಗುತ್ತಿದೆ.

ಜಿಲ್ಲೆಯ ಇಷ್ಟು ದೊಡ್ಡ ಪ್ರಮಾಣದ ರೈತರು ಪ್ರಮುಖ ವಾಣಿಜ್ಯ ಬೆಳೆಯಿಂದ ವಿಮುಖರಾಗುತ್ತಿರುವಾಗ ಇದನ್ನು ತಡೆಗಟ್ಟಿ ರೈತರನ್ನು ಸಂರಕ್ಷಿಸಲು ಬೇಕಾದ ಪ್ರಾಮಾಣಿಕವಾದ ವಿಶೇಷ ಪ್ಯಾಕೇಜ್ ವ್ಯವಸ್ಥೆಯನ್ನು ಸರ್ಕಾರ ಇರುವರೆಗೂ ಘೋಷಿಸಿಲ್ಲ. ಆದ್ದರಿಂದ ಜಿಲ್ಲಾಡಳಿತವು ಜಿಲ್ಲಾ ಉಸ್ತವಾರಿ ಸಚಿವರು, ಅಧಿಕಾರಿಗಳು, ಆಲೂಗಡ್ಡೆ ಬೆಳೆ ತಜ್ಞರು, ರೈತರು, ರೈತ ಮುಖಂಡರನ್ನೊಳಗೊಂಡ ಸಮಗ್ರ ಸಭೆಯನ್ನು ಕರೆಯಬೇಕು ಎಂದು ದುಂಡುಮೇಜಿನ ಸಭೆಯು ಆಗ್ರಹಿಸುತ್ತದೆ.

ದುಂಡುಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್.ನವೀನ್‍ಕುಮಾರ್ ವಹಿಸಿದ್ದರು. ರೈತ ಮುಖಂಡರಾದ ಕೊಟ್ಟೂರು ಶ್ರೀನಿವಾಸ್, ಪತ್ರಕರ್ತರಾದ ಆರ್.ಪಿ.ವೆಂಕಟೇಶ್‍ಮೂರ್ತಿ, ಚಲಂ ಹಾಡ್ಲಹಳ್ಳಿ, ಕಾರ್ಮಿಕ ಮುಖಂಡರಾದ ಧರ್ಮೇಶ್, ಮಾದಿಗ ದಂಡೋರ ಸಮಿತಿಯ ವಿಜಯ್‍ಕುಮಾರ್, ಮಹಾಂತಪ್ಪ, ಕೆಪಿಆರ್‍ಎಸ್ ಮುಖಂಡರಾದ ದೇವರಾಜು, ಪ್ರಕಾಶ್, ಗಿಡ್ಡೇಗೌಡ, ಲಕ್ಷ್ಮಣಗೌಡ, ಪರಮೇಶ್, ಮಂಜು, ನಂಜೇಗೌಡ, ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಮತ್ತಿತರರು ಭಾಗವಹಿಸಿದ್ದರು. ಕೆಪಿಆರ್‍ಎಸ್ ಜಿಲ್ಲಾ ಕಾರ್ಯದರ್ಶಿ ವಸಂತಕುಮಾರ್ ಸಭೆ ನಿರ್ವಹಿಸಿದರು.

ಹಕ್ಕೊತ್ತಾಯಗಳು

  1. ಜಿಲ್ಲೆಗೆ ಅಗತ್ಯವಿರುವಷ್ಟು ದೃಢೀಕರಿಸಿದ ಬಿತ್ತನೆ ಆಲೂಗಡ್ಡೆ ಬೀಜಗಳನ್ನು ಸರ್ಕಾರವೇ ಉಚಿತವಾಗಿ ವಿತರಿಸಬೇಕು.
  2. ಬೆಳೆಗೆ ತಗುಲುವ ಎಲ್ಲಾ ರೀತಿಯ ರೋಗಗಳನ್ನು ಪತ್ತೆಹಚ್ಚಿ ಅವುಗಳ ನಿವಾರಣೆಗೆ ಸೂಕ್ತ ಸಂಶೋಧನೆ ನಡೆಸಿ ಸರ್ಕಾರ ಉಚಿತವಾಗಿ ಕ್ರಿಮಿನಾಶಕಗಳನ್ನು ವಿತರಿಸಬೇಕು.
  3. ಬೆಳೆಯ ಗುಣಮಟ್ಟ ಮತ್ತು ಹೆಚ್ಚಿನ ಇಳುವರಿಯನ್ನು ತಂದುಕೊಡಲು ಪೂರಕವಾಗುವಂತೆ ಬೀಜಗಳ ಸಂಶೋದನೆ ನಡೆಸಬೇಕು ಮತ್ತು ಅದಕ್ಕೆ ಅಗತ್ಯವಿರುವ ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ನೀಡಬೇಕು.
  4. ಅತಿವೃಷ್ಟಿ ಅಥವಾ ಅನಾವೃಷ್ಟಿ, ರೋಗ ಇನ್ನಾವುದೇ ಕಾರಣಕ್ಕಾಗಿ ಬೆಳೆ ನಷ್ಟವಾದರೂ ಅದನ್ನು ಸರ್ಕಾರ ಭರಿಸಿಕೊಡಬೇಕು ಅದಕ್ಕಾಗಿ ಸರ್ಕಾರಿ ಸ್ವಾಮ್ಯದ ವಿಮಾಕಂಪನಿಗಳಿಂದ ಬೆಳೆವಿಮೆಯನ್ನು ಕಡ್ಡಾಯವಾಗಿ ಮಾಡಿಸಿ ಪ್ರೀಮಿಯಂ ಹಣವನ್ನು ಸರ್ಕಾರವೇ ಭರಿಸಬೇಕು.
  5. ಬೆಳೆಯನ್ನು ಮಾರಾಟಮಾಡಲು ಹಾಸನದ ಎಪಿಎಂಸಿಯಲ್ಲಿ ಸರ್ಕಾರವೇ ಖರೀದಿ ಕೇಂದ್ರಗಳನ್ನು ತೆರೆದು ಕೃಷಿ ತಜ್ಞ ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಉತ್ಪಾದನಾ ವೆಚ್ಚಕ್ಕೆ ಶೇ.50 ಲಾಭಾಂಶ ಸೇರಿಸಿ ಬೆಲೆ ನಿಗದಿ ಮಾಡಬೇಕು.
  6. ಆಲೂಗಡ್ಡೆಯನ್ನು ಮೌಲ್ಯವರ್ಧನೆ ಮಾಡುವ ಸಲುವಾಗಿ ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲಿ ಆಲೂಗಡ್ಡೆ ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಗಳನ್ನು ಸ್ಥಾಪಿಸಬೇಕು.

ಆಲೂಗಡ್ಡೆ ಅಲ್ಪಾವಧಿಯಲ್ಲಿ ಬೆಳೆಯುವ ಹಾಸನ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, 31 ಸಾವಿರ ಹೆಕ್ಟೇರ್ ಭೂಪ್ರದೇಶದಲ್ಲಿ ಆಲೂಗಡ್ಡೆ ಬೆಳೆ ಕುಸಿತವಾಗಿರುವುದು ಇದು ಜಿಲ್ಲೆಯ ಆರ್ಥಿಕ ಚಟುವಟಿಕೆಯ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ಇದುವರೆಗು ನೀಡುತ್ತಾ ಬಂದಿರುವ ಆಲೂಗಡ್ಡೆ ರೈತರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಗಮನಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಂಡು ರೈತರನ್ನು ಮತ್ತು ಕೃಷಿಯನ್ನು ಉಳಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ, ಆಲೂಗಡ್ಡೆ ಬೆಳೆಗಾರರ ಹೋರಾಟ ಸಮಿತಿಯು ಒತ್ತಾಯಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ19 hours ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ1 day ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ1 day ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ1 week ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

Trending