Connect with us

ದಿನದ ಸುದ್ದಿ

ಕುಡಚಿ ಶಾಸಕ ಪಿ. ರಾಜೀವ್ ಅವರಿಗೆ ಮಂತ್ರಿಸ್ಥಾನ ನೀಡದಿದ್ದರೆ ಉಗ್ರ ಹೋರಾಟ : ಬಂಜಾರ ಸಮುದಾಯ ರಾಜ್ಯಾಧ್ಯಕ್ಷೆ ಸವಿತಾ ಬಾಯಿ ಮಲ್ಲೇಶ ನಾಯ್ಕ ಎಚ್ಚರಿಕೆ

Published

on

ಸುದ್ದಿದಿನ, ಚಿತ್ರದುರ್ಗ : ಕುಡಚಿ ಶಾಸಕರಾದ ಪಿ. ರಾಜೀವ್ ಇವರಿಗೆ ಮಂತ್ರಿಸ್ಥಾನವನ್ನು ಕೊಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ನಮ್ಮಬಂಜಾರ ಸಮುದಾಯದಿಂದ ಉಗ್ರ ಹೋರಾಟವನ್ನು ಮಾಡಲಾಗುತ್ತದೆ ಎಂದು ರಾಜ್ಯ ಬಂಜಾರ ಸಮಾಜದ ಅಧ್ಯಕ್ಷರಾದ ಶ್ರೀಮತಿ ಸವಿತಾ ಬಾಯಿ, ಮಲ್ಲೇಶನಾಯ್ಕ (ಮಹಿಳಾ ಘಟಕ), ಅವರು ಎಚ್ಚರಿಕೆ ನೀಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಭಾಜಪ ಸರ್ಕಾರದವರು ನಿರ್ಲಕ್ಷಿಸಿ ತಮ್ಮ ಪುರಾತನ ಕಾಲದ ಜಾತಿಯತೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರವು ಮೇಲ್ದಾತಿಯ ಜನರಿಗೆ ತಮಗೆ ಬೇಕಾದ ಎಲ್ಲಾ ಖಾತೆಗಳನ್ನು ಕೊಟ್ಟು ನಮ್ಮ 3300 ತಾಂಡಗಳಲ್ಲಿ ಬಂಜಾರ ಜನಾಂಗದವರಿಗೆ ಕೇವಲ ಒಂದೇ ಒಂದು ಖಾತೆಯನ್ನು ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ 30 ರಿಂದ 35 ಲಕ್ಷ ಜನಗತಿಯಿದ್ದು ನಮ್ಮ ಜಾತಿಯ ಕೇವಲ ಒಬ್ಬರಿಗೆ ಮಾತ್ರ ತೂರಿಕೆಯ ರೀತಿಯಲ್ಲಿ ಮಂತ್ರಿ ಪದವಿಕೊಟ್ಟು ಉಳಿದಂತಹ ಕೇವಲ 3 ರಿಂದ 4 ಲಕ್ಷ ಜನಗತಿಯ ಮೇಲ್ದಾತಿಯವರಿಗೆ ಎರಡು ಮಂತ್ರಿ ಸ್ಥಾನವನ್ನು ಕೊಟ್ಟು ತಾರತಮ್ಯ ಮತ್ತು ಜಾತೀಯತೆಯನ್ನು ತೋರಿಸಿದ್ದಾರೆ ಎಂದರು.

ನಮ್ಮ ಹಿಂದುಳಿದ ಜನರಿಗೆ ಇನ್ನೊಂದು ಮಂತ್ರಿಸ್ಥಾನ ಕೊಟ್ಟು ತಮ್ಮ ಜಾತೀಯತೆ ಸಂಸ್ಕೃತಿಗೆ ಪರದೆ ಎಳೆಯಬೇಕು ಹಾಗೂ ನಮ್ಮ ಸಮಾಜಕ್ಕೆ ಸರಿಸಮನಾದ ಹಕ್ಕುಗಳನ್ನು ಕೊಡಬೇಕು ಎಂದು ಒತ್ತಾಯಿಸಿದರು‌.

ಹಿಂದಿನ ಸರ್ಕಾರ ನಮ್ಮ ತಾಂಡ, ಅಭಿವೃದ್ಧಿ ನಿಗಮಕ್ಕೆ 250 ರಿಂದ 500 ಕೋಟಿ ರೂಪಾಯಿಗಳನ್ನು ಅನುದಾನವಾಗಿ ನೀಡಿದ್ದರು. ಆದರೆ ಇಂದಿನ ಮೇಲ್ವಾತಿ ವರ್ಷದ ಬಿಜೆಪಿ ಸರ್ಕಾರ ಕೇವಲ 25 ಕೋಟಿ ಅನುದಾನ ನೀಡುತ್ತೇವೆಂದು ಹೇಳಿ ಇದುವರೆಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡಿರುರುವುದಿಲ್ಲ. ಹಾಗೂ ಅವರು ಬಿಡುಗಡೆ ಮಾಡುತ್ತೇವೆ ಎಂದು ಅನುದಾನವು ನಮ್ಮ ಕಛೇರಿಯ ಖರ್ಚು ವೆಚ್ಚಗಳಿಗೆ ಸಾಲುವುದಿಲ್ಲ. ಇನ್ನೂ ತಾಂಡ ಅಭಿವೃದ್ಧಿ ಕಷ್ಟ ಸಾಧ್ಯ ಹಾಗೂ ಇದು ಒಂದು ಕನಸೋ ಎನ್ನುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending