Connect with us

ದಿನದ ಸುದ್ದಿ

ದಾವಣಗೆರೆ | ಒಳಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ; ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ : ಸರ್ಕಾರಕ್ಕೆ ಎಚ್ಚರಿಕೆ

Published

on

ಸುದ್ದಿದಿನ,ದಾವಣಗೆರೆ ; ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಯದೇವ ವೃತ್ತ, ಅಶೋಕ ರಸ್ತೆ ಮಾರ್ಗವಾಗಿ ಗಾಂಧಿಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ಹಾಗೂ ಎನ್ ರುದ್ರಮುನಿಯವರು ಮಾತನಾಡಿ, ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.

ಮಾದಿಗ ಸಮುದಾಯವು ವೈಜ್ಞಾನಿಕ ಸ್ವರೂಪದ ಆಂತರಿಕ ಮೀಸಲಾತಿಗಾಗಿ ಕಳೆದ 30 ವರ್ಷಗಳಿಂದ ಪ್ರತಿಭಟನೆ ಮಾಡುತ್ತ ಕಾನೂನು ನಡೆಸುತ್ತ ಬಂದಿದ್ದಾರೆ. ಪರಿಣಾಮವಾಗಿ ಹೋರಾಟವನ್ನೂ ಈ ಹೋರಾಟದ ಸರ್ಕಾರ ನ್ಯಾ. ৯. ಜೆ. ಸದಾಶಿವ ಆಯೋಗ ರಚಿಸಿ ಅದರ ವರದಿಯನ್ನು ಪಡೆದಿದೆ. ತದನಂತರ ಸರ್ಕಾರ ಒಳ ಮೀಸಲಾತಿ ಕುರಿತು ಸಂಪುಟದ ಉಪ ಸಮಿತಿಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು.

ವೈಜ್ಞಾನಿಕ ದತ್ತಾಂಶಗಳ ಆಧಾರದ ಮೇಲೆ ಒಳಮೀಸಲಾತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಸದರಿ ದತ್ತಾಂಶಗಳು ನ್ಯಾ. ಎ.ಜೆ. ಸದಾಶಿವ ಆಯೋಗ, ಕಾಂತರಾಜು ವರದಿ, ನ್ಯಾ. ನಾಗಮೋಹನದಾಸ್ ಆಯೋಗ ಮತ್ತು ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿಯ ವರದಿಗಳಲ್ಲಿ ಲಭ್ಯವಿವೆ. ಆದ್ದರಿಂದ ಸರ್ಕಾರ ಇನ್ನೂ ಹೆಚ್ಚಿನ ವಿಳಂಬ ತೋರದೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎ.ಡಿ. ಈಶ್ವರಪ್ಪ, ಹೊನ್ನಾಳಿ, ಕೆ.ಎಸ್ ಗೋವಿಂದರಾಜ್, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಹಾಗೂ ಮುಖಂಡರುಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending