ದಿನದ ಸುದ್ದಿ
SC-ST ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:ಗದಗ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂತಿಮ ವರ್ಷದ ಕಾನೂನು ಪದವಿ ಅಂಕಪಟ್ಟಿ, ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಣಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಆಗಸ್ಟ್ 1 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243