ದಿನದ ಸುದ್ದಿ

ಪ.ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ | ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಕ್ರಮ

Published

on

ಸುದ್ದಿದಿನ,ದಾವಣಗೆರೆ :ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಮುಖವಾಗಿ ದಲಿತರಿಗೆ ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ದ ಕ್ರಮ, ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳು, ಈ ಸಭೆ ನಡೆದು 2 ವರ್ಷಗಳಾಗಿದ್ದು ನಾನು ಜಿಲ್ಲಾಧಿಕಾರಿಯಾಗಿ ಬಂದ ನಂತರ ಮೊದಲ ಸಭೆ
ಇದಾಗಿದೆ. ತಮ್ಮ ಕುಂದು ಕೊರತೆಗಳನ್ನು ಮುಕ್ತವಾಗಿ ತಿಳಿಸಿ. ನಾನೂ ಸೇರಿದಂತೆ ಅಧಿಕಾರಿಗಳ ತಂಡದಿಂದ ತಮ್ಮ ಮನವಿಗಳನ್ನು ಸಹಾನುಭೂತಿಯಿಂದ ಪರಿಗಣಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version